AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs NZ, 1st Test: ನ್ಯೂಜಿಲೆಂಡ್​ಗೆ ಮಿಚೆಲ್-ಬ್ಲಂಡೆಲ್ ಆಸರೆ: ಇಂಗ್ಲೆಂಡ್​ಗೆ ತಿರುಗೇಟು ನೀಡುತ್ತಿರುವ ಕೇನ್ ಪಡೆ

England vs New Zealand, 1st Test: ಡ್ಯಾರಿ ಮಿಚೆಲ್ (Daryl Mitchell) ಹಾಗೂ ಟಾಮ್ ಬ್ಲಂಡೆಲ್ ಕ್ರೀಸ್ ಕಚ್ಚಿ ಆಡುತ್ತಿದ್ದು ಶತಕದ ಅಂಚಿನಲ್ಲಿದ್ದಾರೆ. ಒಟ್ಟಾರೆ ನ್ಯೂಜಿಲೆಂಡ್ ಎರಡನೇ ದಿನಕ್ಕೇ 227 ರನ್​ಗಳ ಮುನ್ನಡೆ ಸಾಧಿಸಿದೆ.

ENG vs NZ, 1st Test: ನ್ಯೂಜಿಲೆಂಡ್​ಗೆ ಮಿಚೆಲ್-ಬ್ಲಂಡೆಲ್ ಆಸರೆ: ಇಂಗ್ಲೆಂಡ್​ಗೆ ತಿರುಗೇಟು ನೀಡುತ್ತಿರುವ ಕೇನ್ ಪಡೆ
Daryl Mitchell, Tom Blundell
TV9 Web
| Updated By: Vinay Bhat|

Updated on:Jun 04, 2022 | 7:58 AM

Share

ಇಂಗ್ಲೆಂಡ್ ಪ್ರವಾಸದಲ್ಲಿರುವ ನ್ಯೂಜಿಲೆಂಡ್ (England vs New Zealand) ಕ್ರಿಕೆಟ್ ತಂಡ ಮೊದಲ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ಲಂಡನ್​ನ ಲಾರ್ಡ್ಸ್ (Lords)​ ಮೈದಾನದಲ್ಲಿ ಆರಂಭವಾಗಿರುವ ಪ್ರಥಮ ಟೆಸ್ಟ್​ನ ದ್ವಿತೀಯ ದಿನದಾಟದ ಅಂತ್ಯಕ್ಕೆ ಕಿವೀಸ್ ಪಡೆ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ 4 ವಿಕೆಟ್ ಕಳೆದುಕೊಂಡು 236 ರನ್ ಕಲೆಹಾಕಿದೆ. ಡ್ಯಾರಿ ಮಿಚೆಲ್ (Daryl Mitchell) ಹಾಗೂ ಟಾಮ್ ಬ್ಲಂಡೆಲ್ ಕ್ರೀಸ್ ಕಚ್ಚಿ ಆಡುತ್ತಿದ್ದು ಶತಕದ ಅಂಚಿನಲ್ಲಿದ್ದಾರೆ. ಒಟ್ಟಾರೆ ನ್ಯೂಜಿಲೆಂಡ್ ಎರಡನೇ ದಿನಕ್ಕೇ 227 ರನ್​ಗಳ ಮುನ್ನಡೆ ಸಾಧಿಸಿದೆ. ಮಿಚೆಲ್ ಹಾಗೂ ಬ್ಲಂಡೆಲ್ ಜೋಡಿ ಎರಡನೇ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಕುಸಿಯುವುದರಿಂದ ತಡೆದಿದ್ದು ಮಾತ್ರವಲ್ಲ ಸವಾಲಿನ ಮೊತ್ತ ಪೇರಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಬ್ಯಾಟಿಂಗ್ ಆರಂಭಿಸಿದ ಕಿವೀಸ್ ಪಡೆ ಭಾರೀ ಆಘಾತಕ್ಕೆ ಒಳಗಾಗಿ ಅಗ್ರ ಕ್ರಮಾಂಕದ ಆರು ಆಟಗಾರರು ಶೀಘ್ರವಾಗಿ ವಿಕೆಟ್ ಒಪ್ಪಿಸಿ ಫೆವಿಲಿಯನ್‌ಗೆ ಸೇರಿದರು. ಇಂಗ್ಲೆಂಡ್ ತಂಡಕ್ಕೆ ಅನುಭವಿ ಜೇಮ್ಸ್ ಆಂಡರ್ಸನ್ ಹಾಗೂ ಚೊಚ್ಚಲ ಪಂದ್ಯವಾಡುತ್ತಿರುವ ಮ್ಯಾಟಿ ಪಾಟ್ಸ್ ತಲಾ 4 ವಿಕೆಟ್ಸ್ ಪಡೆದು ಮಿಂಚಿದರು. ಪ್ರಮುಖ ಬ್ಯಾಟರ್​ಗಳ ವೈಫಲ್ಯದ ನಡುವೆಯೂ ಕೆಳ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಕಾಲಿನ್ ಡಿಗ್ರ್ಯಾಂಡ್ಹೊಮ್ 42(50), ಟಿಮ್ ಸೌಥಿ 26(23) ಉಪಯುಕ್ತ ಬ್ಯಾಟಿಂಗ್ ಮೂಲಕ ನೆರವಾದರು. ಪರಿಣಾಮ ಶತಕದ ಗಡಿದಾಟಿದ ಕಿವೀಸ್ 132 ರನ್​ಗಳಿಗೆ ಸರ್ವಪತನ ಕಂಡಿತು.

