Dinesh Karthik: ಭಾರತ ಟಿ20 ವಿಶ್ವಕಪ್ ಗೆಲ್ಲ ಬೇಕಾದ್ರೆ ಈ ಆಟಗಾರನನ್ನು ಆಯ್ಕೆ ಮಾಡಬೇಕು ಎಂದ ಡೇಲ್ ಸ್ಟೈನ್
Dale Steyn: 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಪ್ರಶಸ್ತಿ ಗೆಲ್ಲಬೇಕು ಎಂದಾದರೆ ರಿಷಭ್ ಪಂತ್ ಅವರ ಬದಲು ಇನ್‌ಫಾರ್ಮ್ ಬ್ಯಾಟರ್ ದಿನೇಶ್ ಕಾರ್ತಿಕ್ (Dinesh Karthik) ಅವರನ್ನು ಆಯ್ಕೆ ಮಾಡಬೇಕೆಂದು ಡೇಲ್ ಸ್ಟೇನ್ ಅಭಿಪ್ರಾಯ ಪಟ್ಟಿದ್ದಾರೆ.
ಇದೇ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಗೆ ಎಲ್ಲ ತಂಡಗಳು ಈಗಿನಿಂದಲೇ ಭರ್ಜರಿ ತಯಾರಿ ಆರಂಭಿಸಿದೆ. ಟೀಮ್ ಇಂಡಿಯಾ (Team India) ಕೂಡ ಯುವ ಆಟಗಾರರನ್ನು ಕಣಕ್ಕಿಳಿಸಿ ಪ್ರಯೋಗ ನಡೆಸುತ್ತಿದ್ದು ಬಲಿಷ್ಠ ಪ್ಲೇಯರ್ಗಳನ್ನು ಹುಡುಕುತ್ತಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಈ ಬಾರಿ ವಿಶ್ವಕಪ್ನಲ್ಲಿ ಭಾಗವಹಿಸಲಿರುವ ಕಾರಣ ಸಾಕಷ್ಟು ಕುತೂಹಲ ಕೆರಳಿಸಿದೆ. ಹೀಗಿರುವಾಗ ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಡೇಲ್ ಸ್ಟೈನ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಪ್ರಶಸ್ತಿ ಗೆಲ್ಲಬೇಕು ಎಂದಾದರೆ ರಿಷಭ್ ಪಂತ್ ಅವರ ಬದಲು ಇನ್‌ಫಾರ್ಮ್ ಬ್ಯಾಟರ್ ದಿನೇಶ್ ಕಾರ್ತಿಕ್ (Dinesh Karthik) ಅವರನ್ನು ಆಯ್ಕೆ ಮಾಡಬೇಕೆಂದು ಸ್ಟೇನ್ ಅಭಿಪ್ರಾಯ ಪಟ್ಟಿದ್ದಾರೆ.
ಹೌದು, ನಿವೃತ್ತಿಯ ಆಲೋಚನೆಯಲ್ಲಿದ್ದ ಕಾರ್ತಿಕ್ಗೆ ಐಪಿಎಲ್ 2022 ಟರ್ನಿಂಗ್ ಪಾಯಿಂಟ್ ಆಯಿತು. ಆರ್ಸಿಬಿ ಪರ ಗ್ರೇಟ್ ಫಿನಿಶರ್ ಆಗಿ ಮೂಡಿಬಂದ ಇವರು ಇದೀಗ ಟೀಮ್ ಇಂಡಿಯಾಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ. ಸದ್ಯ ಸಾಗುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಈ ಮೂಲಕ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸುವ ಅವಕಾಶ ಗಿಟ್ಟಿಸಿಕೊಳ್ಳುವತ್ತ ಚಿತ್ತ ನೆಟ್ಟಿದ್ದಾರೆ.
