AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Warner: ನಿವೃತ್ತಿ ಹಿಂಪಡೆಯುವ ಸೂಚನೆ ನೀಡಿದ ಡೇವಿಡ್ ವಾರ್ನರ್

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ಟೂರ್ನಿಯು ಪಾಕಿಸ್ತಾನದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಅದರಂತೆ ಈ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ್, ಬಾಂಗ್ಲಾದೇಶ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ನ್ಯೂಝಿಲೆಂಡ್, ಇಂಗ್ಲೆಂಡ್ ತಂಡಗಳು ಸೆಣಸಲಿದೆ. ಈ ವೇಳೆ ಆಸ್ಟ್ರೇಲಿಯಾ ತಂಡಕ್ಕೆ ಕಂಬ್ಯಾಕ್ ಮಾಡಲು ಡೇವಿಡ್ ವಾರ್ನರ್ ಬಯಸಿದ್ದಾರೆ.

David Warner: ನಿವೃತ್ತಿ ಹಿಂಪಡೆಯುವ ಸೂಚನೆ ನೀಡಿದ ಡೇವಿಡ್ ವಾರ್ನರ್
David Warner
ಝಾಹಿರ್ ಯೂಸುಫ್
|

Updated on: Jul 09, 2024 | 7:42 AM

Share

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ (David Warner) ಇದೀಗ ತಮ್ಮ ನಿವೃತ್ತಿ ಹಿಂಪಡೆಯುವ ಸೂಚನೆ ನೀಡಿದ್ದಾರೆ. ನನ್ನ ಅಂತಾರಾಷ್ಟ್ರೀಯ ವೃತ್ತಿಜೀವನ ಮುಗಿದಿದೆ. ಆದರೆ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗುವುದಾದರೆ ನಾನು ಮತ್ತೆ ಆಸ್ಟ್ರೇಲಿಯಾ ಪರ ಕಣಕ್ಕಿಳಿಯಲಿದ್ದೇನೆ ಎಂದು ವಾರ್ನರ್ ತಿಳಿಸಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ಡೇವಿಡ್ ವಾರ್ನರ್, ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ಪರ ಆಡಲು ನಾನು ಮುಕ್ತನಾಗಿದ್ದೇನೆ. ಈ ಟೂರ್ನಿಗೆ ಆಯ್ಕೆಯಾಗುವುದಾದರೆ ನಾನು ಕಂಬ್ಯಾಕ್ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.

ಜನವರಿ 1, 2024 ರಂದು ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಅಲ್ಲದೆ ಜನವರಿ 6 ರಂದು ಕೊನೆಯ ಪಂದ್ಯವಾಡುವ ಮೂಲಕ ಟೆಸ್ಟ್ ಕ್ರಿಕೆಟ್​ಗೂ ಗುಡ್ ಬೈ ಹೇಳಿದ್ದರು. ಅಲ್ಲದೆ ಟಿ20 ವಿಶ್ವಕಪ್​ ಬಳಿಕ ಚುಟುಕು ಕ್ರಿಕೆಟ್​ಗೂ ನಿವೃತ್ತಿ ಘೋಷಿಸಿದ್ದರು.

ಇದೀಗ ಚಾಂಪಿಯನ್ಸ್ ಟ್ರೋಫಿಗಾಗಿ ಏಕದಿನ ಸ್ವರೂಪದಿಂದ ತಮ್ಮ ನಿವೃತ್ತಿಯನ್ನು ಹಿಂಪಡೆಯಲು ಸಿದ್ಧನಿರುವುದಾಗಿ ಡೇವಿಡ್ ವಾರ್ನರ್ ತಿಳಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯು 2025ರ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ನಡೆಯಲಿದೆ. ಈ ವೇಳೆಗೆ 38 ವರ್ಷದವರಾಗಲಿರುವ ವಾರ್ನರ್ ಅವರನ್ನು ಆಯ್ಕೆಗೆ ಪರಿಗಣಿಸುವುದು ಅನುಮಾನ. ಹೀಗಾಗಿ ಡೇವಿಡ್ ವಾರ್ನರ್ ಅವರ ಕಂಬ್ಯಾಕ್ ಡೌಟ್ ಎಂದೇ ಹೇಳಬಹುದು.

