David Miller: ಕಿಲ್ಲರ್ ಮಿಲ್ಲರ್ ಕ್ಲೀನ್ ಬೌಲ್ಡ್: ಹೀಗೊಂದು ಇತಿಹಾಸ ಬರೆದ ಅರ್ಷದೀಪ್ ಸಿಂಗ್

India vs South Africa 1st T20: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್​ ಕಲೆಹಾಕಿತು. ಟೀಮ್ ಇಂಡಿಯಾ ಪರ 4 ಓವರ್​ಗಳಲ್ಲಿ 32 ರನ್​ ನೀಡಿ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದರೆ, ದೀಪಕ್ ಚಹರ್ 4 ಓವರ್​ನಲ್ಲಿ 24 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.

David Miller: ಕಿಲ್ಲರ್ ಮಿಲ್ಲರ್ ಕ್ಲೀನ್ ಬೌಲ್ಡ್: ಹೀಗೊಂದು ಇತಿಹಾಸ ಬರೆದ ಅರ್ಷದೀಪ್ ಸಿಂಗ್
David Miller
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 29, 2022 | 11:05 AM

ತಿರುವನಂತಪುರದ ಗ್ರೀನ್​ಫೀಲ್ಡ್ ಮೈದಾನದಲ್ಲಿ ನಡೆದ ಭಾರತ-ಸೌತ್ ಆಫ್ರಿಕಾ (India vs South Africa 1st T20) ನಡುವಣ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿತು. ಈ ಗೆಲುವಿನ ರೂವಾರಿಗಳೆಂದರೆ ಟೀಮ್ ಇಂಡಿಯಾ ಬೌಲರ್​ಗಳು. ಏಕೆಂದರೆ ಕೇವಲ 9 ರನ್​ಗಳಿಗೆ ಸೌತ್ ಆಫ್ರಿಕಾ ತಂಡದ ಟಾಪ್ 5 ಬ್ಯಾಟ್ಸ್​ಮನ್​ಗಳನ್ನು ಪೆವಿಲಿಯನ್​ಗೆ ಕಳುಹಿಸುವ ಮೂಲಕ ಭರ್ಜರಿ ಆರಂಭ ಒದಗಿಸಿದ್ದರು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ್ದ ಟೀಮ್ ಇಂಡಿಯಾಗೆ ಮೊದಲ ಓವರ್​ನಲ್ಲೇ ದೀಪಕ್ ಚಹರ್ ನಾಯಕ ತೆಂಬಾ ಬವುಮಾರ ವಿಕೆಟ್ ಪಡೆದು ಪ್ರಥಮ ಯಶಸ್ಸು ತಂದುಕೊಟ್ಟಿದ್ದರು. ಇನ್ನು ಅರ್ಷದೀಪ್ ಸಿಂಗ್ ಎಸೆದ 2ನೇ ಓವರ್​ನಲ್ಲಿ ಕ್ವಿಂಟನ್ ಡಿಕಾಕ್ ಕೂಡ ಬೌಲ್ಡ್ ಆದರು. ಆ ಬಳಿಕ ಬಂದ ರಿಲೀ ರೊಸ್ಸೊ ಅವರನ್ನು ಮೊದಲ ಎಸೆತದಲ್ಲೇ ಅರ್ಷದೀಪ್ ಸಿಂಗ್ ಪೆವಿಲಿಯನ್​ಗೆ ಕಳುಹಿಸಿದರು.

ಅಲ್ಲದೆ ಮರುಎಸೆತದಲ್ಲೇ ಟಿ20 ಕ್ರಿಕೆಟ್​ನ ಕಿಲ್ಲರ್ ಬ್ಯಾಟ್ಸ್​ಮನ್ ಎಂದೇ ಗುರುತಿಸಿಕೊಂಡಿರುವ ಡೇವಿಡ್ ಮಿಲ್ಲರ್ ರನ್ನು ಇನ್​ ಸ್ವಿಂಗ್ ಎಸೆತದ ಮೂಲಕ ಅರ್ಷದೀಪ್ ಸಿಂಗ್ ಕ್ಲೀನ್ ಬೌಲ್ಡ್ ಮಾಡಿದರು. ವಿಶೇಷ ಎಂದರೆ ಈ ಒಂದು ವಿಕೆಟ್ ಇದೀಗ ದೀರ್ಘಾವಧಿಯ ದಾಖಲೆಗೆ ಬ್ರೇಕ್ ಹಾಕಿದೆ.

ಅಂದರೆ ಡೇವಿಡ್ ಮಿಲ್ಲರ್ ಇದಕ್ಕೂ ಮುನ್ನ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 90 ಇನಿಂಗ್ಸ್​ ಆಡಿದ್ದಾರೆ. ಈ ವೇಳೆ ಒಮ್ಮೆಯೂ ಶೂನ್ಯಕ್ಕೆ ಔಟಾಗಿರಲಿಲ್ಲ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಡಕ್​ ಔಟ್ ಆಗದೇ ಹೊಸ ಇತಿಹಾಸವನ್ನು ಮಿಲ್ಲರ್ ನಿರ್ಮಿಸಿದ್ದರು. ಆದರೆ ಈ ಇತಿಹಾಸವನ್ನು ಕೇವಲ ಒಂದು ಎಸೆತದ ಮೂಲಕ ಅರ್ಷದೀಪ್ ಸಿಂಗ್ ಅಳಿಸಿಹಾಕಿದ್ದಾರೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

91ನೇ ಇನಿಂಗ್ಸ್​ನಲ್ಲಿ ಎದುರಿಸಿದ ಮೊದಲ ಎಸೆತದಲ್ಲೇ ಡೇವಿಡ್ ಮಿಲ್ಲರ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವಲ್ಲಿ ಅರ್ಷದೀಪ್ ಸಿಂಗ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಕಿಲ್ಲರ್ ಮಿಲ್ಲರ್​ರನ್ನು ಶೂನ್ಯಕ್ಕೆ ಔಟ್ ಮಾಡಿದ ಮೊದಲ ಬೌಲರ್ ಎಂಬ ಹೊಸ ಇತಿಹಾಸ ನಿರ್ಮಿಸಿದ್ದಾರೆ ಟೀಮ್ ಇಂಡಿಯಾದ ಯುವ ಎಡಗೈ ವೇಗಿ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್​ ಕಲೆಹಾಕಿತು. ಟೀಮ್ ಇಂಡಿಯಾ ಪರ 4 ಓವರ್​ಗಳಲ್ಲಿ 32 ರನ್​ ನೀಡಿ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದರೆ, ದೀಪಕ್ ಚಹರ್ 4 ಓವರ್​ನಲ್ಲಿ 24 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.

ಅದರಂತೆ 107 ರನ್​ಗಳ ಸಾಧಾರಣ ಗುರಿ ಪಡೆದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿ ಅಬ್ಬರಿಸಿದರು. ಪರಿಣಾಮ ಕೇವಲ 16.4 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 110 ರನ್​ಗಳಿಸಿ 8 ವಿಕೆಟ್​ಗಳಿಂದ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ.

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು