CSK Vs GT Final Weather Forecast: ಸೋಮವಾರವೂ ಅಹಮದಾಬಾದ್​ನಲ್ಲಿ ಮಳೆಯಾಗುತ್ತಾ? ಇಲ್ಲಿದೆ ಹವಾಮಾನ ವರದಿ

CSK Vs GT Final Weather Forecast: ಭಾರತೀಯ ಹವಾಮಾನ ಇಲಾಖೆಯು ಸೋಮವಾರ, ಮೇ 29 ರಂದು ಲಘು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

CSK Vs GT Final Weather Forecast: ಸೋಮವಾರವೂ ಅಹಮದಾಬಾದ್​ನಲ್ಲಿ ಮಳೆಯಾಗುತ್ತಾ? ಇಲ್ಲಿದೆ ಹವಾಮಾನ ವರದಿ
ಅಹಮದಾಬಾದ್ ಹವಾಮಾನ ವರದಿ
Follow us
ಪೃಥ್ವಿಶಂಕರ
|

Updated on: May 28, 2023 | 11:46 PM

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ (Gujarat Titans vs Chennai Super Kings) ನಡುವೆ  ನಡೆಯಬೇಕಿದ್ದ ಫೈನಲ್ ಪಂದ್ಯ ಮಳೆಯಿಂದಾಗಿ ಇಂದು ನಡೆಯಲಿಲ್ಲ. ಈ ಪಂದ್ಯವು ಈಗ ಮೀಸಲು ದಿನ ಅಂದರೆ ಸೋಮವಾರದಂದು ನಡೆಯಲಿದೆ. ಪಂದ್ಯ ಆರಂಭಕ್ಕೂ ಮುನ್ನ ಸುರಿಯಲಾರಂಭಿಸಿದ ಮಳೆ ರಾತ್ರಿ 11 ಗಂಟೆಯಾದರೂ ನಿಲ್ಲಲಿಲ್ಲ. ಹೀಗಾಗಿ ಅಂಪೈರ್‌ಗಳು ಅಂತಿಮ ಪಂದ್ಯವನ್ನು ಮುಂದೂಡಿ ಸೋಮವಾರ ನಡೆಸಲು ತೀರ್ಮಾನಿಸಿದರು. ನಿಗದಿಯಂತೆ ಫೈನಲ್ ಪಂದ್ಯ ನಾಳೆಯೂ ರಾತ್ರಿ 7.30ಕ್ಕೆ ಆರಂಭವಾಗಲಿದೆ. ಎರಡು ದಿನಗಳ ಹಿಂದೆ ಗುಜರಾತ್ ಮತ್ತು ಮುಂಬೈ (Gujarat Titans vs Mumbai Indians) ನಡುವೆ ನಡೆದ ಎರಡನೇ ಕ್ವಾಲಿಫೈಯರ್ ಪಂದ್ಯದಂತೆ, ಇಂದು ಕೂಡ 6 ಗಂಟೆಯ ನಂತರ ಇದ್ದಕ್ಕಿದ್ದಂತೆ ಮಳೆ ಸುರಿಯಲಾರಂಭಿಸಿತು. ಆದರೆ ಎರಡನೇ ಕ್ವಾಲಿಫೈಯರ್ ಪಂದ್ಯದ ದಿನ ಸ್ವಲ್ಪ ಸಮಯದ ನಂತರ ಮಳೆ ನಿಂತಿದ್ದರಿಂದ ಪಂದ್ಯವನ್ನು ಆರಂಭಿಸಲಾಗಿತ್ತು. ಆದರೆ ಇಂದು ಆ ರೀತಿಯ ಯೋಚನೆಗೆ ವರುಣ ಕೊಂಚವೂ ಅವಕಾಶ ನೀಡಲಿಲ್ಲ. ಹೀಗಾಗಿ ಪಂದ್ಯವನ್ನು ನಿಲ್ಲಿಸಬೇಕಾಗಿ ಬಂತು. ಇದೀಗ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದ್ದು, ಸೋಮವಾರವೂ ಇಂದಿನಂತೆ ಮಳೆ ಸುರಿಯುತ್ತಾ ಎಂಬ ಪ್ರಶ್ನೆ ಎಲ್ಲರನ್ನೂ ಕಾಡಲಾರಂಭಿಸಿದೆ.

