CSK vs SRH Playing XI: CSK ತಂಡದಲ್ಲಿ 1 ಬದಲಾವಣೆ, SRH ಟೀಮ್​ನಲ್ಲಿ 2 ಬದಲಾವಣೆ..!

CSK vs SRH Playing XI IPL 2022: ಸಿಎಸ್​ಕೆ ಪರ ರುತುರಾಜ್ ಗಾಯಕ್ವಾಡ್-ರಾಬಿನ್ ಉತ್ತಪ್ಪ ಇನಿಂಗ್ಸ್ ಆರಂಭಿಸಲಿದ್ದಾರೆ. ಮತ್ತೊಂದೆಡೆ, ಸನ್‌ರೈಸರ್ಸ್ ಆರಂಭಿಕರಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

CSK vs SRH Playing XI: CSK ತಂಡದಲ್ಲಿ 1 ಬದಲಾವಣೆ, SRH ಟೀಮ್​ನಲ್ಲಿ 2 ಬದಲಾವಣೆ..!
CSK vs SRH Playing XI
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 09, 2022 | 3:35 PM

IPL 2022 ನಲ್ಲಿ ಶನಿವಾರ ಎರಡು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ . ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಅದರಂತೆ CSK ಮೊದಲು ಬ್ಯಾಟ್ ಮಾಡಲಿದೆ. ಈ ಪಂದ್ಯಕ್ಕಾಗಿ ಚೆನ್ನೈ (CSK) ತಂಡದಲ್ಲಿ ಒಂದು ಬದಲಾವಣೆ ಮಾಡಿದೆ. ಹಾಗೆಯೇ ಸನ್‌ರೈಸರ್ಸ್ ಹೈದರಾಬಾದ್ ಎರಡು ಬದಲಾವಣೆಗಳನ್ನು ಮಾಡಿಕೊಂಡಿದೆ. ಗೆಲುವಿನ ಹುಡುಕಾಟದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಇಲ್ಲಿಯವರೆಗೆ ಆಡಿದ ಮೂರೂ ಪಂದ್ಯಗಳಲ್ಲಿ ಚೆನ್ನೈ ಸೋಲು ಕಂಡಿದೆ. ಅದೇ ರೀತಿ ಹೈದರಾಬಾದ್ ಕೂಡ ಇದುವರೆಗೆ ಆಡಿದ 2 ಪಂದ್ಯಗಳಲ್ಲಿ ನಿರಾಸೆ ಅನುಭವಿಸಿದೆ.

CSK vs SRH ಪ್ಲೇಯಿಂಗ್ 11 ಬದಲಾವಣೆ: ವಿಶೇಷವೆಂದರೆ ಗೆಲುವಿನ ಹುಡುಕಾಟದಲ್ಲಿರುವ ಎರಡೂ ತಂಡಗಳು ಪ್ಲೇಯಿಂಗ್ 11 ಇಲೆವೆನ್ ನಲ್ಲಿ ಬದಲಾವಣೆ ಮಾಡಿಕೊಂಡಿವೆ. ಚೆನ್ನೈ ಸೂಪರ್ ಕಿಂಗ್ಸ್ ಡ್ವೇನ್ ಪ್ರಿಟೋರಿಯಸ್ ಬದಲಿಗೆ ಮಹೇಶ್ ತೀಕ್ಷಣ ಅವರನ್ನು ಆಯ್ಕೆ ಮಾಡಿದೆ. ಸನ್‌ರೈಸರ್ಸ್ ಹೈದರಾಬಾದ್ ರೊಮಾರಿಯೊ ಶೆಫರ್ಡ್ ಬದಲಿಗೆ ಮಾರ್ಕೊ ಜಾನ್ಸನ್ ಮತ್ತು ಅಬ್ದುಲ್ ಸಮದ್ ಬದಲಿಗೆ ಶಶಾಂಕ್ ಸಿಂಗ್ ಅವರನ್ನು ಆಯ್ಕೆ ಮಾಡಿದೆ.

ಇನ್ನುಳಿದಂತೆ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೇ ಕಣಕ್ಕಿಳಿಯಲಿದ್ದಾರೆ. ಸಿಎಸ್​ಕೆ ಪರ ರುತುರಾಜ್ ಗಾಯಕ್ವಾಡ್-ರಾಬಿನ್ ಉತ್ತಪ್ಪ ಇನಿಂಗ್ಸ್ ಆರಂಭಿಸಲಿದ್ದಾರೆ. ಮತ್ತೊಂದೆಡೆ, ಸನ್‌ರೈಸರ್ಸ್ ಆರಂಭಿಕರಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆರೆಂಜ್ ಆರ್ಮಿ ಖಂಡಿತವಾಗಿಯೂ ತನ್ನ ಮಧ್ಯಮ ಕ್ರಮಾಂಕವನ್ನು ಟ್ಯಾಂಪರ್ ಮಾಡಿದೆ. ಶ್ರೀಲಂಕಾದ ಮಿಸ್ಟರಿ ಸ್ಪಿನ್ನರ್ ಮಹೇಶ್ ಟೀಕ್ಷಣ ಅವರಿಗೆ ಚೆನ್ನೈ ಅವಕಾಶ ನೀಡಿದ್ದು, ಈ ಪ್ಲ್ಯಾನ್ ಫಲಿಸಲಿದೆಯಾ ಕಾದು ನೋಡಬೇಕಿದೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್, ರಾಹುಲ್ ತ್ರಿಪಾಠಿ, ಏಡನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ಶಶಾಂಕ್ ಸಿಂಗ್, ಮಾರ್ಕೊ ಜಾನ್ಸನ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಟಿ.ನಟರಾಜನ್

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ, ಶಿವಂ ದುಬೆ, ಡ್ವೇನ್ ಬ್ರಾವೋ, ಮಹೇಶ್ ತಿಕ್ಷಣ, ಕ್ರಿಸ್ ಜೋರ್ಡಾನ್, ಮುಖೇಶ್ ಚೌಧರಿ

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