CSK vs RCB Playing XI: ಟಾಸ್ ಗೆದ್ದ ಸಿಎಸ್‌ಕೆ: ಆರ್ಸಿಬಿ ಪ್ಲೇಯಿಂಗ್ ಇಲೆವೆನ್ ಇಲ್ಲಿದೆ ನೋಡಿ
Chennai vs Bengaluru, IPL 2025: ಐಪಿಎಲ್ 2025 ರಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಮೊದಲ ಪಂದ್ಯವನ್ನು ಇಬ್ಬರೂ ಗೆದ್ದು ಬೀಗಿದ್ದು, ಎರಡನೇ ಜಯಕ್ಕೆ ಹಾತೊರೆಯುತ್ತಿದ್ದಾರೆ. ಆರ್ಸಿಬಿ ಮೊದಲ ಮ್ಯಾಚ್ನಲ್ಲಿ ಕೆಕೆಆರ್ ವಿರುದ್ಧ ಗೆದ್ದರೆ ಸಿಎಸ್‌ಕೆ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಸಾಧಿಸಿತ್ತು.

ಬೆಂಗಳೂರು (ಮಾ. 28): ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಇಂದಿನ ಎಂಟನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ತಂಡ ಮುಖಾಮುಖಿ ಆಗುತ್ತಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಮ್ಯಾಚ್ ನಡೆಯುತ್ತಿದೆ. ಉಭಯ ತಂಡಗಳು ಮೊದಲ ಪಂದ್ಯವನ್ನು ಗೆದ್ದು ಬೀಗಿದ್ದು, ಎರಡನೇ ಜಯಕ್ಕೆ ಹಾತೊರೆಯುತ್ತಿದೆ. ಆರ್ಸಿಬಿ ಮೊದಲ ಮ್ಯಾಚ್ನಲ್ಲಿ ಕೆಕೆಆರ್ ವಿರುದ್ಧ ಗೆದ್ದರೆ ಸಿಎಸ್‌ಕೆ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಸಾಧಿಸಿತ್ತು. ಸದ್ಯ ಇಂದಿನ ಪಂದ್ಯದಲ್ಲಿ ಯಾರಿಗೆ ಗೆಲುವು ಎಂಬುದು ನೋಡಬೇಕಿದೆ.
ಈಗಾಗಲೇ ಟಾಸ್ ಪ್ರಕ್ರಿಯೆ ನಡೆದಿದ್ದು, ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್ಸಿಬಿ ಮೊದಲು ಬ್ಯಾಟಿಂಗ್ ಪ್ರಾರಂಭಿಸಲಿದೆ. ಚೆನ್ನೈ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಇತ್ತ ಆರ್ಸಿಬಿ ತಂಡದಲ್ಲಿ ಕೂಡ ಒಂದು ಬದಲಾವಣೆ ಮಾಡಲಾಗಿದೆ.
ಚೆನ್ನೈ ಪರ ರಾಹುಲ್ ತ್ರಿಪಾಠಿ ಮತ್ತು ರಚಿನ್ ರವೀಂದ್ರ ಓಪನರ್ಗಳಾದರೆ ಮೂರನೇ ಕ್ರಮಾಂಕದಲ್ಲಿ ರುತುರಾಜ್ ಗಾಯಕ್ವಾಡ್ ಆಡಲಿದ್ದಾರೆ. ನಂತರದಲ್ಲಿ ಶಿವಂ ದುಬೆ, ದೀಪಕ್ ಕೂಡ ಇದ್ದಾರೆ. ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕುರ್ರನ್ ಇದ್ದರೆ ಫಿನಿಶಿಂಗ್ ಜವಾಬ್ದಾರಿ ಎಂಎಸ್ ಧೋನಿ ಹೊರಲಿದ್ದಾರೆ. ಉಳಿದಂತೆ ರವಿಚಂದ್ರನ್ ಅಶ್ವಿನ್, ಮಹೇಶ್ ಪಥಿರನಾ, ನೂರ್ ಅಹ್ಮದ್ ಹಾಗೂ ಖಲೀಲ್ ಅಹ್ಮದ್ ಪ್ಲೇಯಿಂಗ್ ಇಲೆವೆನ್ನಲ್ಲಿದ್ದಾರೆ.
