AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾ ವೇಗಿಯನ್ನು ಹಾಡಿಹೊಗಳಿದ ಡೇಲ್ ಸ್ಟೇನ್

Mohammed Siraj: 2017 ರಲ್ಲಿ ವೈಟ್ ಬಾಲ್​ಗೆ ಪಾದಾರ್ಪಣೆ ಮಾಡಿದಾಗಿನಿಂದ, ಸಿರಾಜ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಟೆಸ್ಟ್ ಆಡಲು ಬಹಳ ವರ್ಷ ಕಾಯಬೇಕಾಯಿತು.

Team India: ಟೀಮ್ ಇಂಡಿಯಾ ವೇಗಿಯನ್ನು ಹಾಡಿಹೊಗಳಿದ ಡೇಲ್ ಸ್ಟೇನ್
Team India bowlers
TV9 Web
| Edited By: |

Updated on: Jul 29, 2021 | 7:09 PM

Share

ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ದದ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಸಜ್ಜಾಗಿ ನಿಂತಿದೆ. ಆಗಸ್ಟ್ 4 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ ಪ್ರಬಲ ಪೈಪೋಟಿ ನೀಡಲಿದೆ ಎಂದಿದ್ದಾರೆ ದಕ್ಷಿಣ ಆಫ್ರಿಕಾದ ವೇಗಿ ಡೇಲ್ ಸ್ಟೇನ್. ಟೀಮ್ ಇಂಡಿಯಾದಲ್ಲಿ ಅತ್ಯುತ್ತಮ ಬೌಲರುಗಳ ದಂಡೇ ಇದ್ದು, ಹೀಗಾಗಿ ಆತಿಥೇಯ ಆಂಗ್ಲರಿಗೆ ಭಾರತದ ವಿರುದ್ದ ಗೆಲ್ಲುವುದು ಅಂದುಕೊಂಡಷ್ಟು ಸುಲಭವಲ್ಲ. ಅದರಲ್ಲೂ ಮೊಹಮ್ಮದ್ ಸಿರಾಜ್​ನಂತಹ ವೇಗಿ ಟೀಮ್ ಇಂಡಿಯಾದಲ್ಲಿರುವುದು ಕೊಹ್ಲಿ ಪಡೆಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಸ್ಟೇನ್ ಗನ್ ತಿಳಿಸಿದ್ದಾರೆ.

2017 ರಲ್ಲಿ ವೈಟ್ ಬಾಲ್​ಗೆ ಪಾದಾರ್ಪಣೆ ಮಾಡಿದಾಗಿನಿಂದ, ಸಿರಾಜ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಟೆಸ್ಟ್ ಆಡಲು ಬಹಳ ಸಮಯ ಕಾಯಬೇಕಾಯಿತು. ಕಳೆದ ವರ್ಷದ ಕೊನೆಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವಕಾಶ ಪಡೆದ ಸಿರಾಜ್ ಶ್ರೇಷ್ಠ ಪ್ರದರ್ಶನ ನೀಡಿದ್ದರು. ಆಸ್ಟ್ರೇಲಿಯಾ ವಿರುದ್ದದ ಮೂರು ಟೆಸ್ಟ್ ಪಂದ್ಯಗಳಿಂದ 13 ವಿಕೆಟ್ ಉರುಳಿಸುವ ಮೂಲಕ ಸರಣಿಯನ್ನು 2-1 ಅಂತರದಿಂದ ಗೆಲ್ಲುವಲ್ಲಿ ಸಿರಾಜ್ ಪ್ರಮುಖ ಪಾತ್ರವಹಿಸಿದ್ದರು.

ಈ ಭರ್ಜರಿ ಪ್ರದರ್ಶನದೊಂದಿಗೆ ಟೀಮ್ ಇಂಡಿಯಾ ಟೆಸ್ಟ್ ತಂಡದ ಖಾಯಂ ಸದಸ್ಯನಾಗಿರುವ ಸಿರಾಜ್, ಇಂಗ್ಲೆಂಡ್ ಪಾಲಿಗೆ ದುಸ್ವಪ್ನವಾಗಲಿದ್ದಾರೆ ಎಂದಿದ್ದಾರೆ ಸ್ಟೇನ್. ಏಕೆಂದರೆ ಸಿರಾಜ್ ಯಾವುದೇ ಪಂದ್ಯದ ಗತಿಯನ್ನೇ ಬದಲಿಸಬಲ್ಲ ಬೌಲರ್. ಆತನ ಮನೋಭಾವ ಕೂಡ ಆಗಿದೆ. ಸಾಮಾನ್ಯವಾಗಿ ಇಂಗ್ಲೆಂಡ್​ನಲ್ಲಿ ಆಡುವಾಗ, ನಮ್ಮ ಮನಸ್ಥಿತಿ ಬಗ್ಗೆ ಮರೆತುಬಿಡುತ್ತೇವೆ.

