AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs SRH: ಅಭಿಮಾನಿಗಳ ಆಕ್ರೋಶವನ್ನು ಲೆಕ್ಕಿಸದೇ ಯುವ ಆಟಗಾರನ ಕಣಕ್ಕಿಳಿಸಿದ CSK

Maheesh Theekshana: ಚೆನ್ನೈ ಸೂಪರ್ ಕಿಂಗ್ಸ್ ಮಹೇಶ್ ತೀಕ್ಷಣ ಅವರನ್ನು 70 ಲಕ್ಷಕ್ಕೆ ಖರೀದಿಸಿದ ಬೆನ್ನಲ್ಲೇ ಸಿಎಸ್​ಕೆ ಅಭಿಮಾನಿಗಳು ತಮ್ಮ ತಂಡದ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದರು.

CSK vs SRH: ಅಭಿಮಾನಿಗಳ ಆಕ್ರೋಶವನ್ನು ಲೆಕ್ಕಿಸದೇ ಯುವ ಆಟಗಾರನ ಕಣಕ್ಕಿಳಿಸಿದ CSK
Maheesh Theekshana
TV9 Web
| Updated By: ಝಾಹಿರ್ ಯೂಸುಫ್|

Updated on: Apr 09, 2022 | 4:42 PM

Share

ಚೆನ್ನೈ ಸೂಪರ್ ಕಿಂಗ್ಸ್ (CSK) IPL 2022 ರಲ್ಲಿ ತನ್ನ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವ ತೊರೆದ ನಂತರ ಹಾಲಿ ಚಾಂಪಿಯನ್ ಚೆನ್ನೈ ಯಶಸ್ಸಿನ ಹುಡುಕಾಟದಲ್ಲಿದೆ. ಇದಕ್ಕಾಗಿ ಪ್ಲೇಯಿಂಗ್ ಇಲೆವೆನ್​ನಲ್ಲೂ ಸತತ ಬದಲಾವಣೆಗಳನ್ನು ಮಾಡುತ್ತಿದೆ. ಏಪ್ರಿಲ್ 9 ರಂದು ಸನ್‌ರೈಸರ್ಸ್ ಹೈದರಾಬಾದ್ (CSK vs SRH) ವಿರುದ್ಧದ ಪಂದ್ಯಕ್ಕೂ ತಂಡದಲ್ಲಿ ಒಂದು ಬದಲಾವಣೆಯನ್ನು ಮಾಡಲಾಗಿದೆ . ಕಳೆದ ಎರಡು ಪಂದ್ಯಗಳಲ್ಲಿ ಚೆನ್ನೈ ಪರ ಉತ್ತಮ ಪ್ರದರ್ಶನ ನೀಡಿದ್ದ ವೇಗಿ ಡ್ವೇನ್ ಪ್ರಿಟೋರಿಯಸ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಬದಲಿಗೆ ಯುವ ಆಟಗಾರ ಶ್ರೀಲಂಕಾದ ಸ್ಪಿನ್ನರ್ ಮಹೇಶ್ ತೀಕ್ಷಣ ಅವರಿಗೆ ಚಾನ್ಸ್ ನೀಡಲಾಗಿದೆ. ಈ ಪಂದ್ಯದೊಂದಿಗೆ ತೀಕ್ಷಣ ಅವರು ಐಪಿಎಲ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ವಿಶೇಷ ಎಂದರೆ 10 ವರ್ಷಗಳ ನಂತರ ಚೆನ್ನೈ ಪರ ಶ್ರೀಲಂಕಾ ಆಟಗಾರನೊಬ್ಬ ಕಣಕ್ಕಿಳಿಯುತ್ತಿದ್ದಾರೆ.

ರವೀಂದ್ರ ಜಡೇಜಾ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆ ಇಲ್ಲಿಯವರೆಗೆ ಉತ್ತಮ ಆರಂಭ ಪಡೆದಿಲ್ಲ. ಈ ಕಾರಣದಿಂದಾಗಿ ತಂಡವು ಮೊದಲ ಯಶಸ್ಸಿಗಾಗಿ ಬದಲಾವಣೆಗಳನ್ನು ಮಾಡುತ್ತಿದೆ. ಇದೀಗ ಚೆನ್ನೈ ಶ್ರೀಲಂಕಾ ಸ್ಪಿನ್ನರ್ ಮಹೇಶ್ ತೀಕ್ಷಣ ಅವರಿಗೆ ಚಾನ್ಸ್ ನೀಡಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ಗೆ ಮಾರ್ಕೊ ಜಾನ್ಸನ್ ಮತ್ತು ಸಂಜಯ್ ಸಿಂಗ್ ಅವರಿಗೆ ಅವಕಾಶ ನೀಡಿದರೆ, ಸೂಪರ್ ಕಿಂಗ್ಸ್‌ಗೆ ಲಂಕಾ ಬೌಲರ್​ನನ್ನು ಕಣಕ್ಕಿಳಿಸಿದೆ.

