AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

W,W,W,W: 4 ಎಸೆತಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಶಾನಕ!

MLC 2026: ಕೊನೆಯ ಓವರ್​ನಲ್ಲಿ ಗೆಲ್ಲಲು 6 ಎಸೆತಗಳಲ್ಲಿ 15 ರನ್‌ಗಳ ಅವಶ್ಯಕತೆ. ಕೈಯಲ್ಲಿ 5 ಪ್ರಮುಖ ವಿಕೆಟ್‌ಗಳು. ಕ್ರೀಸ್​ನಲ್ಲಿ ಇಬ್ಬರು ಬಲಿಷ್ಠ ದಾಂಡಿಗರು. ಎಲ್ಲರೂ ಟೆಕ್ಸಾಸ್ ಸೂಪರ್ ಕಿಂಗ್ಸ್ ಸುಲಭವಾಗಿ ಗೆಲ್ಲುತ್ತದೆ ಎಂದೇ ಭಾವಿಸಿದ್ದರು. ಆದರೆ, ಸಿಯಾಟಲ್ ಓರ್ಕಾಸ್ ತಂಡದ ಪರ ಕೊನೆಯ ಓವರ್ ಎಸೆದ ದಸುನ್ ಶಾನಕ ಇಡೀ ಪಂದ್ಯದ ಚಿತ್ರಣವನ್ನೇ ಬದಲಾಯಿಸಿದರು.

W,W,W,W: 4 ಎಸೆತಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಶಾನಕ!
Dasun ShanakaImage Credit source: MLC
ಝಾಹಿರ್ ಯೂಸುಫ್
|

Updated on: Jul 06, 2026 | 10:59 AM

Share

ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ (MLC 2026) ಟೂರ್ನಿಯ 21ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಪೊಮೊನಾದ ನೈಟ್ ರೈಡರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸಿಯಾಟಲ್ ಓರ್ಕಾಸ್ vs ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಯಾಟಲ್ ಓರ್ಕಾಸ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 121 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ಟೆಕ್ಸಾಸ್ ಸೂಪರ್ ಕಿಂಗ್ಸ್ ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ತಂಡವು 69 ರನ್​ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಬ್ಯಾಟರ್​ಗಳು ಪೆವಿಲಿಯನ್ ಸೇರಿದ್ದರು.

ಇದಾಗ್ಯೂ ಶುಭಂ ರಂಜಾನೆ (40) ಹಾಗೂ ಡೊನವನ್ ಫೆರೇರಾ ಹೋರಾಟ ಮುಂದುವರೆಸಿದ್ದರು. ಪರಿಣಾಮ ಕೊನೆಯ ಓವರ್​ನಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್  ತಂಡಕ್ಕೆ ಗೆಲ್ಲಲು 15 ರನ್​ಗಳು ಬೇಕಿತ್ತು.

ಈ ಹಂತದಲ್ಲಿ ಸಿಯಾಟಲ್ ಓರ್ಕಾಸ್ ತಂಡದ ನಾಯಕ ಮಾರ್ಕಸ್ ಸ್ಟೊಯಿನಿಸ್ ಚೆಂಡನ್ನು ಶ್ರೀಲಂಕಾದ ಸ್ಟಾರ್ ಆಲ್ ರೌಂಡರ್ ದಸುನ್ ಶಾನಕ ಅವರ ಕೈಗಿತ್ತರು.

