ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಇನ್ನೂ ಸಹ ಸಂಪೂರ್ಣವಾಗಿ ಹೊರಬಿದ್ದಿಲ್ಲ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಸಿಎಸ್ಕೆ ತಂಡವು ಪ್ಲೇಆಫ್ ತಲುಪಲು ಮುಂದಿನ ಪಂದ್ಯಗಳು ನಿರ್ಣಾಯಕ. ಉಳಿದ ನಾಲ್ಕು ಪಂದ್ಯಗಳನ್ನು ಗೆಲ್ಲುವ ಮೂಲಕ ನೆಟ್ ರನ್ ರೇಟ್ ಮೂಲಕ ಪ್ಲೇಆಫ್ ಪ್ರವೇಶಿಸುವ ಇರಾದೆಯಲ್ಲಿದೆ ಸಿಎಸ್ಕೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಆಡಲಿದೆ. ಇಲ್ಲಿ ಡೆಲ್ಲಿ ತಂಡಕ್ಕೂ ಕೂಡ ಸಿಎಸ್ಕೆ ವಿರುದ್ದದ ಪಂದ್ಯ ಬಹಳ ಮುಖ್ಯ. ಹೀಗಾಗಿ ಉಭಯ ತಂಡಗಳು ಪ್ಲೇಆಫ್ ರೇಸ್ನಲ್ಲಿ ಉಳಿಯಲು ಭರ್ಜರಿ ಪೈಪೋಟಿ ನಡೆಸಲಿದೆ. ಹೀಗಾಗಿ ಉಭಯ ತಂಡಗಳೂ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿತ್ತು. ಈ ಪಂದ್ಯದಲ್ಲಿ ಆರಂಭಿಕ ಆಟಗಾರ ಪೃಥ್ವಿ ಶಾ ಬದಲಿಗೆ ಮನ್‌ದೀಪ್ ಸಿಂಗ್ ಅವರನ್ನು ಆಡಿಸಲಾಗಿತ್ತು. ಆದರೆ ಮನ್‌ದೀಪ್ ಮೊದಲ ಓವರ್‌ನಲ್ಲಿ ಖಾತೆ ತೆರೆಯದೆ ಔಟಾದರು. ಹೀಗಿರುವಾಗ ಪೃಥ್ವಿ ಶಾ ಫಿಟ್ ಆಗಿದ್ದರೆ ಮತ್ತೆ ತಂಡಕ್ಕೆ ಮರಳುವುದು ನಿಶ್ಚಿತ. ಹಾಗೆಯೇ ಅಕ್ಷರ್ ಪಟೇಲ್ ತಂಡಕ್ಕೆ ಮರಳಿದರೆ ರಿಪ್ಪಲ್ ಪಟೇಲ್ ತಂಡದಿಂದ ಹೊರಬೀಳಲಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡವು ಡ್ವೇನ್ ಬ್ರಾವೋ ಫಿಟ್ನೆಸ್ ಅನ್ನು ಎದುರು ನೋಡುತ್ತಿದೆ. ಐಪಿಎಲ್‌ನ ಅತ್ಯಂತ ಯಶಸ್ವಿ ಬೌಲರ್ ಆಗಿರುವ ಬ್ರಾವೋ ಗಾಯದ ಸಮಸ್ಯೆಯಿಂದಾಗಿ ಕೊನೆಯ ಎರಡು ಪಂದ್ಯಗಳನ್ನು ಆಡಿರಲಿಲ್ಲ. ಹೀಗಾಗಿ ಬ್ರಾವೊ ಕೂಡ ಡೆಲ್ಲಿ ವಿರುದ್ದ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿರಲಿದೆ.
CSK ಸಂಭಾವ್ಯ ಪ್ಲೇಯಿಂಗ್ 11: ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರವೀಂದ್ರ ಜಡೇಜಾ, ರಾಬಿನ್ ಉತ್ತಪ್ಪ, ಅಂಬಾಟಿ ರಾಯುಡು, ಮೊಯಿನ್ ಅಲಿ, ಡ್ವೇನ್ ಪ್ರಿಟೋರಿಯಸ್, ಡ್ವೇನ್ ಬ್ರಾವೋ, ಮುಖೇಶ್ ಚೌಧರಿ, ಮಹೇಷ ತಿಕ್ಷಣ
ಡಿಸಿ: ರಿಷಭ್ ಪಂತ್ (ನಾಯಕ), ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಅನ್ರಿಕ್ ನೋಕಿಯಾ
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.