ಮಹೇಶ್ ತೀಕ್ಷಣ ಐಪಿಎಲ್​ ಎಂಟ್ರಿ ಎರಡು ಕಾರಣಗಳಿಂದ ಹೆಚ್ಚು ಗಮನ ಸೆಳೆದಿತ್ತು. ಕೇವಲ 21 ವರ್ಷದ ಶ್ರೀಲಂಕಾದ ಉದಯೋನ್ಮುಖ ಮಿಸ್ಟರಿ ಸ್ಪಿನ್ನರ್ ತೀಕ್ಷಣ ಇದುವರೆಗೆ ಟಿ20 ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಬ್ಯಾಟ್ಸ್ ಮನ್ ಗಳನ್ನು ಕಟ್ಟಿ ಹಾಕುವುದರ ಜೊತೆಗೆ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ತನ್ನ ಸಣ್ಣ ವೃತ್ತಿಜೀವನದಲ್ಲಿ ಒಟ್ಟು 48 T20 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 51 ವಿಕೆಟ್‌ಗನ್ನು ಪಡೆದಿದ್ದಾರೆ. ಅದು ಕೂಡ ಕೇವಲ 6.04. ಎಕನಾಮಿ ರೇಟ್​ನಲ್ಲಿ ಎಂಬುದು ವಿಶೇಷ.

ಸಿಎಸ್​ಕೆ ಎಂಟ್ರಿ ವಿವಾದ: ಚೆನ್ನೈ ಸೂಪರ್ ಕಿಂಗ್ಸ್ ಮಹೇಶ್ ತೀಕ್ಷಣ ಅವರನ್ನು 70 ಲಕ್ಷಕ್ಕೆ ಖರೀದಿಸಿದ ಬೆನ್ನಲ್ಲೇ ಸಿಎಸ್​ಕೆ ಅಭಿಮಾನಿಗಳು ತಮ್ಮ ತಂಡದ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದರು. ಅಲ್ಲದೆ ತೀಕ್ಷಣ ಅವರನ್ನು ತಂಡದಿಂದ ಕೈಬಿಡುವಂತೆ ಒತ್ತಾಯಿಸಿದರು. ಇದಕ್ಕೆ ಕಾರಣ ರಾಜಕೀಯ. ವಾಸ್ತವವಾಗಿ ಮಹೇಶ್ ತೀಕ್ಷಣ ಸಿಂಹಳೀಯ ಮೂಲದ ಆಟಗಾರ. ಶ್ರೀಲಂಕಾ ತಮಿಳು ಮೂಲದ ಜನರ ವಿರುದ್ಧ ಹಿಂಸಾಚಾರದ ಸುದೀರ್ಘ ಇತಿಹಾಸವನ್ನು ಹೊಂದಿದೆ. ಇದು ಶ್ರೀಲಂಕಾದಲ್ಲಿ ಸುದೀರ್ಘ ಅಂತರ್ಯುದ್ಧಕ್ಕೂ ಕಾರಣವಾಯಿತು. ಇದರಿಂದಾಗಿ ಶ್ರೀಲಂಕಾ ಆಟಗಾರರು ತಮಿಳುನಾಡು ತಂಡದ ಪರ ಆಡುವುದನ್ನು ಅಭಿಮಾನಿಗಳು ಬಯಸುತ್ತಿಲ್ಲ. ಹೀಗಾಗಿ ಸಿಎಸ್​ಕೆ ತಂಡ ಕೂಡ ಲಂಕಾ ಆಟಗಾರರ ಖರೀದಿ ಮಾಡುತ್ತಿರಲಿಲ್ಲ.

ಕಳೆದ 10 ವರ್ಷಗಳಲ್ಲಿ ಶ್ರೀಲಂಕಾದ ಯಾವುದೇ ಆಟಗಾರ ಚೆನ್ನೈ ಸೂಪರ್ ಕಿಂಗ್ಸ್ ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ನುವಾನ್ ಕುಲಶೇಖರ ಅವರು 2012ರಲ್ಲಿ ಕೊನೆಯ ಬಾರಿಗೆ ಐಪಿಎಲ್‌ನಲ್ಲಿ ಸಿಎಸ್‌ಕೆ ಪರ ಆಡಿದ್ದರು. ಇದೀಗ ದಶಕಗಳ ಬಳಿಕ ಮಹೇಶ್ ತೀಕ್ಷಣ ಸಿಎಸ್​ಕೆ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಮಹೇಶ್ ತೀಕ್ಷಣ ಖರೀದಿಗೆ ಸಿಎಸ್​ಕೆಯ ಕೆಲ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ನಡೆಸಿದ್ದರು. ಇದೀಗ ಅಭಿಮಾನಿಗಳ ಆಕ್ರೋಶವನ್ನು ಬದಿಗಿರಿಸಿ ಯುವ ಸ್ಪಿನ್ನರ್​ಗೆ ಸಿಎಸ್​ಕೆ ಆಡುವ ಬಳಗದಲ್ಲಿ ಚಾನ್ಸ್ ನೀಡಿದೆ.

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್, ರಾಹುಲ್ ತ್ರಿಪಾಠಿ, ಏಡನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ಶಶಾಂಕ್ ಸಿಂಗ್, ಮಾರ್ಕೊ ಜಾನ್ಸನ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಟಿ.ನಟರಾಜನ್

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ, ಶಿವಂ ದುಬೆ, ಡ್ವೇನ್ ಬ್ರಾವೋ, ಮಹೇಶ್ ತಿಕ್ಷಣ, ಕ್ರಿಸ್ ಜೋರ್ಡಾನ್, ಮುಖೇಶ್ ಚೌಧರಿ

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