ಇದಾಗ್ಯೂ ಅವರು ಫ್ರಾಂಚೈಸ್​ ಕ್ರಿಕೆಟ್ ಲೀಗ್​ಗಳಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಐಪಿಎಲ್​ ಸೇರಿದಂತೆ ಕೆಲ ಲೀಗ್​ಗಳಲ್ಲಿ ಕಣಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ.  ನಾನು ಇನ್ನೂ ಸ್ವಲ್ಪ ಕಾಲ ಫ್ರಾಂಚೈಸ್ ಕ್ರಿಕೆಟ್ ಆಡುವುದನ್ನು ಮುಂದುವರಿಸುತ್ತೇನೆ ಎಂದು ಡೇವಿಡ್ ವಾರ್ನರ್ ತಿಳಿಸಿದ್ದಾರೆ. ಇದರೊಂದಿಗೆ ಮುಂಬರುವ ಐಪಿಎಲ್​ ಹರಾಜಿನಲ್ಲಿ ವಾರ್ನರ್ ಹೆಸರು ಸಹ ಕಾಣಿಸಿಕೊಳ್ಳುವುದು ಖಚಿತವಾಗಿದೆ.

ಸದ್ಯ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿರುವ ಡೇವಿಡ್ ವಾರ್ನರ್ ಅವರನ್ನು ಮುಂಬರುವ ಮೆಗಾ ಹರಾಜಿಗೂ ಮುನ್ನ ರಿಲೀಸ್ ಮಾಡುವ ಸಾಧ್ಯತೆ ಹೆಚ್ಚಿದೆ. ಅದರಂತೆ ಹರಾಜಿನಲ್ಲಿ ಕಾಣಿಸಿಕೊಂಡರೆ ಹಿರಿಯ ಆಟಗಾರನನ್ನು ಖರೀದಿಸಲು ಕೆಲ ಫ್ರಾಂಚೈಸಿಗಳು ಮುಂದಾಗಬಹುದು.

ಡೇವಿಡ್ ವಾರ್ನರ್ ವೃತ್ತಿಜೀವನ:

ಏಕದಿನ ಕ್ರಿಕೆಟ್​ನಲ್ಲಿ ಆಸೀಸ್ ಪರ 161 ಪಂದ್ಯಗಳಲ್ಲಿ 159 ಇನಿಂಗ್ಸ್ ಆಡಿರುವ ಡೇವಿಡ್ ವಾರ್ನರ್ 6932 ರನ್ ಕಲೆಹಾಕಿದ್ದಾರೆ. ಈ ವೇಳೆ 22 ಭರ್ಜರಿ ಶತಕ ಹಾಗೂ 33 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಹಾಗೆಯೇ ಆಸ್ಟ್ರೇಲಿಯಾ ಪರ 110 ಟಿ20 ಪಂದ್ಯಗಳನ್ನಾಡಿರುವ ವಾರ್ನರ್ 2300 ಎಸೆತಗಳನ್ನು ಎದುರಿಸಿ 3277 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಭರ್ಜರಿ ಶತಕ ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: Team India: ಕೊನೆಯ 10 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

ಇನ್ನು 112 ಟೆಸ್ಟ್ ಪಂದ್ಯಗಳನ್ನಾಡಿರುವ ವಾರ್ನರ್ 205 ಇನಿಂಗ್ಸ್​ಗಳಲ್ಲಿ 3 ದ್ವಿಶತಕ, 26 ಶತಕ ಹಾಗೂ 37 ಅರ್ಧಶತಕಗಳೊಂದಿಗೆ ಒಟ್ಟು 8786 ರನ್ ಕಲೆಹಾಕಿದ್ದಾರೆ. ಈ ಮೂಲಕ ಮೂರು ಸ್ವರೂಪಗಳಲ್ಲೂ ಆಸ್ಟ್ರೇಲಿಯಾ ಪರ 3 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.