ನಂತರ ತನ್ನ ಮೊದಲ ಇನ್ನಿಂಗ್ಸ್​ ಶುರುಮಾಡಿದ ಇಂಗ್ಲೆಂಡ್ ಪರ ಆರಂಭಿಕರಾಗಿ ಕಣಕ್ಕಿಳಿದ ಅಲೆಕ್ಸ್ ಲೀಸ್ 25(77) ಹಾಗೂ ಜ್ಯಾಕ್ ಕ್ರಾವ್ಲೆ 43(56) ಮೊದಲ ವಿಕೆಟ್​​ಗೆ 59 ರನ್ ಗಳ ಭರ್ಜರಿ ಆರಂಭ ನೀಡಿದರು. ಆದರೆ ನಂತರದಲ್ಲಿ ನಾಟಕೀಯ ಕುಸಿತ ಕಂಡ ಆಂಗ್ಲರ ಪಡೆ, ಕೇವಲ 25 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡು ಭಾರೀ ಆಘಾತ ಕಂಡಿತು. ಮಧ್ಯಮ ಕ್ರಮಾಂಕದಲ್ಲಿ ಬಂದ ನಾಯಕ ಬೆನ್ ಸ್ಟೋಕ್ಸ್(1) ಸೇರಿದಂತೆ ಯಾವುದೇ ಆಟಗಾರರು ನೆಲಕಚ್ಚಿ ಆಡಲಿಲ್ಲ. ಮೊದಲ ದಿನದಂತ್ಯಕ್ಕೆ ಇಂಗ್ಲೆಂಡ್​ 7 ವಿಕೆಟ್ ನಷ್ಟಕ್ಕೆ 116 ರನ್ ಗಳಿಸಿ ದ್ವಿತೀಯ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು.

