ಐಪಿಎಲ್ನ 22ನೇ ಪಂದ್ಯದಲ್ಲಿ ಆರ್ಸಿಬಿ ಹಾಗೂ ಸಿಎಸ್ಕೆ ಮುಖಾಮುಖಿಯಾಗಲಿದೆ. ಐಪಿಎಲ್ನ ಸಾಂಪ್ರದಾಯಿಕ ಎದುರಾಳಿಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಕದನವನ್ನು ಅಭಿಮಾನಿಗಳು ಕೂಡ ಎದುರು ನೋಡುತ್ತಿದ್ದಾರೆ. ನಿರೀಕ್ಷೆಯಂತೆ ಈ ಪಂದ್ಯದಲ್ಲಿ ರೋಚಕ ಹೋರಾಟ ಕಂಡು ಬರಬಹುದು. ಆದರೆ ಈ ಪಂದ್ಯದಲ್ಲಿ ಆರ್ಸಿಬಿ ವೇಗಿ ಹರ್ಷಲ್ ಪಟೇಲ್ ಕಾಣಿಸಿಕೊಳ್ಳುವುದಿಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಹರ್ಷಲ್ ಪಟೇಲ್ ತಂಡದಿಂದ ಹೊರಗುಳಿದಿದ್ದಾರೆ. ಆದರೆ ಮತ್ತೊಂದೆಡೆ ಆರ್ಸಿಬಿ ತಂಡದ ವೇಗಿಗಳಾದ ಜೋಶ್ ಹ್ಯಾಝಲ್‌ವುಡ್ ಹಾಗೂ ಜೇಸನ್ ಬೆಹ್ರೆಡ್ರಾರ್ಫ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಆರ್ಸಿಬಿ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆಯಂತು ಕಂಡು ಬರಲಿದೆ.
ಹರ್ಷಲ್ ಪಟೇಲ್ ಸ್ಥಾನದಲ್ಲಿ ಸಿದ್ದಾರ್ಥ್ ಕೌಲ್ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಮತ್ತೊಂದೆಡೆ ಜೋಶ್ ಹ್ಯಾಝಲ್‌ವುಡ್ ಆಗಮನದಿಂದಾಗಿ ಡೇವಿಡ್ ವಿಲ್ಲಿ ಹೊರಗುಳಿಯಬೇಕಾಗಿ ಬರಬಹುದು. ಇದರ ಹೊರತಾಗಿ ಆರ್ಸಿಬಿ ಬ್ಯಾಟಿಂಗ್ ಲೈನಪ್ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಏಕೆಂದರೆ ಕಳೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಅನೂಜ್ ರಾವತ್ ಉತ್ತಮವಾಗಿ ಆಡಿದ್ದರು. ಇನ್ನು ಫಾಫ್ ಡುಪ್ಲೆಸಿಸ್ ಕೂಡ ಆರಂಭಿಕನಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅಲ್ಲದೆ ಫಿನಿಶರ್ಗಳಾಗಿ ಇದೀಗ ದಿನೇಶ್ ಕಾರ್ತಿಕ್ ಜೊತೆ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಮುಂಬೈ ವಿರುದ್ದ ಆಡಿದ ಬ್ಯಾಟರ್ಗಳೇ ಈ ಪಂದ್ಯದಲ್ಲೂ ಆಡಲಿದ್ದಾರೆ.
ಮತ್ತೊಂದೆಡೆ ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಪ್ರಮುಖ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ವೇಗಿ ಮುಖೇಶ್ ಚೌಧರಿ ಅವರ ಸ್ಥಾನದಲ್ಲಿ ರಾಜವರ್ಧನ್ ಹೆಂಗರ್ಗೆಕರ್ಗೆ ತಂಡದಲ್ಲಿ ಅವಕಾಶ ಸಿಗಬಹುದು. ಇದನ್ನು ಬಿಟ್ಟರೆ ತಂಡದಲ್ಲಿ ಬೇರೆ ಯಾವುದೇ ಬದಲಾವಣೆ ಕಂಡು ಬರುವುದಿಲ್ಲ ಎನ್ನಬಹುದು. ಅದರಂತೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ.
ಚೆನ್ನೈ ಸೂಪರ್ ಕಿಂಗ್ಸ್ – ರವೀಂದ್ರ ಜಡೇಜಾ (ನಾಯಕ), ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ಮಹೇಂದ್ರ ಸಿಂಗ್ ಧೋನಿ, ಡ್ವೇನ್ ಬ್ರಾವೋ, ಕ್ರಿಸ್ ಜೋರ್ಡಾನ್, ಮಹಿಷ್ ತೀಕ್ಷಣ, ರಾಜವರ್ಧನ್ ಹೆಂಗರ್ಗೆಕರ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು – ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ , ಜೋಶ್ ಹ್ಯಾಝಲ್‌ವುಡ್, ವನಿಂದು ಹಸರಂಗ, ಸಿದ್ಧಾರ್ಥ್ ಕೌಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: Virat Kohli: ಐಪಿಎಲ್ ಇತಿಹಾಸದಲ್ಲೇ ಯಾರೂ ಮಾಡಿರದ ದಾಖಲೆ ಬರೆದ ಕಿಂಗ್ ಕೊಹ್ಲಿ
ಇದನ್ನೂ ಓದಿ: Prithvi Shaw: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಸೆಹ್ವಾಗ್ ದಾಖಲೆ ಸರಿಗಟ್ಟಿದ ಪೃಥ್ವಿ ಶಾ