ಅಭಿಮಾನಿಗಳಿಗೆ ಸಿಹಿ ಸುದ್ದಿ

ಆದರೆ ಸದ್ಯಕ್ಕೆ ಲಭ್ಯವಿರುವ ಮಾಹಿತಿ ಪ್ರಕಾರ ಮೇ 29 ರಂದು, ಅಂದರೆ ನಾಳೆ ಅಹಮದಾಬಾದ್​ನಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಎಂಬುದು ತಿಳಿದುಬಂದಿದೆ. ಹೀಗಾಗಿ ಅಭಿಮಾನಿಗಳು ನಿರಾಳದಿಂದ ಫೈನಲ್ ಪಂದ್ಯವನ್ನು ಯಾವುದೇ ಅಡೆತಡೆಗಳಿಲ್ಲದೆ ವೀಕ್ಷಿಸಬಹುದಾಗಿದೆ. ಹವಾಮಾನ ಪೋರ್ಟಲ್ ಅಕ್ಯುವೆದರ್ ಪ್ರಕಾರ, ನಾಳೆ ಆಟದ ಸಮಯದಲ್ಲಿ ಮಳೆಯಾಗುವ ಸಂಭವನೀಯತೆ ತೀರ ಕಡಿಮೆ ಎಂದು ಹೇಳಲಾಗಿದೆ.

CSK vs GT IPL 2023 Final: ‘ಹೆದರುವುದಿಲ್ಲ’; ಫೈನಲ್​ಗೂ ಮುನ್ನ ಚೆನ್ನೈ ಕೋಚ್ ಹೇಳಿದ್ದೇನು ಗೊತ್ತಾ?

ಪಂದ್ಯದ ಸಮಯದಲ್ಲಿ ಮಳೆಯಾಗುವುದಿಲ್ಲ

ವರದಿಯ ಪ್ರಕಾರ, ಅಕ್ಯುವೆದರ್ ಹವಾಮಾನ ಮುನ್ಸೂಚನೆ ವರದಿ ಪ್ರಕಾರ, ಸೋಮವಾರ ಸಂಜೆ ಕೇವಲ 3 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆಯಿದೆ. ಆದಾಗ್ಯೂ, ಮೀಸಲು ದಿನದಂದು ಸಹ ಮೋಡ ಕವಿದ ವಾತಾವರಣ ಇರುತ್ತದೆ ಎಂದು ವರದಿ ಹೇಳಿದೆ. ಇನ್ನು ಭಾರತೀಯ ಹವಾಮಾನ ಇಲಾಖೆಯು ಸೋಮವಾರ, ಮೇ 29 ರಂದು ಲಘು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ಒಂದು ವೇಳೆ ಮಳೆಯಾದರೆ..?

ಈಗ ಮೀಸಲು ದಿನವೂ ಮಳೆಯಾದರೆ ಹೇಗೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಐಪಿಎಲ್ ಫೈನಲ್ ನಿಯಮಗಳ ಪ್ರಕಾರ, ಮೀಸಲು ದಿನದಂದು 3 ಗಂಟೆ 20 ನಿಮಿಷಗಳ ನಿಗದಿತ ಸಮಯದ ಜೊತೆಗೆ 120 ನಿಮಿಷಗಳ ಸಮಯವಿರುತ್ತದೆ. ಅಂದರೆ, ಮೀಸಲು ದಿನವೂ ರಾತ್ರಿ 12.06 ರವರೆಗೆ ತಲಾ 5 ಓವರ್‌ಗಳ ಪಂದ್ಯವನ್ನ ಆಡಿಸಲು ಅವಕಾಶವಿರುತ್ತದೆ. ಅದು ಸಾಧ್ಯವಾಗದಿದ್ದರೆ ಸೂಪರ್ ಓವರ್‌ ಮೂಲಕ ವಿಜೇತರನ್ನು ನಿರ್ಧರಿಸಲಾಗುತ್ತದೆ. ಅದೂ ಸಾಧ್ಯವಾಗದಿದ್ದರೆ ಲೀಗ್ ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಗುಜರಾತ್ ತಂಡವನ್ನು ವಿಜಯಿ ಎಂದು ಘೋಷಿಸಲಾಗುತ್ತದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