ಬೌಲಿಂಗ್ ಅಂದರೆ ಚೆಂಡನ್ನು ನಿರ್ದಿಷ್ಟ ಸ್ಥಾನದಲ್ಲಿ ಎಸೆಯುವುದು ಮಾತ್ರವಲ್ಲ, ಆದರೆ ಪಂದ್ಯದ ವೇಳೆ ನೀವು ತೋರುವ ಮನೋಭಾವವೂ ದೊಡ್ಡ ವ್ಯತ್ಯಾಸವನ್ನುಂಟು ಮಾಡುತ್ತದೆ. ಇದು ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ. ಈ ಮೂಲಕ ಆತ ಆಡಲು ಬಯಸದ ಎಲ್ಲಾ ಚೆಂಡುಗಳನ್ನು ಆಡಲು ಒತ್ತಾಯಿಸಲಾಗುತ್ತದೆ. ಆಸ್ಟ್ರೇಲಿಯಾದಲ್ಲಿ ನಡೆಯುವ ಟೆಸ್ಟ್ ಸರಣಿಯನ್ನು ಭಾರತ ಗೆಲ್ಲುವಲ್ಲಿ ಸಿರಾಜ್​ ಅವರ ಇಂತಹ ಆತ್ಮ ವಿಶ್ವಾಸ ಮನೋಭಾವ ಕೂಡ ಒಂದು ಕಾರಣ ಎಂದು ಸ್ಟೇನ್ ತಿಳಿಸಿದರು.

ಹೀಗಾಗಿ ಆಂಗ್ಲರ ಪಾಲಿಗೆ ಇಂಗ್ಲೆಂಡ್ ಪಿಚ್​ನಲ್ಲಿ ಸಿರಾಜ್ ಕಂಟಕವಾಗಲಿದ್ದಾರೆ. ಈ ಹಿಂದೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಆತನನ್ನು ಆಡಿಸಿದ್ರೆ ಫಲಿತಾಂಶದಲ್ಲಿ ಗೆಲುವು ಕಾಣಬಹುದಿತ್ತು ಎಂದು ಅಭಿಪ್ರಾಯಪಟ್ಟ ಸ್ಟೇನ್, ಮುಂದಿನ ದಿನಗಳಲ್ಲಿ ಮೊಹಮ್ಮದ್ ಸಿರಾಜ್  ಟೆಸ್ಟ್ ಕ್ರಿಕೆಟ್​ನ ಅತ್ಯುತ್ತಮ ಬೌಲರ್ ಎನಿಸಿಕೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದರು.

ಭಾರತ-ಇಂಗ್ಲೆಂಡ್ ನಡುವೆ ಟೆಸ್ಟ್ ಸರಣಿ ಆಗಸ್ಟ್ 4 ರಿಂದ ಪ್ರಾರಂಭವಾಗಲಿದೆ. 2ನೇ ಟೆಸ್ಟ್ ಪಂದ್ಯವು ಆಗಸ್ಟ್ 12 ರಿಂದ 16ರವರೆಗೆ ನಡೆಯಲಿದೆ. ಹಾಗೆಯೇ ಮೂರನೇ ಪಂದ್ಯವು 25 ರಿಂದ ಪ್ರಾರಂಭವಾಗಲಿದ್ದು, 4ನೇ ಟೆಸ್ಟ್​ ಸೆಪ್ಟೆಂಬರ್ 2 ಕ್ಕೆ ಶುರುವಾಗಿ ಸೆ.6 ರವರೆಗೆ ನಡೆಯಲಿದೆ. ಇನ್ನು ಅಂತಿಮ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 10 ರಿಂದ ಸೆ.14ರವರೆಗೆ ಜರುಗಲಿದೆ.

ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಹನುಮಾ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್, ಉಮೇಶ್ ಯಾದವ್, ಕೆ.ಎಲ್. ರಾಹುಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್

ಹೆಚ್ಚುವರಿ ಆಟಗಾರರು: ಪ್ರಸಿದ್ಧ್ ಕೃಷ್ಣ, ಅರ್ಝಾನ್ ನಾಗ್ವಾಸ್ವಾಲಾ

ಇದನ್ನೂ ಓದಿ: ಮದ್ಯಪಾನ ಮಾಡಿ ಶತಕ ಸಿಡಿಸಿದ್ದ ಗ್ಯಾರಿ ಸೋಬರ್ಸ್​..!

ಇದನ್ನೂ ಓದಿ: ಸೂರ್ಯಕುಮಾರ್ ಯಾದವ್​ಗೆ ಅವಕಾಶ ಕೈತಪ್ಪುವ ಆತಂಕ

(Dale Steyn heaps praises on Rcb Pacer Mohammed Siraj)

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