CSK vs SRH, IPL 2023: ಐಪಿಎಲ್ನಲ್ಲಿಂದು ಚೆನ್ನೈ ಸೂಪರ್ ಕಿಂಗ್ಸ್-ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿ
Chennai vs Hyderabad: ಐಪಿಎಲ್ನಲ್ಲಿಂದು ಚೆನ್ನೈ ಸೂಪರ್ ಕಿಂಗ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ (CSK vs SRH) ಅನ್ನು ಎದುರಿಸಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಈ ರೋಚಕ ಕಾದಾಟಕ್ಕೆ ಸಾಕ್ಷಿಯಾಗಲಿದೆ.
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು (IPL 2023) ಎಂಎಸ್ ಧೋನಿ (MS Dhoni) ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆ್ಯಡಂ ಮರ್ಕ್ರಮ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ (CSK vs SRH) ಅನ್ನು ಎದುರಿಸಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಈ ರೋಚಕ ಕಾದಾಟಕ್ಕೆ ಸಾಕ್ಷಿಯಾಗಲಿದೆ. ಚೆನ್ನೈ ಈ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿದ್ದು ಆಡಿದ ಐದು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಿ ಎರಡರಲ್ಲಿ ಸೋತಿದೆ. ಇತ್ತ ಹೈದರಾಬಾದ್ ಆಡಿದ ಐದು ಪಂದ್ಯಗಳಲ್ಲಿ ಎರಡು ಗೆಲುವು ಮೂರು ಸೋಲು ಕಂಡಿದೆ.
ಸಿಎಸ್ಕೆ ತಂಡ ಬ್ಯಾಟಿಂಗ್ – ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ರುತುರಾಯ್ ಗಾಯಕ್ವಾಡ್, ಡೆವೋನ್ ಕಾನ್ವೆ ಭರ್ಜರಿ ಫಾರ್ಮ್ನಲ್ಲಿದ್ದು ಅತ್ಯುತ್ತಮ ಆರಂಭ ಒದಗಿಸುತ್ತಿದ್ದಾರೆ.ಅಜಿಂಕ್ಯಾ ರಹಾನೆ ಕೂಡ ಅತ್ಯುತ್ತಮ ಬ್ಯಾಟಿಂಗ್ ನಡೆಸುತ್ತಿದ್ದು, ಶಿವಂ ದುಬೆ ಸ್ಫೋಟಕ ಆಟದ ಮೂಲಕ ಗಮನ ಸೆಳೆದಿದ್ದಾರೆ. ಅಂಬಟಿ ರಾಯುಡು ಹಾಗೂ ಮೊಯೀನ್ ಅಲಿ ಕಡೆಯಿಂದ ನಿರೀಕ್ಷೆಗೆ ತಕ್ಕ ಆಟ ಬರುತ್ತಿಲ್ಲ. ಧೋನಿ ಹಾಗೂ ಜಡೇಜಾ ಫಿನಿಶಿಂಗ್ ಜವಾಬ್ದಾರಿ ಹೊತ್ತಿದ್ದಾರೆ. ಬೌಲಿಂಗ್ನಲ್ಲಿ ಸಿಎಸ್ಕೆ ಪರ ತುಶಾರ್ ದೇಶ್ಪಾಂಡೆ, ಮಹೀಶಾ ತೀಕ್ಷಣ, ಮತೀಶಾ ಪತಿರಾನ, ಆಕಾಶ್ ಸಿಂಗ್ ಇದ್ದು ಜಡೇಜಾ, ಅಲಿ ಸಾಥ್ ನೀಡುತ್ತಿದ್ದಾರೆ.
IPL 2023: RCB ಆಟಗಾರರ ಕೈಯಲ್ಲಿ ಪರ್ಪಲ್-ಆರೆಂಜ್ ಕ್ಯಾಪ್ಸ್
ಇತ್ತ ಎಸ್ಆರ್ಹೆಚ್ ಪರ ಹ್ಯಾರಿ ಬ್ರೂಕ್ ಒಂದು ಶತಕ ಸಿಡಿಸಿ ಮಂಕಾಗಿದ್ದಾರೆ. ಮಯಾಂಕ್ ಅಗರ್ವಾಲ್ ಫಾರ್ಮ್ಗೆ ಬಂದಿರುವುದು ಸಂತಸದ ಸಂಗತಿ. ರಾಹುಲ್ ತ್ರಿಪಾಠಿ, ಮರ್ಕ್ರಮ್, ಅಭಿಷೇಕ್ ಶರ್ಮಾ, ಹೆನ್ರಿಚ್ ಕ್ಲಾಸೆನ್ ಅಬ್ಬರಿಸಿದರೆ ಸಿಎಸ್ಕೆ ಪರದಾಡುವುದು ಖಚಿತ. ಬೌಲಿಂಗ್ನಲ್ಲಿ ಹೈದರಬಾದ್ ಪರ ಭುವನೇಶ್ವರ್ ಕುಮಾರ್ ಬಿಟ್ಟರೆ ಮತ್ಯಾರು ಮಾರಕವಾಗಿ ಗೋಚರಿಸುತ್ತಿಲ್ಲ. ಮಾರ್ಕೊ ಜಾನ್ಸೆನ್, ವಾಷಿಂಗ್ಟನ್ ಸುಂದರ್, ಟಿ. ನಟರಾಜನ್, ಮಾರ್ಕಂಡೆ ಲಯಕಂಡುಕೊಳ್ಳಬೇಕಿದೆ.
ಚೆನ್ನೈ ಸೂಪರ್ ಕಿಂಗ್ಸ್: ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಶಿವಂ ದುಬೆ, ಅಂಬಟಿ ರಾಯುಡು, ಮೊಯೀನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ), ಮಹೀಶ್ ತೀಕ್ಷಣ, ತುಷಾರ್ ದೇಶಪಾಂಡೆ, ಮತೀಶ ಪತಿರಾನ, ಆಕಾಶ್ ಸಿಂಗ್, ಡ್ವೈನ್ ಪ್ರಿಟೋರಿಯಸ್, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಆರ್ ಎಸ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ಬೆನ್ ಸ್ಟೋಕ್ಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಭಗತ್ ವರ್ಮಾ, ನಿಶಾಂತ್ ಸಿಂಧು.
ಸನ್‌ರೈಸರ್ಸ್ ಹೈದರಾಬಾದ್: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಆ್ಯಡಂ ಮರ್ಕ್ರಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಉಮ್ರಾನ್ ಮಲಿಕ್, ಟಿ ನಟರಾಜನ್, ಆದಿಲ್ ರಶೀದ್, ಅಕೇಲ್ ಹೊಸೈನ್, ಗ್ಲೆನೆನ್ ಫಿಲಿಪ್ಸ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಅಭಿಷೇಕ್ ಶರ್ಮಾ, ಕಾರ್ತಿಕ್ ತ್ಯಾಗಿ, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