IND vs ENG: ಮೊಹಮ್ಮದ್ ಸಿರಾಜ್ಗೆ 5 ವಿಕೆಟ್ ಖಚಿತ: ಡೇಲ್ ಸ್ಟೈನ್
India vs England 5th Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯವು ಇಂದಿನಿಂದ (ಜುಲೈ 31) ಶುರುವಾಗಲಿದೆ. ಕೆನ್ನಿಂಗ್ಟನ್ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ 5 ಪಂದ್ಯಗಳ ಸರಣಿಯಲ್ಲಿ 2-1 ಅಂತರದಿಂದ ಇಂಗ್ಲೆಂಡ್ ಮುನ್ನಡೆ ಸಾಧಿಸಿದ್ದು, ಅಂತಿಮ ಪಂದ್ಯದಲ್ಲಿ ಗೆದ್ದರೆ ಮಾತ್ರ ಭಾರತ ತಂಡ ಸರಣೀಯನ್ನು ಡ್ರಾ ಮಾಡಿಕೊಳ್ಳಬಹುದು.

ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 5 ವಿಕೆಟ್ ಕಬಳಿಸಿದ್ದಾರೆ. ಇಂತಹದೊಂದು ಭವಿಷ್ಯ ನುಡಿದಿರುವುದು ಮತ್ಯಾರೂ ಅಲ್ಲ. ಸೌತ್ ಆಫ್ರಿಕಾ ತಂಡದ ಮಾಜಿ ವೇಗಿ ಡೇಲ್ ಸ್ಟೈನ್. ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಸಿರಾಜ್ ಮಾರಕ ದಾಳಿ ಸಂಘಟಿಸಲಿದ್ದಾರೆ ಎಂದು ಸ್ಟೈನ್ ಭವಿಷ್ಯ ನುಡಿದಿದ್ದಾರೆ.
ಡೇಲ್ ಸ್ಟೈಲ್ ಪ್ರಕಾರ, ಮೊಹಮ್ಮದ್ ಸಿರಾಜ್ ಓವಲ್ ಮೈದಾನದಲ್ಲಿ 5 ವಿಕೆಟ್ ಕಬಳಿಸುವುದು ಖಚಿತ. ಅಂತಹದೊಂದು ಪ್ರದರ್ಶನವನ್ನು ಟೀಮ್ ಇಂಡಿಯಾ ವೇಗಿಯಿಂದ ನಿರೀಕ್ಷಿಸಬಹುದು ಎಂದು ಲೇಟ್ ಸ್ವಿಂಗ್ ಸ್ಪೆಷಲಿಸ್ಟ್ ಡೇಲ್ ಸ್ಟೈನ್ ಹೇಳಿದ್ದಾರೆ.
ಇದಕ್ಕೂ ಮುನ್ನ ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಮೊಹಮ್ಮದ್ ಸಿರಾಜ್ 6 ವಿಕೆಟ್ ಪಡೆದಿದ್ದರು. ಅಲ್ಲದೆ 7 ಇನಿಂಗ್ಸ್ಗಳಿಂದ 14 ವಿಕೆಟ್ ಕಬಳಿಸಿ ಈ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.
ಇದೀಗ ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿರುವ ಕೊನೆಯ ಟೆಸ್ಟ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಭಾರತೀಯ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಏಕೆಂದರೆ ಈ ಪಂದ್ಯದಿಂದ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದು, ಹೀಗಾಗಿ ಸಿರಾಜ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ದಾಳಿ ಸಂಘಟಿಸಲಿದೆ.
ಇತ್ತ ಬುಮ್ರಾ ಅನುಪಸ್ಥಿತಿ ನಡುವೆ 2ನೇ ಟೆಸ್ಟ್ ಮ್ಯಾಚ್ನ ಮೊದಲ ಇನಿಂಗ್ಸ್ನಲ್ಲಿ 6 ವಿಕೆಟ್ ಕಬಳಿಸಿದ್ದ ಮೊಹಮ್ಮದ್ ಸಿರಾಜ್, ಇದೀಗ ನಿರ್ಣಾಯಕ ಪಂದ್ಯದಲ್ಲೂ 5 ವಿಕೆಟ್ ಪಡೆದು ಮಿಂಚಲಿದ್ದಾರೆ ಎಂದು ಡೇಲ್ ಸ್ಟೈನ್ ಭವಿಷ್ಯ ನುಡಿದಿದ್ದಾರೆ.
ಭಾರತ-ಇಂಗ್ಲೆಂಡ್ ಪ್ಲೇಯಿಂಗ್ 11:
ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್ (ನಾಯಕ), ಜೋ ರೂಟ್, ಹ್ಯಾರಿ ಬ್ರೂಕ್, ಜೇಕಬ್ ಬೆಥೆಲ್, ಜೇಮಿ ಸ್ಮಿತ್, ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಜೇಮಿ ಓವರ್ಟನ್, ಜೋಶ್ ಟಂಗ್.
ಇದನ್ನೂ ಓದಿ: ಜಯ ಜಯ ಜಯ ಜಯ ಜಯಯೇ… ಆಸ್ಟ್ರೇಲಿಯಾ ದಾಖಲೆಯ ಜಯಭೇರಿ
ಭಾರತ ಸಂಭಾವ್ಯ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್ಮನ್ ಗಿಲ್, ಕರುಣ್ ನಾಯರ್, ಧ್ರುವ್ ಜುರೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ.