4 ಎಸೆತಗಳಲ್ಲಿ 4 ವಿಕೆಟ್​:

ಕೊನೆಯ ಓವರ್​ನಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ ದಸುನ್ ಶಾನಕ ಸತತ 4 ಎಸೆತಗಳಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಟೆಕ್ಸಾಸ್ ಸೂಪರ್ ಕಿಂಗ್ಸ್ ವಿರುದ್ಧ ಸಿಯಾಟಲ್ ಓರ್ಕಾಸ್ ತಂಡಕ್ಕೆ 9 ರನ್‌ಗಳ ರೋಚಕ ಜಯ ತಂದುಕೊಟ್ಟಿದ್ದಾರೆ. ಈ ಓವರ್​ನ ವಿವರಗಳು ಈ ಕೆಳಗಿನಂತಿದೆ…

    • ಮೊದಲ ಎಸೆತ (19.1): ಶುಭಂ ರಂಜಾನೆ ಪಾಯಿಂಟ್ ಮೇಲಿಂದ ಬೌಂಡರಿ ಬಾರಿಸಿದರು (ಗೆಲುವಿಗೆ 5 ಎಸೆತಗಳಲ್ಲಿ 11 ರನ್ ಬೇಕಿತ್ತು).
    •  ಎರಡನೇ ಎಸೆತ (19.2): ಒಂದು ರನ್ ಮೂಲಕ ಸಮೀಕರಣ 4 ಎಸೆತಗಳಲ್ಲಿ 10 ರನ್‌ಗಳಿಗೆ ಬಂದು ನಿಂತಿತು.
    •  ಮೂರನೇ ಎಸೆತ (19.3): ಕ್ರೀಸ್‌ನಲ್ಲಿ ಅಪಾಯಕಾರಿಯಾಗಿದ್ದ ಡೊನೊವನ್ ಫೆರೇರಾ (22 ರನ್) ಶಾನಕ ಅವರ ಅದ್ಭುತ ಸ್ಲೋವರ್ ಬಾಲ್‌ಗೆ ಕ್ಲೀನ್ ಬೌಲ್ಡ್ ಆದರು.
    •  ನಾಲ್ಕನೇ ಎಸೆತ (19.4): ಹೊಸ ಬ್ಯಾಟರ್ ಕ್ಯಾಲ್ವಿನ್ ಸ್ಯಾವೇಜ್ ಲಾಂಗ್-ಆನ್‌ನಲ್ಲಿ ಸಿಕ್ಸರ್ ಬಾರಿಸಲು ಹೋಗಿ ಶಿಮ್ರಾನ್ ಹೆಟ್ಮೆಯರ್ ಕೈಗೆ ಕ್ಯಾಚಿತ್ತರು.
    • ಐದನೇ ಎಸೆತ (19.5): ಆಡಮ್ ಮಿಲ್ನೆ ದೊಡ್ಡ ಶಾಟ್‌ಗೆ ಯತ್ನಿಸಿ ವಿಕೆಟ್‌ಕೀಪರ್ ಟಿಮ್ ಸೀಫರ್ಟ್‌ಗೆ ಕ್ಯಾಚ್ ನೀಡಿದರು. ಈ ಮೂಲಕ ಶಾನಕ ಹ್ಯಾಟ್ರಿಕ್ ವಿಕೆಟ್ ಪಡೆದರು.
    • ಆರನೇ ಎಸೆತ (19.6) : ಅಂತಿಮ ಎಸೆತದಲ್ಲಿ ಅಂಶಿ ಡಿ ಸಿಲ್ವಾ ಕೂಡ ದೊಡ್ಡ ಹೊಡೆತಕ್ಕೆ ಕೈಹಾಕಿ ಹೆಟ್ಮೆಯರ್ ಹಿಡಿದ ಮತ್ತೊಂದು ಅದ್ಭುತ ಕ್ಯಾಚ್‌ಗೆ ಬಲಿಯಾದರು.

ದಸುನ್ ಶಾನಕ ಅವರ ಈ ಮಾರಕ ಡೆತ್-ಓವರ್ ಸ್ಪೆಲ್‌ನಿಂದಾಗಿ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡ 20 ಓವರ್​ಗಳಲ್ಲಿ 112 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಸಿಯಾಟಲ್ ಓರ್ಕಾಸ್ ತಂಡವು 9 ರನ್‌ಗಳ ಸ್ಮರಣೀಯ ಜಯ ದಾಖಲಿಸಿತು.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್