David Warner: ಡೇವಿಡ್ ವಾರ್ನರ್ ವಿದಾಯಕ್ಕೆ ಮುನ್ನುಡಿ: ಮೊದಲ ಟೆಸ್ಟ್ಗೆ ಆಯ್ಕೆ
Australia vs Pakistan: ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡಲಾದ ಆಸ್ಟ್ರೇಲಿಯಾ ತಂಡದಲ್ಲಿ ಬಲಿಷ್ಠ ಆಟಗಾರರೇ ದಂಡೇ ಇದೆ. ಈ ತಂಡವನ್ನು ಆಲ್ರೌಂಡರ್ ಪ್ಯಾಟ್ ಕಮಿನ್ಸ್ ಮುನ್ನಡೆಸಲಿದ್ದಾರೆ. ಇನ್ನು ಆರಂಭಿಕರಾಗಿ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಕಣಕ್ಕಿಳಿಯುವ ಸಾಧ್ಯತೆಯಿದೆ.

ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ್ (Australia vs Pakistan) ನಡುವಣ ಟೆಸ್ಟ್ ಸರಣಿಯು ಡಿಸೆಂಬರ್ 14 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ಗೆ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 14 ಸದಸ್ಯರ ಈ ತಂಡದಲ್ಲಿ ಹಿರಿಯ ಆರಂಭಿಕ ಆಟಗಾರ ಡೇವಿಡ್ ವಾರ್ನರ್ಗೆ (David Warner) ಅವಕಾಶ ನೀಡಲಾಗಿದೆ. ಇದರೊಂದಿಗೆ ಈ ಸರಣಿ ಮೂಲಕ ಡೇವಿಡ್ ವಾರ್ನರ್ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳುವುದು ಖಚಿತವಾಗಿದೆ.
ಈ ಸರಣಿಯ ಮೊದಲ ಪಂದ್ಯವು ಪರ್ತ್ನಲ್ಲಿ ನಡೆಯಲಿದ್ದು, ಇದಾದ ಬಳಿಕ ಮೆಲ್ಬೋರ್ನ್ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಜರುಗಲಿದೆ. ಇನ್ನು ಮೂರನೇ ಟೆಸ್ಟ್ ಪಂದ್ಯಕ್ಕೆ ಸಿಡ್ನಿಯ ಎಸ್ಸಿಜಿ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಜನವರಿ 3 ರಿಂದ ತವರಿನಲ್ಲಿ ಶುರುವಾಗಲಿರುವ ಮೂರನೇ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್ ವಿದಾಯ ಹೇಳುವ ಇರಾದೆಯಲ್ಲಿದ್ದಾರೆ ಡೇವಿಡ್ ವಾರ್ನರ್. ಇದೇ ಕಾರಣದಿಂದಾಗಿ ಇದೀಗ ಸ್ಟಾರ್ ಆಟಗಾರನಿಗೆ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಕಾಶ ನೀಡಲಾಗಿದೆ. ಅಲ್ಲದೆ ಸಿಡ್ನಿ ಟೆಸ್ಟ್ನಲ್ಲೂ ವಾರ್ನರ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.
ಬಲಿಷ್ಠ ಆಸೀಸ್ ಪಡೆ:
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡಲಾದ ಆಸ್ಟ್ರೇಲಿಯಾ ತಂಡದಲ್ಲಿ ಬಲಿಷ್ಠ ಆಟಗಾರರೇ ದಂಡೇ ಇದೆ. ಈ ತಂಡವನ್ನು ಆಲ್ರೌಂಡರ್ ಪ್ಯಾಟ್ ಕಮಿನ್ಸ್ ಮುನ್ನಡೆಸಲಿದ್ದಾರೆ. ಇನ್ನು ಆರಂಭಿಕರಾಗಿ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಕಣಕ್ಕಿಳಿಯುವ ಸಾಧ್ಯತೆಯಿದೆ. ಹಾಗೆಯೇ ತಂಡದಲ್ಲಿ ವೇಗಿಗಳಾಗಿ ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್ವುಡ್, ಸ್ಕಾಟ್ ಬೋಲ್ಯಾಂಡ್ ಇದ್ದರೆ, ಸ್ಪಿನ್ನರ್ ಆಗಿ ನಾಥನ್ ಲಿಯಾನ್ ಕಾಣಿಸಿಕೊಂಡಿದ್ದಾರೆ. ಅದರಂತೆ ಆಸ್ಟ್ರೇಲಿಯಾ ತಂಡ ಹೀಗಿದೆ.
ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಲ್ಯಾನ್ಸ್ ಮೋರಿಸ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್.
ಇದನ್ನೂ ಓದಿ: 8ನೇ ಬಾರಿ ರನ್ ಸರದಾರ…ಸಚಿನ್ ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ
ಆಸ್ಟ್ರೇಲಿಯಾ-ಪಾಕಿಸ್ತಾನ್ ಟೆಸ್ಟ್ ಸರಣಿ ವೇಳಾಪಟ್ಟಿ:
- ಮೊದಲ ಟೆಸ್ಟ್ ಪಂದ್ಯ- ಡಿಸೆಂಬರ್ 14 ರಿಂದ 18 (ಪರ್ತ್)
- ಎರಡನೇ ಟೆಸ್ಟ್ ಪಂದ್ಯ- ಡಿಸೆಂಬರ್ 26 ರಿಂದ 30 (ಪರ್ತ್)
- ಮೂರನೇ ಟೆಸ್ಟ್ ಪಂದ್ಯ- ಜನವರಿ 3 ರಿಂದ 7 (ಪರ್ತ್)
