CSK vs RCB Playing XI IPL 2022: RCB ತಂಡದಲ್ಲಿ 2 ಬದಲಾವಣೆ ಸಾಧ್ಯತೆ: ಇಲ್ಲಿದೆ ಪ್ಲೇಯಿಂಗ್ 11

CSK vs RCB Playing XI IPL 2022: ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಪ್ರಮುಖ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

CSK vs RCB Playing XI IPL 2022: RCB ತಂಡದಲ್ಲಿ 2 ಬದಲಾವಣೆ ಸಾಧ್ಯತೆ: ಇಲ್ಲಿದೆ ಪ್ಲೇಯಿಂಗ್ 11
CSK vs RCB Playing XI IPL 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 11, 2022 | 7:48 PM

ಐಪಿಎಲ್​ನ 22ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸಿಎಸ್​ಕೆ ಮುಖಾಮುಖಿಯಾಗಲಿದೆ. ಐಪಿಎಲ್​ನ ಸಾಂಪ್ರದಾಯಿಕ ಎದುರಾಳಿಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ನಡುವಿನ ಕದನವನ್ನು ಅಭಿಮಾನಿಗಳು ಕೂಡ ಎದುರು ನೋಡುತ್ತಿದ್ದಾರೆ. ನಿರೀಕ್ಷೆಯಂತೆ ಈ ಪಂದ್ಯದಲ್ಲಿ ರೋಚಕ ಹೋರಾಟ ಕಂಡು ಬರಬಹುದು. ಆದರೆ ಈ ಪಂದ್ಯದಲ್ಲಿ ಆರ್​ಸಿಬಿ ವೇಗಿ ಹರ್ಷಲ್ ಪಟೇಲ್ ಕಾಣಿಸಿಕೊಳ್ಳುವುದಿಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಹರ್ಷಲ್ ಪಟೇಲ್ ತಂಡದಿಂದ ಹೊರಗುಳಿದಿದ್ದಾರೆ. ಆದರೆ ಮತ್ತೊಂದೆಡೆ ಆರ್​ಸಿಬಿ ತಂಡದ ವೇಗಿಗಳಾದ ಜೋಶ್ ಹ್ಯಾಝಲ್​ವುಡ್ ಹಾಗೂ ಜೇಸನ್ ಬೆಹ್ರೆಡ್ರಾರ್ಫ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆಯಂತು ಕಂಡು ಬರಲಿದೆ.

ಹರ್ಷಲ್ ಪಟೇಲ್ ಸ್ಥಾನದಲ್ಲಿ ಸಿದ್ದಾರ್ಥ್​ ಕೌಲ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಮತ್ತೊಂದೆಡೆ ಜೋಶ್ ಹ್ಯಾಝಲ್​ವುಡ್ ಆಗಮನದಿಂದಾಗಿ ಡೇವಿಡ್ ವಿಲ್ಲಿ ಹೊರಗುಳಿಯಬೇಕಾಗಿ ಬರಬಹುದು. ಇದರ ಹೊರತಾಗಿ ಆರ್​ಸಿಬಿ ಬ್ಯಾಟಿಂಗ್ ಲೈನಪ್​ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಏಕೆಂದರೆ ಕಳೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಅನೂಜ್ ರಾವತ್ ಉತ್ತಮವಾಗಿ ಆಡಿದ್ದರು. ಇನ್ನು ಫಾಫ್ ಡುಪ್ಲೆಸಿಸ್​ ಕೂಡ ಆರಂಭಿಕನಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅಲ್ಲದೆ ಫಿನಿಶರ್​ಗಳಾಗಿ ಇದೀಗ ದಿನೇಶ್ ಕಾರ್ತಿಕ್ ಜೊತೆ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಮುಂಬೈ ವಿರುದ್ದ ಆಡಿದ ಬ್ಯಾಟರ್​ಗಳೇ ಈ ಪಂದ್ಯದಲ್ಲೂ ಆಡಲಿದ್ದಾರೆ.

ಮತ್ತೊಂದೆಡೆ ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಪ್ರಮುಖ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ವೇಗಿ ಮುಖೇಶ್ ಚೌಧರಿ ಅವರ ಸ್ಥಾನದಲ್ಲಿ ರಾಜವರ್ಧನ್ ಹೆಂಗರ್ಗೆಕರ್​ಗೆ ತಂಡದಲ್ಲಿ ಅವಕಾಶ ಸಿಗಬಹುದು. ಇದನ್ನು ಬಿಟ್ಟರೆ ತಂಡದಲ್ಲಿ ಬೇರೆ ಯಾವುದೇ ಬದಲಾವಣೆ ಕಂಡು ಬರುವುದಿಲ್ಲ ಎನ್ನಬಹುದು. ಅದರಂತೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ.

ಚೆನ್ನೈ ಸೂಪರ್ ಕಿಂಗ್ಸ್ – ರವೀಂದ್ರ ಜಡೇಜಾ (ನಾಯಕ), ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ಮಹೇಂದ್ರ ಸಿಂಗ್ ಧೋನಿ, ಡ್ವೇನ್ ಬ್ರಾವೋ, ಕ್ರಿಸ್ ಜೋರ್ಡಾನ್, ಮಹಿಷ್ ತೀಕ್ಷಣ, ರಾಜವರ್ಧನ್ ಹೆಂಗರ್ಗೆಕರ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು – ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ , ಜೋಶ್ ಹ್ಯಾಝಲ್‌ವುಡ್, ವನಿಂದು ಹಸರಂಗ, ಸಿದ್ಧಾರ್ಥ್ ಕೌಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: Virat Kohli: ಐಪಿಎಲ್​ ಇತಿಹಾಸದಲ್ಲೇ ಯಾರೂ ಮಾಡಿರದ ದಾಖಲೆ ಬರೆದ ಕಿಂಗ್ ಕೊಹ್ಲಿ

ಇದನ್ನೂ ಓದಿ: Prithvi Shaw: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಸೆಹ್ವಾಗ್ ದಾಖಲೆ ಸರಿಗಟ್ಟಿದ ಪೃಥ್ವಿ ಶಾ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