AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs DC Prediction Playing XI IPL 2022: ಧೋನಿ ಪಡೆಗೆ ಡೆಲ್ಲಿ ಹುಡುಗರ ಚಾಲೆಂಜ್: ಪ್ಲೇಯಿಂಗ್ 11 ಹೀಗಿರಲಿದೆ

CSK vs DC Prediction Playing XI: ಡೆಲ್ಲಿ ಕ್ಯಾಪಿಟಲ್ಸ್​ ತಂಡವು ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿತ್ತು. ಈ ಪಂದ್ಯದಲ್ಲಿ ಆರಂಭಿಕ ಆಟಗಾರ ಪೃಥ್ವಿ ಶಾ ಬದಲಿಗೆ ಮನ್‌ದೀಪ್ ಸಿಂಗ್ ಅವರನ್ನು ಆಡಿಸಲಾಗಿತ್ತು.

CSK vs DC Prediction Playing XI IPL 2022: ಧೋನಿ ಪಡೆಗೆ ಡೆಲ್ಲಿ ಹುಡುಗರ ಚಾಲೆಂಜ್: ಪ್ಲೇಯಿಂಗ್ 11 ಹೀಗಿರಲಿದೆ
CSK vs DC
TV9 Web
| Edited By: |

Updated on: May 07, 2022 | 7:48 PM

Share

ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಇನ್ನೂ ಸಹ ಸಂಪೂರ್ಣವಾಗಿ ಹೊರಬಿದ್ದಿಲ್ಲ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಸಿಎಸ್​ಕೆ ತಂಡವು ಪ್ಲೇಆಫ್ ತಲುಪಲು ಮುಂದಿನ ಪಂದ್ಯಗಳು ನಿರ್ಣಾಯಕ. ಉಳಿದ ನಾಲ್ಕು ಪಂದ್ಯಗಳನ್ನು ಗೆಲ್ಲುವ ಮೂಲಕ ನೆಟ್​ ರನ್ ರೇಟ್​ ಮೂಲಕ ಪ್ಲೇಆಫ್ ಪ್ರವೇಶಿಸುವ ಇರಾದೆಯಲ್ಲಿದೆ ಸಿಎಸ್​ಕೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಆಡಲಿದೆ. ಇಲ್ಲಿ ಡೆಲ್ಲಿ ತಂಡಕ್ಕೂ ಕೂಡ ಸಿಎಸ್​ಕೆ ವಿರುದ್ದದ ಪಂದ್ಯ ಬಹಳ ಮುಖ್ಯ. ಹೀಗಾಗಿ ಉಭಯ ತಂಡಗಳು ಪ್ಲೇಆಫ್ ರೇಸ್​ನಲ್ಲಿ ಉಳಿಯಲು ಭರ್ಜರಿ ಪೈಪೋಟಿ ನಡೆಸಲಿದೆ. ಹೀಗಾಗಿ ಉಭಯ ತಂಡಗಳೂ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ.

ಡೆಲ್ಲಿ ಕ್ಯಾಪಿಟಲ್ಸ್​ ತಂಡವು ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿತ್ತು. ಈ ಪಂದ್ಯದಲ್ಲಿ ಆರಂಭಿಕ ಆಟಗಾರ ಪೃಥ್ವಿ ಶಾ ಬದಲಿಗೆ ಮನ್‌ದೀಪ್ ಸಿಂಗ್ ಅವರನ್ನು ಆಡಿಸಲಾಗಿತ್ತು. ಆದರೆ ಮನ್‌ದೀಪ್ ಮೊದಲ ಓವರ್‌ನಲ್ಲಿ ಖಾತೆ ತೆರೆಯದೆ ಔಟಾದರು. ಹೀಗಿರುವಾಗ ಪೃಥ್ವಿ ಶಾ ಫಿಟ್ ಆಗಿದ್ದರೆ ಮತ್ತೆ ತಂಡಕ್ಕೆ ಮರಳುವುದು ನಿಶ್ಚಿತ. ಹಾಗೆಯೇ ಅಕ್ಷರ್ ಪಟೇಲ್ ತಂಡಕ್ಕೆ ಮರಳಿದರೆ ರಿಪ್ಪಲ್ ಪಟೇಲ್ ತಂಡದಿಂದ ಹೊರಬೀಳಲಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡವು ಡ್ವೇನ್ ಬ್ರಾವೋ ಫಿಟ್​ನೆಸ್ ಅನ್ನು ಎದುರು ನೋಡುತ್ತಿದೆ. ಐಪಿಎಲ್‌ನ ಅತ್ಯಂತ ಯಶಸ್ವಿ ಬೌಲರ್ ಆಗಿರುವ ಬ್ರಾವೋ ಗಾಯದ ಸಮಸ್ಯೆಯಿಂದಾಗಿ ಕೊನೆಯ ಎರಡು ಪಂದ್ಯಗಳನ್ನು ಆಡಿರಲಿಲ್ಲ. ಹೀಗಾಗಿ ಬ್ರಾವೊ ಕೂಡ ಡೆಲ್ಲಿ ವಿರುದ್ದ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿರಲಿದೆ.

CSK ಸಂಭಾವ್ಯ ಪ್ಲೇಯಿಂಗ್ 11: ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರವೀಂದ್ರ ಜಡೇಜಾ, ರಾಬಿನ್ ಉತ್ತಪ್ಪ, ಅಂಬಾಟಿ ರಾಯುಡು, ಮೊಯಿನ್ ಅಲಿ, ಡ್ವೇನ್ ಪ್ರಿಟೋರಿಯಸ್, ಡ್ವೇನ್ ಬ್ರಾವೋ, ಮುಖೇಶ್ ಚೌಧರಿ, ಮಹೇಷ ತಿಕ್ಷಣ

ಡಿಸಿ: ರಿಷಭ್ ಪಂತ್ (ನಾಯಕ), ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಅನ್ರಿಕ್ ನೋಕಿಯಾ

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