IND vs SA 5th T20I: ಇಂದು ಐದನೇ ಟಿ20: ಚಿನ್ನಸ್ವಾಮಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ
“ಭಾರತ- ದಕ್ಷಿಣ ಆಫ್ರಿಕಾ ಸರಣಿಯಲ್ಲಿ ರಿಷಭ್ ಪಂತ್‌ಗೆ ನಾಲ್ಕು ಅವಕಾಶಗಳು ಸಿಕ್ಕಿದ್ದವು. ಆದರೆ, ಇದನ್ನು ಅವರು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಲಿಲ್ಲ. ಮಾಡಿದ್ದ ತಪ್ಪುಗಳನ್ನು ಅವರು ಮತ್ತೆ ಮತ್ತೆ ಮುಂದುವರೆಸುತ್ತಿದ್ದಾರೆ. ಆದರೆ, ದಿನೇಶ್ ಕಾರ್ತಿಕ್ ಪ್ರತಿ ಬಾರಿ ಕ್ರೀಸ್‌ಗೆ ಬಂದಾಗ ತಾವು ಕ್ಲಾಸ್ ಆಟಗಾರ ಎಂಬುದನ್ನು ಸಾಬೀತುಪಡಿಸಿದ್ದಾರೆ. ನೀವು ಮುಂದಿನ ಟಿ20 ವಿಶ್ವಕಪ್ ಟೂರ್ನಿಯನ್ನು ಗೆಲ್ಲಬೇಕೆಂದರೆ ಅತ್ಯುತ್ತಮ ಫಾರ್ಮ್‌ನಲ್ಲಿರುವ ಆಟಗಾರನನ್ನು ಆಯ್ಕೆ ಮಾಡಬೇಕಾಗುತ್ತದೆ,” ಎಂದು ಭಾರತ ತಂಡಕ್ಕೆ ಸಲಹೆ ನೀಡಿದ್ದಾರೆ.
“ದಿನೇಶ್ ಕಾರ್ತಿಕ್ ಸದ್ಯ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಇವರು ಇದೇ ಲಯವನ್ನು ಮುಂದುವರಿಸಿದರೆ, ಟಿ20 ವಿಶ್ವಕಪ್ ಟೂರ್ನಿ ಆಡಲು ಆಸ್ಟ್ರೇಲಿಯಾ ವಿಮಾನ ಹತ್ತುವ ಆಟಗಾರರ ಪೈಕಿ ಮೊದಲನೇ ಹೆಸರು ದಿನೇಶ್ ಕಾರ್ತಿಕ್ ಆಗಲಿದ್ದಾರೆ,” ಎಂಬುದು ಸ್ಟೈನ್ ಮಾತು.
ಇಂದು ಐದನೇ ಟಿ20:
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಅಂತಿಮ ಐದನೇ ಟಿ20 ಪಂದ್ಯ ನಡೆಯಲಿದೆ. ಈಗಾಗಲೇ 2-2 ಅಂತರದಿಂದ ಸರಣಿ ಸಮಬಲಗೊಂಡಿರುವ ಕಾರಣ ಈ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದ್ದು ಬೆಂಗಳೂರಿನಲ್ಲಿ ಹೈವೋಲ್ಟೇಜ್ ಕದನ ನಿರೀಕ್ಷಿಸಲಾಗಿದೆ. ಮೊದಲೆರಡು ಪಂದ್ಯದಲ್ಲಿ ಹರಿಣಗಳ ಪಡೆ ಗೆದ್ದಿದ್ದರೆ ಮತ್ತೆರಡು ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿತ್ತು. ವಿಶೇಷ ಎಂದರೆ ರಿಷಭ್ ಪಂತ್ ಪಡೆ ಈ ಸರಣಿಯ ನಾಲ್ಕೂ ಪಂದ್ಯಗಳಲ್ಲೂ ಮೊದಲು ಬ್ಯಾಟಿಂಗ್ ಮಾಡಿದೆ. ಮೊದಲ ಎರಡು ಪಂದ್ಯಗಳಲ್ಲಿ ಟಾರ್ಗೆಟ್ ನೀಡಿ ಸೋತರೆ, ಕೊನೆಯ ಎರಡು ಪಂದ್ಯಗಳಲ್ಲಿ ಎದುರಾಳಿಯನ್ನು ಟಾರ್ಗೆಟ್ ಮುಟ್ಟದಂತೆ ಮಾಡಿತ್ತು. ಹೀಗಾಗಿ ಟೀಮ್ ಇಂಡಿಯಾದ ಪಾಲಿಗೆ ಟಾಸ್ ಕೇವಲ ಪಂದ್ಯದ ಭಾಗವಷ್ಟೇ ಎಂಬಂತೆ ಆಗಿಬಿಟ್ಟಿದೆ.
ಕ್ರಿಕೆಟ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:15 pm, Sun, 19 June 22