
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (Chennai Super Kings vs Rajasthan Royals) ನಡುವಿನ ಐಪಿಎಲ್ 2026 ರ (IPL 2026) ಮೊದಲ ಪಂದ್ಯವು ಮಾರ್ಚ್ 30, 2026 ರಂದು ಅಸ್ಸಾಂನ ಗುವಾಹಟಿಯಲ್ಲಿರುವ ಬಾರ್ಬರಪ್ಪ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಕಳೆದ ಸೀಸನ್‌ನಲ್ಲಿ ಎರಡೂ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದ್ದವು. ಪರಿಣಾಮವಾಗಿ, ಎರಡೂ ತಂಡಗಳು ಈ ಸೀಸನ್ ಅನ್ನು ಗೆಲುವಿನೊಂದಿಗೆ ಪ್ರಾರಂಭಿಸುವ ಇರಾದೆಯಲ್ಲಿವೆ. ಐಪಿಎಲ್‌ನ ಮೊದಲ ಆವೃತ್ತಿಯ ಚಾಂಪಿಯನ್ ಆಗಿರುವ ರಾಜಸ್ಥಾನ್ ರಾಯಲ್ಸ್, ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದ್ದು, ಇದೀಗ ಈ ಪಂದ್ಯದ ಟಾಸ್ ಕೂಡ ಮುಗಿದಿದೆ.
ಟಾಸ್ ಗೆದ್ದ ರಾಜಸ್ಥಾನ್ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಿಎಸ್ಕೆ ಮೊದಲು ಬ್ಯಾಟಿಂಗ್ ಮಾಡಲಿದೆ. ಗುವಾಹಟಿಯಲ್ಲಿ ಮಳೆ ಬಿದ್ದಿರುವ ಕಾರಣ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾಗಿ ಪರಾಗ್ ಹೇಳಿದರು. ಇದರೊಂದಿಗೆ ತಂಡದ ಆಡುವ ಹನ್ನೊಂದರ ಬಳಗವನ್ನು ಖಚಿತಪಡಿಸಿದರು. ಇತ್ತ ಟಾಸ್ ಸೋತ ಬಳಿಕ ಮಾತನಾಡಿದ ಸಿಎಸ್ಕೆ ನಾಯಕ ರುತುರಾಜ್ ತಾವು ಕೂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಿದ್ದಾಗಿ ಹೇಳಿದರು. ಈ ಮೊದಲೇ ವರದಿಯಾದ್ದಂತೆ ಈ ಪಂದ್ಯದಲ್ಲಿ ಸಿಎಸ್ಕೆ, ಧೋನಿ ಹಾಗೂ ಡೆವಾಲ್ಡ್ ಬ್ರೆವಿಸ್ ಇಲ್ಲದೆ ಕಣಕ್ಕಿಳಿಯುತ್ತಿದೆ.
ರಾಜಸ್ಥಾನ ಮತ್ತು ಚೆನ್ನೈ ನಡುವಿನ ಮುಖಾಮುಖಿಯಲ್ಲಿ ಎರಡೂ ತಂಡಗಳು ಸಮಬಲದ ಹೋರಾಟ ನೀಡಿವೆ. ಎರಡೂ ತಂಡಗಳ ನಡುವೆ ಇದುವರೆಗೆ ಒಟ್ಟು 31 ಪಂದ್ಯಗಳು ನಡೆದಿದ್ದು, ಇದರಲ್ಲಿ ಚೆನ್ನೈ 16 ಪಂದ್ಯಗಳಲ್ಲಿ ಗೆದ್ದರೆ, ರಾಜಸ್ಥಾನ 15 ಪಂದ್ಯಗಳಲ್ಲಿ ಗೆದ್ದಿದೆ. ಇನ್ನು ಕಳೆದ ನಾಲ್ಕು ಆವೃತ್ತಿಗಳಲ್ಲಿ, ಎರಡೂ ತಂಡಗಳು ಒಟ್ಟು ಆರು ಪಂದ್ಯಗಳನ್ನು ಆಡಿದ್ದು, ಇದರಲ್ಲಿ ರಾಜಸ್ಥಾನ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ. ಈ ಆರು ಪಂದ್ಯಗಳಲ್ಲಿ ರಾಜಸ್ಥಾನ ಐದು ಪಂದ್ಯಗಳನ್ನು ಗೆದ್ದರೆ, ಚೆನ್ನೈ 2024 ರಲ್ಲಿ ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಯಿತು. ಉಳಿದಂತೆ ಐಪಿಎಲ್ 2025 ರಲ್ಲಿ ಆಡಿದ ಎರಡೂ ಪಂದ್ಯಗಳನ್ನು ರಾಜಸ್ಥಾನ ಗೆದ್ದಿತು.
🚨 Toss 🚨@rajasthanroyals have won the toss and will field first in Guwahati!
Updates ▶️ https://t.co/UzbuFk5G26#TATAIPL | #KhelBindaas | #RRvCSK pic.twitter.com/1o0WJiz5aK
— IndianPremierLeague (@IPL) March 30, 2026
CSK vs RR IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ
ಸಿಎಸ್ಕೆ: ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್(ನಾಯಕ), ಆಯುಷ್ ಮ್ಹಾತ್ರೆ, ಮ್ಯಾಥ್ಯೂ ಶಾರ್ಟ್, ಶಿವಂ ದುಬೆ, ಕಾರ್ತಿಕ್ ಶರ್ಮಾ, ಜೇಮಿ ಓವರ್ಟನ್, ನೂರ್ ಅಹ್ಮದ್, ಮ್ಯಾಟ್ ಹೆನ್ರಿ, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್.
ರಾಜಸ್ಥಾನ್: ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್(ವಿಕೆಟ್ ಕೀಪರ್), ರಿಯಾನ್ ಪರಾಗ್(ನಾಯಕ), ಶಿಮ್ರೋನ್ ಹೆಟ್ಮೆಯರ್, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ಬ್ರಿಜೇಶ್ ಶರ್ಮಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:12 pm, Mon, 30 March 26