David Miller: ಧೋನಿ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ಡೇವಿಡ್ ಮಿಲ್ಲರ್

ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿ 159 ರನ್​ಗಳ ಗುರಿ ಬೆನ್ನತ್ತಿದ ಐರ್ಲೆಂಡ್ ತಂಡವು 117 ರನ್​ಗಳಿಗೆ ಸರ್ವಪತನ ಕಾಣುವ ಮೂಲಕ 42 ರನ್​ಗಳಿಂದ ಸೋಲನುಭವಿಸಿತು. ವಿಶ್ವ ದಾಖಲೆಯೊಂದಿಗೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಡೇವಿಡ್ ಮಿಲ್ಲರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

David Miller: ಧೋನಿ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ಡೇವಿಡ್ ಮಿಲ್ಲರ್
ms dhoni-David Miller
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 23, 2021 | 5:52 PM

ದಕ್ಷಿಣ ಆಫ್ರಿಕಾ ತಂಡದ ಸ್ಪೋಟಕ ಬ್ಯಾಟ್ಸ್​ಮನ್ ಡೇವಿಡ್ ಮಿಲ್ಲರ್ (David Miller) ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಐರ್ಲೆಂಡ್ ವಿರುದ್ದದ 2ನೇ ಟಿ20 ಪಂದ್ಯದಲ್ಲಿ ಕೇವಲ 44 ಎಸೆತಗಳಲ್ಲಿ ಮಿಲ್ಲರ್ 75 ರನ್ ಸಿಡಿಸಿದ್ದರು. ಒಂದು ಹಂತದಲ್ಲಿ ದಕ್ಷಿಣ ಆಫ್ರಿಕಾ ಕೇವಲ 58 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಕಣಕ್ಕಿಳಿದ ಮಿಲ್ಲರ್ ಸಿಡಿಲಬ್ಬರ ಬ್ಯಾಟಿಂಗ್ ಪ್ರದರರ್ಶಿಸಿದರು. 37 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಎಡಗೈ ದಾಂಡಿಗ ಐರ್ಲೆಂಡ್ ಬೌಲರುಗಳ ಬೆಂಡೆತ್ತಿದರು. ಅದರಲ್ಲೂ ಜೋಶ್ ಲಿಟಲ್ ಎಸೆದ 20ನೇ ಓವರ್‌ನಲ್ಲಿ ಮಿಲ್ಲರ್ ನಾಲ್ಕು ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ಸೌತ್ ಆಫ್ರಿಕಾ ತಂಡವು ಮೊತ್ತವನ್ನು 159 ಕ್ಕೆ ತಂದು ನಿಲ್ಲಿಸಿದರು.

ಅಜೇಯ 75 ರನ್​ ಬಾರಿಸಿ ಮಿಂಚಿದ್ದ ಮಿಲ್ಲರ್ ತಮ್ಮ ಇನಿಂಗ್ಸ್​ನಲ್ಲಿ ಒಟ್ಟು 5 ಸಿಕ್ಸ್ ಹಾಗೂ 4 ಬೌಂಡರಿಗಳನ್ನು ಬಾರಿಸಿದ್ದರು. ಅದರಲ್ಲೂ ಕೊನೆಯ ಓವರ್​ನಲ್ಲಿ ನಾಲ್ಕು ಸಿಕ್ಸ್ ಸಿಡಿಸುವ ಮೂಲಕ ಟಿ20 ಕ್ರಿಕೆಟ್​ನ ಕೊನೆಯ ಓವರ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟ್ಸ್​ಮನ್ ಎಂಬ ದಾಖಲೆ ತಮ್ಮದಾಗಿಸಿಕೊಂಡರು. ಈ ಹಿಂದೆ ಈ ದಾಖಲೆ ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಹೆಸರಿನಲ್ಲಿತ್ತು. ಟಿ20 ಕ್ರಿಕೆಟ್​ನ 20 ನೇ ಓವರ್‌ನಲ್ಲಿ ಧೋನಿ 12 ಸಿಕ್ಸರ್ ಬಾರಿಸಿ ದಾಖಲೆ ಬರೆದಿದ್ದರು. ಐರ್ಲೆಂಡ್ ವಿರುದ್ದದ 20ನೇ ಓವರ್​ನಲ್ಲಿ ಒಟ್ಟು 4 ಸಿಕ್ಸ್ ಸಿಡಿಸುವ ಮೂಲಕ ಧೋನಿ ಹೆಸರಿನಲ್ಲಿದ್ದ ದಾಖಲೆಯನ್ನು ಮಿಲ್ಲರ್ ಮುರಿದರು. ಇದೀಗ 20ನೇ ಓವರ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ 15 ಸಿಕ್ಸ್​ಗಳೊಂದಿಗೆ ಡೇವಿಡ್ ಮಿಲ್ಲರ್ ಅಗ್ರಸ್ಥಾನದಲ್ಲಿದ್ದಾರೆ.

