IPL 2026: ಮೊದಲ ಗೆಲುವಿನ ಹುಡುಕಾಟದಲ್ಲಿ ಸಿಎಸ್​ಕೆ; ತಂಡದಲ್ಲಿ ಏನೆಲ್ಲಾ ಬದಲಾವಣೆ?

IPL 2026, CSK vs PBKS Match 7 Preview: ಐಪಿಎಲ್ 2026 ರ 7ನೇ ಪಂದ್ಯದಲ್ಲಿ ಏಪ್ರಿಲ್ 3 ರಂದು ಚೆನ್ನೈನಲ್ಲಿ ಸಿಎಸ್‌ಕೆ, ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳಲು ಸಿಎಸ್‌ಕೆ ಸಜ್ಜಾಗಿದ್ದು, ಆರಂಭಿಕ ಸೋಲಿನಿಂದ ಒತ್ತಡದಲ್ಲಿದೆ. ಆದರೆ ಪಂಜಾಬ್ ಆತ್ಮವಿಶ್ವಾಸದಲ್ಲಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಚೆನ್ನೈ ಪಿಚ್ ಅನುಕೂಲಕರ. ಸಮಬಲದ ಇತಿಹಾಸದೊಂದಿಗೆ ಇದು ರೋಮಾಂಚಕ ಪಂದ್ಯವಾಗಲಿದೆ.

IPL 2026: ಮೊದಲ ಗೆಲುವಿನ ಹುಡುಕಾಟದಲ್ಲಿ ಸಿಎಸ್​ಕೆ; ತಂಡದಲ್ಲಿ ಏನೆಲ್ಲಾ ಬದಲಾವಣೆ?
Csk Team

Updated on: Apr 03, 2026 | 3:54 PM

ಐಪಿಎಲ್ 2026 (IPL 2026) ರ ಏಳನೇ ಪಂದ್ಯವು ಏಪ್ರಿಲ್ 3 ರ ಶುಕ್ರವಾರದಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ (CSK vs PBKS) ನಡುವೆ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಆರಂಭವಾಗಲಿದೆ. ಕಳೆದ ಆವೃತ್ತಿಯಲ್ಲಿ ಈ ಎರಡೂ ತಂಡಗಳ ನಡುವೆ ನಡೆದ 2 ಪಂದ್ಯಗಳನ್ನು ಪಂಜಾಬ್ ಕಿಂಗ್ಸ್ ಗೆದ್ದುಕೊಂಡಿದೆ. ಹೀಗಾಗಿ ಹಿಂದಿನ ಸೋಲುಗಳಿಗೆ ಸೇಡು ತೀರಿಸಿಕೊಳ್ಳಲು ಸಿಎಸ್​ಕೆ ಸಿದ್ಧವಾಗಿದೆ. ಆದಾಗ್ಯೂ ಈ ಆವೃತ್ತಿಯಲ್ಲಿ ಸಿಎಸ್​ಕೆ ತಂಡಕ್ಕೆ ಗೆಲುವಿನ ಆರಂಭ ಸಿಕ್ಕಿಲ್ಲ ಎಂಬುದು ತಂಡವನ್ನು ಒತ್ತಡಕ್ಕೆ ಸಿಲುಕಿಸಿದೆ. ಇತ್ತ ಪಂಜಾಬ್ ಮೊದಲ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದೆ. ಹೀಗಾಗಿ ಈ ಪಂದ್ಯವನ್ನು ಗೆಲ್ಲಲು ಸಿಎಸ್​ಕೆ ಸಾಕಷ್ಟು ಬೆವರು ಹರಿಸಬೇಕಾಗಿದೆ.

ಚಿದಂಬರಂ ಪಿಚ್ ವರದಿ

ಐಪಿಎಲ್ 2026 ರ 7 ನೇ ಪಂದ್ಯವು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಇಲ್ಲಿ ಮೇಲುಗೈ. ಈ ಕ್ರೀಡಾಂಗಣದಲ್ಲಿ ಆಡಿದ ಕಳೆದ 5 ಟಿ20 ಪಂದ್ಯಗಳಲ್ಲಿ, ಮೊದಲು ಬ್ಯಾಟಿಂಗ್ ಮಾಡಿದ ತಂಡವು ನಾಲ್ಕು ಪಂದ್ಯಗಳಲ್ಲಿ ಗೆದ್ದಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಳ್ಳಬಹುದು.

ಹೆಡ್-ಟು-ಹೆಡ್ ದಾಖಲೆ

ಉಭಯ ತಂಡಗಳ ನಡುವೆ ಇದುವರೆಗೆ 32 ಪಂದ್ಯಗಳು ನಡೆದಿವೆ. ಈ ಮುಖಾಮುಖಿಯಲ್ಲಿ ಉಭಯ ತಂಡಗಳು ಸಮಬಲದ ಹೋರಾಟ ನೀಡಿವೆ. ಅಂದರೆ ಚೆನ್ನೈ ಸೂಪರ್ ಕಿಂಗ್ಸ್ 16 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ ಕೂಡ 16 ಪಂದ್ಯಗಳನ್ನು ಗೆದ್ದುಕೊಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಮುನ್ನಡೆ ಸಾಧಿಸಲಿದೆ.

ಸಂಭಾವ್ಯ ಪ್ಲೇಯಿಂಗ್ 11

ಸಿಎಸ್​ಕೆ ತಂಡದಲ್ಲಿ 2 ಬದಲಾವಣೆ?

ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತಿರುವ ಸಿಎಸ್​ಕೆ ಇಂದಿನ ಪಂದ್ಯಕ್ಕೆ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇದೆ. ಗಾಯದಿಂದಾಗಿ ಮೊದಲ ಪಂದ್ಯದಿಂದ ಹಿಂದೆ ಸರಿದಿದ್ದ ಸ್ಫೋಟಕ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ ಈ ಪಂದ್ಯದಲ್ಲಿ ಆಡಬಹುದು. ಹಾಗೆಯೇ ಮೊದಲ ಪಂದ್ಯದಲ್ಲಿ ಸೊನ್ನೆ ಸುತ್ತಿದ್ದ ಆಯುಷ್ ಮ್ಹಾತ್ರೆ ಬದಲಿಗೆ ಆಲ್‌ರೌಂಡರ್ ಪ್ರಶಾಂತ್ ವೀರ್ ಅವರನ್ನು ಆಡಿಸಬಹುದು.

ಐಪಿಎಲ್​ನಿಂದ ಬ್ಯಾನ್ ಆಗಿರುವ ಹ್ಯಾರಿ ಬ್ರೂಕ್​ಗೆ ಪಿಎಸ್​ಎಲ್​ನಿಂದ ಆಹ್ವಾನ

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ಕ್ಯಾಚರ್), ಆಯುಷ್ ಮ್ಹಾತ್ರೆ/ ಪ್ರಶಾಂತ್ ವೀರ್, ಮ್ಯಾಟ್ ಶಾರ್ಟ್/ ಡೆವಾಲ್ಡ್ ಬ್ರೆವಿಸ್, ಕಾರ್ತಿಕ್ ಶರ್ಮಾ, ಶಿವಂ ದುಬೆ, ಜೇಮಿ ಓವರ್ಟನ್, ನೂರ್ ಅಹ್ಮದ್, ಮ್ಯಾಟ್ ಹೆನ್ರಿ, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್.

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಪ್ರಬ್ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಯಾನ್ಸನ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us