IPL Final Reserve Day: ಇಂದು ಮೀಸಲು ದಿನ ಕೂಡ ಮಳೆ ಬಂದರೆ ಏನಾಗಲಿದೆ ಫೈನಲ್?: ಚಾಂಪಿಯನ್ ಯಾರು?, ಇಲ್ಲಿದೆ ಮಾಹಿತಿ

CSK vs GT, IPL 2023 Final: 16 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಫೈನಲ್ ಪಂದ್ಯ ಮೀಸಲು ದಿನದಂದು ನಡೆಯುತ್ತಿರುವುದು ಇದೇ ಪ್ರಥಮ ಬಾರಿ. ಹಾಗಾದರೆ ಸಿಎಸ್​ಕೆ ಗುಜರಾತ್ ಮೀಸಲು ದಿನದ ಪಂದ್ಯಕ್ಕೂ ಮಳೆ ಬಂದರೆ ಏನಾಗಲಿದೆ?.

IPL Final Reserve Day: ಇಂದು ಮೀಸಲು ದಿನ ಕೂಡ ಮಳೆ ಬಂದರೆ ಏನಾಗಲಿದೆ ಫೈನಲ್?: ಚಾಂಪಿಯನ್ ಯಾರು?, ಇಲ್ಲಿದೆ ಮಾಹಿತಿ
CSK vs GT IPL Final Rain
Follow us
Vinay Bhat
|

Updated on: May 29, 2023 | 7:53 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ (CSK vs GT) ನಡುವಣ ಫೈನಲ್ ಪಂದ್ಯ ಮಳೆಗೆ ಕೊಚ್ಚಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ರಣಭೀಕರ ಮಳೆಗೆ (Rain) ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ. ಸದ್ಯ ಪಂದ್ಯವನ್ನು ಮೀಸಲು ದಿನವಾದ ಇಂದು ಸೋಮವಾರಕ್ಕೆ ಮುಂದೂಡಲಾಗಿದೆ. ರೋಚಕ ಕಾದಾಟ ವೀಕ್ಷಿಸಲು ಭಾನುವಾರ ಬಂದಿದ್ದ 1,32,000 ಪ್ರೇಕ್ಷಕರು ನಿರಾಸೆ ಅನುಭವಿಸಿದರು. ವಿಶೇಷ ಎಂದರೆ 16 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಫೈನಲ್ (IPL Final) ಪಂದ್ಯ ಮೀಸಲು ದಿನದಂದು ನಡೆಯುತ್ತಿರುವುದು ಇದೇ ಪ್ರಥಮ ಬಾರಿ.

ಭಾನುವಾರ ರಾತ್ರಿ 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಸಂಜೆ 6.30ರ ವೇಳೆಗೆ ಮಳೆರಾಯನ ಆಗಮನವಾಯಿತು. ಮೈದಾನ ಸಿಬ್ಬಂದಿಗಳು ಪಿಚ್‌ಗಳಿಗೆ ಹೊದಿಕೆ ಹಾಕಿದರು. 7 ಗಂಟೆ ಹೊತ್ತಿಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯ ಆರ್ಭಟ ಹೆಚ್ಚಿದ್ದರಿಂದ ಕ್ರೀಡಾಂಗಣದಲ್ಲಿ ನೀರು ಹರಿಯಿತು. ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಅಭಿಮಾನಿಗಳು ಮಳೆಯಿಂದ ರಕ್ಷಿಸಿಕೊಳ್ಳಲು ಕಷ್ಟ ಪಡುತ್ತಿರುವುದು ಕಂಡುಬಂತು. ರಾತ್ರಿ 8.30 ಹೊತ್ತಿಗೆ ಮಳೆ ನಿಂತಿತು. ಅಂಪೈರ್‌ಗಳು ಮೈದಾನ ಪರಿಶೀಲಿಸಿ ಟಾಸ್ ಮಾಡುವ ನಿರ್ಧಾರ ತೆಗೆದುಕೊಂಡರು. ಇನ್ನೇನು ಟಾಸ್ ನಡೆಯುತ್ತೆ ಎಂಬೊತ್ತಿಗೆ ಪುನಃ ಮಳೆ ಸುರಿಯಲಾರಂಭಿಸಿತು.

