AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs PBKS: ಚೆನ್ನೈ ಸೂಪರ್ ಕಿಂಗ್ಸ್ ಸೋಲಿಗೆ ಇದುವೇ ಕಾರಣ..!

CSK vs PBKS Turning Point: ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್​ನ 7ನೇ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 209 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 18.4 ಓವರ್​ಗಳಲ್ಲಿ 210 ರನ್​ಗಳಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

CSK vs PBKS: ಚೆನ್ನೈ ಸೂಪರ್ ಕಿಂಗ್ಸ್ ಸೋಲಿಗೆ ಇದುವೇ ಕಾರಣ..!
CSK
ಝಾಹಿರ್ ಯೂಸುಫ್
|

Updated on: Apr 04, 2026 | 7:24 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು 20 ಓವರ್​​ಗಳಲ್ಲಿ 209 ರನ್ ಕಲೆಹಾಕಿದ್ದರು. ಈ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡ ಕೇವಲ 18.4 ಓವರ್​ಗಳಲ್ಲಿ 210 ರನ್ ಗಳಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಇದರೊಂದಿಗೆ ಸಿಎಸ್​ಕೆ ತಂಡವು ಆಡಿದ ಮೊದಲೆರಡು ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಸೋಲಿಗೆ ಕಾರಣ ಪ್ರಮುಖ ಕಾರಣಗಳು ಇಲ್ಲಿವೆ:

ಶಿಸ್ತಿಲ್ಲದ ಬೌಲಿಂಗ್: ಸಿಎಸ್‌ಕೆ ಬೌಲರ್‌ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಲು ವಿಫಲರಾದರು. ನಾಯಕ ರುತುರಾಜ್ ಗಾಯಕ್ವಾಡ್ ಅವರೇ ಒಪ್ಪಿಕೊಂಡಂತೆ ಬೌಲಿಂಗ್‌ನಲ್ಲಿ “ಶಿಸ್ತು” ಇರಲಿಲ್ಲ.

ಸ್ಪಿನ್ನರ್‌ಗಳ ವೈಫಲ್ಯ: ತಂಡದ ಪ್ರಮುಖ ಸ್ಪಿನ್ನರ್‌ಗಳಾದ ನೂರ್ ಅಹ್ಮದ್ ಮತ್ತು ರಾಹುಲ್ ಚಹರ್ ಯಾವುದೇ ವಿಕೆಟ್ ಪಡೆಯದೆ, 8 ಓವರ್‌ಗಳಲ್ಲಿ ಬರೋಬ್ಬರಿ 84 ರನ್ ಬಿಟ್ಟುಕೊಟ್ಟರು.

ಪ್ರಿಯಾಂಶ್ ಆರ್ಯ ಅವರ ಬಿರುಸಿನ ಬ್ಯಾಟಿಂಗ್: ಪಂಜಾಬ್‌ನ ಇಂಪ್ಯಾಕ್ಟ್ ಪ್ಲೇಯರ್ ಪ್ರಿಯಾಂಶ್ ಆರ್ಯ ಕೇವಲ 11 ಎಸೆತಗಳಲ್ಲಿ 39 ರನ್ (4 ಸಿಕ್ಸರ್) ಚಚ್ಚುವ ಮೂಲಕ ಪವರ್‌ಪ್ಲೇನಲ್ಲೇ ಪಂದ್ಯವನ್ನು ಪಂಜಾಬ್ ಕಿಂಗ್ಸ್ ಪರ ತಿರುಗಿಸಿದ್ದರು.

ಶ್ರೇಯಸ್ ಅಯ್ಯರ್ ಅವರ ನಾಯಕನ ಆಟ: ಪಂಜಾಬ್ ಕಿಂಗ್ಸ್​ ತಂಡದ ನಾಯಕ ಶ್ರೇಯಸ್ ಅಯ್ಯರ್ ಕೇವಲ 29 ಎಸೆತಗಳಲ್ಲಿ 50 ರನ್ ಗಳಿಸಿ ತಂಡಕ್ಕೆ ಸುಲಭ ಜಯ ತಂದುಕೊಟ್ಟರು.

ಗಾಯಕ್ವಾಡ್ ಅವರ ನಿಧಾನಗತಿಯ ಬ್ಯಾಟಿಂಗ್: ರುತುರಾಜ್ ಗಾಯಕ್ವಾಡ್ 22 ಎಸೆತಗಳಲ್ಲಿ 28 ರನ್ ಗಳಿಸಿದರು. ಅವರು ಇನ್ನಷ್ಟು ವೇಗವಾಗಿ ಆಡಿದ್ದರೆ ಸ್ಕೋರ್ 225 ದಾಟುತ್ತಿತ್ತು, ಆಗ ತಂಡಕ್ಕೆ ಗೆಲ್ಲಲು ಅವಕಾಶವಿರುತ್ತಿತ್ತು.

ಕಳಪೆ ಫೀಲ್ಡಿಂಗ್: ಮೈದಾನದಲ್ಲಿ ಸಿಎಸ್‌ಕೆ ಆಟಗಾರರ ಫೀಲ್ಡಿಂಗ್ ಅಷ್ಟೇನೂ ಪರಿಣಾಮಕಾರಿಯಾಗಿರಲಿಲ್ಲ, ಇದು ಬೌಲರ್‌ಗಳಿಗೆ ಹಿನ್ನಡೆಯಾಯಿತು.

ಚೆಪಾಕ್ ಕೋಟೆ ಕುಸಿತ: ಈ ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ತವರು ಮೈದಾನವಾದ ಚೆಪಾಕ್‌ನಲ್ಲಿ ಸತತ 6ನೇ ಸೋಲು ಅನುಭವಿಸಿತು. ಅದರಲ್ಲೂ ಈ ಬಾರಿ ಟೂರ್ನಿಯಲ್ಲಿ ಚೆಪಾಕ್​ನಲ್ಲಿ ಶುಭಾರಂಭ ಮಾಡುವಲ್ಲಿ ವಿಫಲವಾಗಿದೆ.

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11: ಶ್ರೇಯಸ್ ಅಯ್ಯರ್ (ನಾಯಕ), ಪ್ರಭ್​ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಶಶಾಂಕ್ ಸಿಂಗ್, ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಯಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್,  ವೈಶಾಕ್ ವಿಜಯಕುಮಾರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್.

ಇದನ್ನೂ ಓದಿ: IPL 2026: CSK ದಾಂಡಿಗರ ಆರ್ಭಟಕ್ಕೆ RCB ದಾಖಲೆ ಧೂಳೀಪಟ

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11: ರುತುರಾಜ್ ಗಾಯಕ್ವಾಡ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಆಯುಷ್ ಮ್ಹಾತ್ರೆ, ಸರ್ಫರಾಝ್ ಖಾನ್, ಶಿವಂ ದುಬೆ, ಕಾರ್ತಿಕ್ ಶರ್ಮಾ, ಪ್ರಶಾಂತ್ ವೀರ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಮ್ಯಾಟ್ ಹೆನ್ರಿ, ಖಲೀಲ್ ಅಹ್ಮದ್.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