CSK vs PBKS Predicted Playing XI: ಸಿಎಸ್​ಕೆ vs ಪಂಜಾಬ್ ಕಿಂಗ್ಸ್​ ಸಂಭಾವ್ಯ ಪ್ಲೇಯಿಂಗ್ 11

CSK vs PBKS Predicted Playing XI: ಉಭಯ ತಂಡಗಳು ಇದುವರೆಗೆ 25 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಸಿಎಸ್‌ಕೆ 15 ಪಂದ್ಯಗಳನ್ನು ಗೆದ್ದಿದೆ. ಹಾಗೆಯೇ ಪಂಜಾಬ್ ತಂಡ 10 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇನ್ನು ಐಪಿಎಲ್ 2021 ರಲ್ಲಿ, ಎರಡೂ ತಂಡಗಳು ತಲಾ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದವು.

CSK vs PBKS Predicted Playing XI: ಸಿಎಸ್​ಕೆ vs ಪಂಜಾಬ್ ಕಿಂಗ್ಸ್​ ಸಂಭಾವ್ಯ ಪ್ಲೇಯಿಂಗ್ 11
CSK vs PBKS Predicted Playing XI
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 02, 2022 | 7:20 PM

ಭಾನುವಾರ (ಏಪ್ರಿಲ್ 3) ನಡೆಯಲಿರುವ ಐಪಿಎಲ್​ನ 10ನೇ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮೊದಲೆರಡು ಪಂದ್ಯಗಳಲ್ಲಿ ಸೋತಿರುವ ಸಿಎಸ್​ಕೆ ಈ ಪಂದ್ಯದಲ್ಲಿ ಗೆಲುವಿನ ನಿರೀಕ್ಷೆಯಲ್ಲಿದೆ. ಮತ್ತೊಂದೆಡೆ ಆಡಿರುವ 2 ಪಂದ್ಯಗಳಲ್ಲಿ ಒಂದು ಜಯ ಒಂದು ಸೋಲು ಕಂಡಿರುವ ಪಂಜಾಬ್ ಕಿಂಗ್ಸ್ ಗೆಲುವಿನ ಹಾದಿಗೆ ಮರಳುವ ವಿಶ್ವಾಸದಲ್ಲಿದೆ. ಹೀಗಾಗಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ಎದುರು ನೋಡಬಹುದು. ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ಗೆದ್ದರೆ ಸಿಎಸ್​ಕೆ ತಂಡವು ಅಂಕಪಟ್ಟಿಯಲ್ಲಿ ಮೇಲೆರುವ ಸಾಧ್ಯತೆಯಿದೆ.

ಸದ್ಯ ಅಂಕಪಟ್ಟಿಯಲ್ಲಿ ಸಿಎಸ್​ಕೆ ತಂಡವು 8ನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ 7ನೇ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯದ ಫಲಿತಾಂಶ ಕೂಡ ಅಂಕಪಟ್ಟಿಯಲ್ಲಿನ ಸ್ಥಾನ ಪಲ್ಲಟವನ್ನು ನಿರ್ಧರಿಸಲಿದೆ. ಇನ್ನು ಉಭಯ ತಂಡಗಳು ಇದುವರೆಗೆ 25 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಸಿಎಸ್‌ಕೆ 15 ಪಂದ್ಯಗಳನ್ನು ಗೆದ್ದಿದೆ. ಹಾಗೆಯೇ ಪಂಜಾಬ್ ತಂಡ 10 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇನ್ನು ಐಪಿಎಲ್ 2021 ರಲ್ಲಿ, ಎರಡೂ ತಂಡಗಳು ತಲಾ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದವು.

