David Miller: ನಿವೃತ್ತಿ ಸುದ್ದಿಗೆ ಸ್ಪಷ್ಟನೆ ನೀಡಿದ ಡೇವಿಡ್ ಮಿಲ್ಲರ್

David Miller: 35 ವರ್ಷದ ಡೇವಿಡ್ ಮಿಲ್ಲರ್ ಸೌತ್ ಆಫ್ರಿಕಾ ಇದುವರೆಗೆ 125 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 109 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 1734 ಎಸೆತಗಳನ್ನು ಎದುರಿಸಿ 2439 ರನ್ ಕಲೆಹಾಕಿದ್ದಾರೆ. ಇದರ ನಡುವೆ 27 ಅರ್ಧಶತಕಗಳು ಹಾಗೂ 2 ಸ್ಪೋಟಕ ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಸೌತ್ ಆಫ್ರಿಕಾ ಪರ ಅತೀ ವೇಗವಾಗಿ ಟಿ20 ಶತಕ ಸಿಡಿಸಿದ ದಾಖಲೆ ಕೂಡ ಮಿಲ್ಲರ್ ಹೆಸರಿನಲ್ಲಿದೆ.

David Miller: ನಿವೃತ್ತಿ ಸುದ್ದಿಗೆ ಸ್ಪಷ್ಟನೆ ನೀಡಿದ ಡೇವಿಡ್ ಮಿಲ್ಲರ್
David Miller
Follow us
ಝಾಹಿರ್ ಯೂಸುಫ್
|

Updated on:Jul 03, 2024 | 7:32 AM

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಸೌತ್ ಆಫ್ರಿಕಾ ತಂಡದ ಸ್ಟಾರ್ ಆಟಗಾರ ಡೇವಿಡ್ ಮಿಲ್ಲರ್ (David Miller) ನಿವೃತ್ತಿ ಘೋಷಿಸಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಿತ್ತು. ಇದೀಗ ಈ ಸುದ್ದಿಗೆ ಖುದ್ದು ಮಿಲ್ಲರ್ ಅವರೇ ಸ್ಪಷ್ಟನೆ ನೀದಿದ್ದು, ನಾನು ಟಿ20 ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿಲ್ಲ ಎಂದು ತಿಳಿಸಿದ್ದಾರೆ.

ಈ ಬಾರಿಯ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಡೇವಿಡ್ ಮಿಲ್ಲರ್ 21 ರನ್ ಬಾರಿಸಿದ್ದರು. ಅದರಲ್ಲೂ ಪಂದ್ಯವನ್ನು ಕೊನೆಯ ಓವರ್​ ತನಕ ಕೊಂಡೊಯ್ದಿದ್ದ ಮಿಲ್ಲರ್ 20ನೇ ಓವರ್​ನ ಮೊದಲ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ಹಿಡಿದ ಅದ್ಭುತ ಕ್ಯಾಚ್​ಗೆ ಬಲಿಯಾಗಿದ್ದರು.

ಇತ್ತ ಡೇವಿಡ್ ಮಿಲ್ಲರ್ ವಿಕೆಟ್ ಸಿಗುತ್ತಿದ್ದಂತೆ ಭಾರತ ತಂಡದ ಗೆಲುವು ಖಚಿತವಾಗಿತ್ತು. ಅದರಂತೆ ಟೀಮ್ ಇಂಡಿಯಾ ಫೈನಲ್ ಪಂದ್ಯವನ್ನು ಕೇವಲ 7 ರನ್​ಗಳಿಂದ ಗೆದ್ದು ವಿಶ್ವ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿತ್ತು. ಇದರ ಬೆನ್ನಲ್ಲೇ ಫೈನಲ್ ಸೋಲಿನ ನೋವಿನಲ್ಲಿ ಡೇವಿಡ್ ಮಿಲ್ಲರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆಂಬ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು.

ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಿಲ್ಲರ್, ಎಲ್ಲವೂ ಸುಳ್ಳು ಸುದ್ದಿ ಅಷ್ಟೇ. ನಾನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಿಲ್ಲ. ಸೌತ್ ಆಫ್ರಿಕಾ ಪರ ಮತ್ತೆ ಕಣಕ್ಕಿಳಿಯಲಿದ್ದೇವೆ. ಅತ್ಯುತ್ತಮವಾದದ್ದು ಇನ್ನೂ ಬರಬೇಕಿದೆ ಎಂದು ತಿಳಿಸಿದ್ದಾರೆ.

ಇದರೊಂದಿಗೆ ಕಿಲ್ಲರ್ ಮಿಲ್ಲರ್ ಖ್ಯಾತಿಯ ಡೇವಿಡ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯುವುದು ಖಚಿತವಾಗಿದೆ. ಅಲ್ಲದೆ ಮುಂಬರುವ ಚಾಂಪಿಯನ್ಸ್​ ಟ್ರೋಫಿಯಲ್ಲೂ ಸೌತ್ ಆಫ್ರಿಕಾ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಮುಂದಿನ ವರ್ಷ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದ್ದು, ಈ ಟೂರ್ನಿಯಲ್ಲಿ ಸೌತ್ ಆಫ್ರಿಕಾ ಸೇರಿದಂತೆ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಅಲ್ಲದೆ ಈ ಟೂರ್ನಿಯ ಬಳಿಕ ರೋಹಿತ್ ಶರ್ಮಾ, ಡೇವಿಡ್ ಮಿಲ್ಲರ್ ಸೇರಿದಂತೆ ಬಹುತೇಕ ಹಿರಿಯ ಆಟಗಾರರು ಏಕದಿನ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ.

ಡೇವಿಡ್ ಮಿಲ್ಲರ್ ವೃತ್ತಿಜೀವನ:

ಸೌತ್ ಆಫ್ರಿಕಾ ಪರ 125 ಟಿ20 ಪಂದ್ಯಗಳನ್ನಾಡಿರುವ 35 ವರ್ಷದ ಡೇವಿಡ್ ಮಿಲ್ಲರ್ 109 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 1734 ಎಸೆತಗಳನ್ನು ಎದುರಿಸಿ 2439 ರನ್ ಕಲೆಹಾಕಿದ್ದಾರೆ. ಇದರ ನಡುವೆ 2 ಭರ್ಜರಿ ಶತಕ ಹಾಗೂ 7 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಇದನ್ನೂ ಓದಿ: T20 World Cup 2024: ಟೀಮ್ ಇಂಡಿಯಾ ಪರ ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರು..!

ಹಾಗೆಯೇ 173 ಏಕದಿನ ಪಂದ್ಯಗಳನ್ನಾಡಿರುವ ಮಿಲ್ಲರ್ 4315 ಎಸೆತಗಳನ್ನು ಎದುರಿಸಿ 4458 ರನ್ ಕಲೆಹಾಕಿದ್ದಾರೆ. ಈ ವೇಳೆ 24 ಅರ್ಧಶತಕ ಮತ್ತು 6 ಶತಕಗಳನ್ನು ಸಿಡಿಸಿದ್ದಾರೆ.

Published On - 7:31 am, Wed, 3 July 24

ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