IPL 2023 Final: ಫೈನಲ್ ಪಂದ್ಯಕ್ಕೂ ಮುನ್ನ ನಿವೃತ್ತಿ ಘೋಷಿಸಿದ CSK ಆಟಗಾರ

ಇದನ್ನೂ ಓದಿ
Image
CSK vs GT, IPL 2023 Rain: ರಣಭೀಕರ ಮಳೆಗೆ ತತ್ತರಿಸಿದ ನರೇಂದ್ರ ಮೋದಿ ಸ್ಟೇಡಿಯಂ: ಇಂದುಕೂಡ ಫೈನಲ್ ಅನುಮಾನ
Image
IPL 2023 Final: ಐಪಿಎಲ್ ಫೈನಲ್ ಫಿಕ್ಸ್? CSK ರನ್ನರ್ ಅಪ್..?
Image
CSK Vs GT Final Weather Forecast: ಸೋಮವಾರವೂ ಅಹಮದಾಬಾದ್​ನಲ್ಲಿ ಮಳೆಯಾಗುತ್ತಾ? ಇಲ್ಲಿದೆ ಹವಾಮಾನ ವರದಿ
Image
IPL 2023 Final CSK vs GT: ಐಪಿಎಲ್ ಫೈನಲ್ ಪಂದ್ಯ ಸೋಮವಾರಕ್ಕೆ ಮುಂದೂಡಿಕೆ

ರಾತ್ರಿ ಸುಮಾರು 10.30ರವರೆಗೂ ಜೋರಾಗಿ ಮಳೆ ಮುಂದುವರಿಯಿತು. ಪಿಚ್‌ಗೆ ಹಾಕಿದ್ದ ಹೊದಿಕೆ ಮತ್ತು ಔಟ್‌ಫೀಲ್ಡ್‌ನಲ್ಲಿ ಸಾಕಷ್ಟು ನೀರು ನಿಂತಿತು. ಅಂತಿಮವಾಗಿ ರಾತ್ರಿ 10.55ರ ವೇಳೆಗೆ ಮ್ಯಾಚ್‌ ರೆಫರಿ ಜಾವಗಲ್‌ ಶ್ರೀನಾಥ್‌ ಮತ್ತು ಅಂಪೈರ್‌ಗಳು ಮಾತುಕತೆ ನಡೆಸಿ ಪಂದ್ಯವನ್ನು ಇಂದು ಸೋಮವಾರಕ್ಕೆ ಮುಂದೂಡಲು ನಿರ್ಧಾರ ಮಾಡಿದರು.

ಬೇಸರದ ಸಂಗತಿ ಎಂದರೆ ಮೀಸಲು ದಿನವಾದ ಇಂದುಕೂಡ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸೋಮವಾರ ಸಂಜೆ ವೇಳೆಗೆ ಮಳೆ ಸುರಿಯಲಿದೆಯಂತೆ. ದಿನಪೂರ್ತಿ ಮೋಡ ಕವಿದ ವಾತಾವರಣ ಇರುತ್ತದೆ ಎಂದು ವರದಿ ಹೇಳಿದೆ. ದೇಶದ ಪ್ರಸ್ತುತ ಹವಾಮಾನ ವರದಿ ಗಮನಿಸಿದರೆ, ಯಾವುದೇ ಸಮಯದಲ್ಲಿ ಮಳೆಯಾಗಬಹುದು. ಜೋರಾಗಿ ಮಳೆ ಸುರಿದು 5 ಓವರ್​ಗಳ ಪಂದ್ಯ ಅಥವಾ ಸೂಪರ್ ಓವರ್​ನ ಪಂದ್ಯ ಕೂಡ ನಡೆಸಲು ಸಾಧ್ಯವಾಗಲಿಲ್ಲ ಎಂದಾದರೆ ಲೀಗ್ ಹಂತದ ನಂತರ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡ ವಿಜಯಶಾಲಿಯಾಗಲಿದೆ. ಈ ಮೂಲಕ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್​ಗೆ ಲಾಭವಾಗಲಿದೆ. ಐಪಿಎಲ್ ​2023 ಚಾಂಪಿಯನ್ ಪಟ್ಟ ಅಲಂಕರಿಸಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