ಇತ್ತ ಆರ್ಸಿಬಿ ಪರ ಓಪನರ್ಗಳಾಗಿ ವಿರಾಟ್ ಕೊಹ್ಲಿ ಜೊತೆ ಫಿಲ್ ಸಾಲ್ಟ್ ಕಣಕ್ಕಿಳಿಯಲಿದ್ದಾರೆ. ಇವರು ಕಳೆದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದರು. ಇಬ್ಬರೂ ಅರ್ಧಶತಕ ಸಿಡಿಸಿದ್ದರು. ಇಂಪ್ಯಾಕ್ಟ್ ಪ್ಲೇಯರ್ ಆಗಿ ದೇವದತ್ ಪಡಿಕ್ಕಲ್ ಮೂರನೇ ಸ್ಥಾನದಲ್ಲಿ ಆಡಲಿದ್ದಾರೆ. ನಾಯಕನ ಪಟ್ಟ ಅಲಂಕರಿಸಿರುವ ರಜತ್ ಪಾಟಿದರ್ ನಾಲ್ಕನೇ ಕ್ರಮಾಂಕದಲ್ಲಿ ಬರಲಿದ್ದಾರೆ. ವಿದೇಶಿ ಸ್ಪೋಟಕ ಬ್ಯಾಟರ್ ಲಿಯಾಮ್ ಲಿವಿಂಗ್‌ಸ್ಟೋನ್ 5ನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಇವರು ಸ್ಪಿನ್ ಬೌಲಿಂಗ್ ಕೂಡ ಮಾಡುತ್ತಾರೆ.
CSK vs RCB, IPL 2025: ಸಿಎಸ್‌ಕೆ ವಿರುದ್ಧ ಇತಿಹಾಸ ನಿರ್ಮಿಸಲು ಸಜ್ಜಾದ ವಿರಾಟ್ ಕೊಹ್ಲಿ: ಏನಿದು ದಾಖಲೆ?
ವಿಕೆಟ್ ಕೀಪರ್ ಜವಾಬ್ದಾರಿ ಜಿತೇಶ್ ಶರ್ಮಾ ಅವರಿಗೆ ನೀಡಲಾಗಿದೆ. ಆಲ್ರೌಂಡರ್ಗಳಾದ ಟಿಮ್ ಡೇವಿಡ್ ಮತ್ತು ಕೃನಾಲ್ ಪಾಂಡ್ಯ ನಂತರದ ಸ್ಥಾನದಲ್ಲಿ ಬರಲಿದ್ದಾರೆ. ಇವರು ಫಿನಿಶಿಂಗ್ ಜವಾಬ್ದಾರಿ ಕೂಡ ನಿಭಾಯಿಸಬೇಕಿದೆ. ಇನ್ನು ಬೌಲಿಂಗ್ ವಿಭಾಗಕ್ಕೆ ಬಂದರೆ ಸ್ವಿಂಗ್ ಮಾಸ್ಟರ್ ಭುವನೇಶ್ವರ್ ಕುಮಾರ್ ಆಡುವ ಬಳಗದಲ್ಲಿ ಸೇರಿಕೊಂಡಿದ್ದಾರೆ. ಜೋಶ್ ಹ್ಯಾಜಲ್‌ವುಡ್ ಪ್ಲೇಯಿಂಗ್ ಇಲೆವೆನ್ನಲ್ಲಿದ್ದಾರೆ. ಯಶ್ವ ದಯಾಳ್ ಮತ್ತೋರ್ವ ವೇಗಿಯಾದರೆ ಸುಯೇಶ್ ಶರ್ಮಾ ಕೂಡ ಆಡುವ ಬಳಗದಲ್ಲಿದ್ದಾರೆ.
ಆರ್ಸಿಬಿ ಪ್ಲೇಯಿಂಗ್ 11: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್.
ಚೆನ್ನೈ ಪ್ಲೇಯಿಂಗ್ 11: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ರಾಹುಲ್ ತ್ರಿಪಾಠಿ, ದೀಪಕ್ ಹೂಡ, ಎಂಎಸ್ ಶಿವಂ ದುಬೆ, ರವೀಂದ್ರ ಜಡೇಜಾ, ಸ್ಯಾಮ್ ಕರನ್, ಧೋನಿ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ನೂರ್ ಅಹ್ಮದ್, ಮಹೇಶ್ ಪಥಿರನಾ, ಖಲೀಲ್ ಅಹ್ಮದ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:06 pm, Fri, 28 March 25