ದ್ವಿತೀಯ ಸ್ಥಾನದಲ್ಲಿ 11 ಸಿಕ್ಸ್​ನೊಂದಿಗೆ ಧೋನಿ ಇದ್ದು, ಮೂರನೇ ಸ್ಥಾನದಲ್ಲಿ ಜಿಂಬಾಬ್ವೆ ಬ್ಯಾಟ್ಸ್​ಮನ್ ಎಲ್ಟನ್ ಚಿಗುಂಬುರಾ (12 ಸಿಕ್ಸ್) ಹಾಗೂ ನಾಲ್ಕನೇ ಸ್ಥಾನದಲ್ಲಿ ಶ್ರೀಲಂಕಾದ ಏಂಜೆಲೊ ಮ್ಯಾಥ್ಯೂಸ್ (11 ಸಿಕ್ಸ್) ಇದ್ದಾರೆ. ಹಾಗೆಯೇ 11 ಸಿಕ್ಸ್ ಸಿಡಿಸಿರುವ ವೆಸ್ಟ್​ ಇಂಡೀಸ್​ನ ಡ್ಯಾರೆನ್ ಸ್ಯಾಮಿ 5ನೇ ಸ್ಥಾನದಲ್ಲಿದ್ದಾರೆ. ಇನ್ನು ಡೇವಿಡ್ ಮಿಲ್ಲರ್ 20ನೇ ಓವರ್​ನಲ್ಲಿ 24​ ಅಥವಾ ಅಧಿಕ್ಕಿಂತ ಹೆಚ್ಚಿನ ರನ್​ ರನ್ ಗಳಿಸಿರುವುದು ಇದು ಮೂರನೇ ಬಾರಿ. 2017 ರಲ್ಲಿ ಬಾಂಗ್ಲಾದೇಶ ಮತ್ತು 2019 ರಲ್ಲಿ ಪಾಕಿಸ್ತಾನ ವಿರುದ್ಧ ಈ ಸಾಧನೆ ಮಾಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿ 159 ರನ್​ಗಳ ಗುರಿ ಬೆನ್ನತ್ತಿದ ಐರ್ಲೆಂಡ್ ತಂಡವು 117 ರನ್​ಗಳಿಗೆ ಸರ್ವಪತನ ಕಾಣುವ ಮೂಲಕ 42 ರನ್​ಗಳಿಂದ ಸೋಲನುಭವಿಸಿತು. ವಿಶ್ವ ದಾಖಲೆಯೊಂದಿಗೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಡೇವಿಡ್ ಮಿಲ್ಲರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಇದನ್ನೂ ಓದಿ: Rahul Dravid: ಇಡೀ ಪಂದ್ಯದ ಗತಿ ಬದಲಿಸಿದ ರಾಹುಲ್ ದ್ರಾವಿಡ್ ಅವರ ಆ ಒಂದು ನಿರ್ಧಾರ..!

ಇದನ್ನೂ ಓದಿ: Ola Electric scooters: ಮೈಲೇಜ್ ಬರೋಬ್ಬರಿ 240 ಕಿ.ಮೀ: ಶೀಘ್ರದಲ್ಲೇ ರಸ್ತೆಗಿಳಿಯಲಿದೆ ಓಲಾ ಸ್ಕೂಟರ್..!

(David Miller Breaks Indian legend MS Dhoni record)

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’