ಇನ್ನು ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪ್ಲೇಯಿಂಗ್ 11 ನಲ್ಲಿ ಬದಲಾವಣೆ ಕಂಡು ಬರಬಹುದು. ಏಕೆಂದರೆ ಮೊದಲೆರಡು ಪಂದ್ಯಗಳಲ್ಲಿ ಅವಕಾಶ ಪಡೆದ ರಾಜ್ ಬಾವಾ ವಿಫಲರಾಗಿದ್ದರು. ಹೀಗಾಗಿ ಅವರ ಬದಲಿಗೆ ಪ್ರಭ್​ಸಿಮ್ರಾನ್ ಸಿಂಗ್​ಗೆ ಚಾನ್ಸ್ ಸಿಗಬಹುದು. ಮತ್ತೊಂದೆಡೆ ಸಿಎಸ್​ಕೆ ತಂಡದಲ್ಲಿ ತುಷಾರ್ ದೇಶಪಾಂಡೆ ಬದಲಿಗೆ ಕೆಎಂ ಆಸಿಫ್ ಕಣಕ್ಕಿಳಿಯಬಹುದು. ಅದರಂತೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಇಲೆವೆನ್: ರುತುರಾಜ್ ಗಾಯಕ್‌ವಾಡ್, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ಧೋನಿ (ವಿಕೆಟ್ ಕೀಪರ್),ರವೀಂದ್ರ ಜಡೇಜಾ, ಡ್ವೈನ್ ಪ್ರಿಟೋರಿಯಸ್, ಡ್ವೇನ್ ಬ್ರಾವೋ, ಮುಕೇಶ್ ಚೌಧರಿ, ಕೆಎಂ ಆಸಿಫ್

ಪಂಜಾಬ್ ಕಿಂಗ್ಸ್ ಸಂಭಾವ್ಯ ಇಲೆವೆನ್: ಮಯಾಂಕ್ ಅಗರ್ವಾಲ್, ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್ಸ್ಟೋನ್, ಪ್ರಭ್​ಸಿಮ್ರಾನ್ ಸಿಂಗ್, ಶಾರುಖ್ ಖಾನ್, ಹರ್ಪ್ರೀತ್ ಬ್ರಾರ್, ಓಡಿಯನ್ ಸ್ಮಿತ್, ಕಗಿಸೊ ರಬಾಡ, ರಾಹುಲ್ ಚಹರ್, ಅರ್ಷದೀಪ್ ಸಿಂಗ್

ಪಂಜಾಬ್ ಕಿಂಗ್ಸ್ ತಂಡ: ಮಯಾಂಕ್ ಅಗರ್ವಾಲ್ (ನಾಯಕ), ಅರ್ಷದೀಪ್ ಸಿಂಗ್, ಶಿಖರ್ ಧವನ್, ಜಾನಿ ಬೈರ್‌ಸ್ಟೋವ್, ಶಾರುಖ್ ಖಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಓಡಿಯನ್ ಸ್ಮಿತ್, ರಾಜ್ ಬಾವಾ, ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್, ಜಿತೇಶ್ ಶರ್ಮಾ, ಪ್ರಭ್‌ಸಿಮ್ರಾನ್ ಸಿಂಗ್ ಇಶಾನ್ ಪೊರೆಲ್, ಸಂದೀಪ್ ಶರ್ಮಾ, ನಾಥನ್ ಎಲ್ಲಿಸ್, ಅಥರ್ವ್ ತಾಂಡೆ, ಪ್ರೇರಕ್ ಮಂಕಡ್, ಭಾನುಕಾ ರಾಜಪಕ್ಸೆ, ಬೆನ್ನಿ ಹೋವೆಲ್, ವೈಭವ್ ಅರೋರಾ, ಹೃತಿಕ್ ಚಟರ್ಜಿ, ಬಾಲ್ತೇಜ್ ಧಂಡಾ, ಅಂಶ್ ಪಟೇಲ್.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಮೊಯಿನ್ ಅಲಿ, ಅಂಬಟಿ ರಾಯುಡು, ರಾಬಿನ್ ಉತ್ತಪ್ಪ, ಡೆವೊನ್ ಕಾನ್ವೆ, ಡ್ವೇನ್ ಬ್ರಾವೊ, ಕ್ರಿಸ್ ಜೋರ್ಡಾನ್, ಶಿವಂ ದುಬೆ, ದೀಪಕ್ ಚಹರ್, ಸಿಮಾರ್ಜಿತ್ ಸಿಂಗ್, ಡ್ವೇನ್ ಪ್ರಿಟೋರಿಯಸ್, ಆಡಮ್ ಮಿಲ್ನ್, ಮಿಚೆಲ್ ಸ್ಯಾಂಟ್ನರ್, ರಾಜವರ್ಧನ್ ಹಂಗರಗೇಕರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ, ಶುಭಾಂಶು ಸೇನಾಪತಿ, ಕೆ.ಎಂ.ಆಸಿಫ್, ತುಷಾರ್ ದೇಶಪಾಂಡೆ, ಸಿ.ಹರಿ ನಿಶಾಂತ್, ಎನ್. ಜಗದೀಶ, ಕೆ. ಭಗತ್ ವರ್ಮಾ.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