ಇದನ್ನೂ ಓದಿ
Image
French Open 2022: ಜೆರೆವ್​ಗೆ ಇಂಜುರಿ; ದಾಖಲೆಯ 14ನೇ ಬಾರಿಗೆ ಫ್ರೆಂಚ್ ಓಪನ್ ಫೈನಲ್‌ ತಲುಪಿದ ರಾಫೆಲ್ ನಡಾಲ್!
Image
ಕೇವಲ ಸ್ಪೀಡ್ ಇದ್ದರೆ ಸಾಲದು! ಉಮ್ರಾನ್ ಮಲಿಕ್​ ಕಂಡರೆ ಪಾಕ್ ವೇಗಿಗ್ಯಾಕೆ ಇಷ್ಟೊಂದು ಹೊಟ್ಟೆಕಿಚ್ಚು
Image
IND vs SA: ಹೊಸ ಹೇರ್ ಸ್ಟೈಲ್​ನಲ್ಲಿ ಮಿಂಚಿದ ಚಹಾಲ್; ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಖತ್ ವೈರಲ್
Image
IPL 2022: ಈ ಐಪಿಎಲ್​ ನನಗೆ ಸಾಕಷ್ಟು ವಿಶಿಷ್ಟವಾಗಿದ್ದರೂ ಅದೊಂದು ನಿರಾಸೆ ನನ್ನನ್ನು ಕಾಡುತ್ತಿದೆ; ಜೋಸ್ ಬಟ್ಲರ್

Asia Cup 2022: ಶ್ರೀಲಂಕಾ ಏಷ್ಯಾಕಪ್ ಆತಿಥ್ಯ ವಹಿಸಬೇಕೆಂದರೆ ಈ ಸರಣಿ ಯಶಸ್ವಿಯಾಗಲೇಬೇಕು..!

ಎರಡನೇ ದಿನದಾಟ ಆರಂಭಿಸಿದ ಇಂಗ್ಲೆಂಡ್ 20 ರನ್‌ಗಳನ್ನು ಸೇರಿಸುವಲ್ಲಿ ಮಾತ್ರವೇ ಯಶಸ್ವಿಯಾಗಿ 141 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 9 ರನ್‌ಗಳ ಅಲ್ಪ ಮುನ್ನಡೆಯನ್ನು ಪಡೆಯಿತು. ಅದಾದ ಬಳಿಕ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಮತ್ತೊಮ್ಮೆ ಕುಸಿತ ಕಾಣುತ್ತಾ ಸಾಗಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಟಾಮ್‌ ಲಾಥಂ(14), ವಿಲ್‌ ಯಂಗ್(1), ಕೇನ್‌ ವಿಲಿಯಂಸನ್(15)‌ ಹಾಗೂ ಡ್ವೇನ್‌ ಕಾನ್ವೆ(13) ನಿರೀಕ್ಷಿತ ಬ್ಯಾಟಿಂಗ್‌ ಪ್ರದರ್ಶಿಸುವಲ್ಲಿ ವಿಫಲರಾದರು. ಪರಿಣಾಮ ಕಿವೀಸ್‌ ಪಡೆ 56 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡು ಆಘಾತ ಅನುಭವಿಸಿತು.

ಆದರೆ, 5ನೇ ವಿಕೆಟ್‌ಗೆ ಜೊತೆಯಾದ ಟಾಮ್‌ ಬ್ಲಂಡೆಲ್‌(90*) ಹಾಗೂ ಡ್ಯಾರಿ ಮಿಚೆಲ್(97*)‌ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದರು. ಟಾಪ್‌ ಆರ್ಡರ್ ವೈಫಲ್ಯದ ನಡುವೆಯೂ ಜವಾಬ್ದಾರಿಯುತ ಆಟವಾಡಿದ ಈ ಜೋಡಿ 5ನೇ ವಿಕೆಟ್‌ಗೆ ಅಜೇಯ 180 ರನ್‌ಗಳ ಜೊತೆಯಾಟದಿಂದ ತಂಡಕ್ಕೆ ಆಸರೆಯಾದರು. ಪರಿಣಾಮ 2ನೇ ದಿನದ ಅಂತ್ಯಕ್ಕೆ ನ್ಯೂಜಿಲೆಂಡ್‌ 4 ವಿಕೆಟ್‌ ನಷ್ಟಕ್ಕೆ 236 ರನ್‌ಗಳಿಸಿದ್ದು, 227 ರನ್‌ಗಳ ಮುನ್ನಡೆ ಪಡೆದುಕೊಂಡಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:58 am, Sat, 4 June 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!