DAVID WARNER: 3 ಅರ್ಧಶತಕ ಬಾರಿಸಿದರೂ ಬೇಸರ ವ್ಯಕ್ತಪಡಿಸುತ್ತಿರುವ ವಾರ್ನರ್​ ಮಕ್ಕಳು..!

IPL 2022: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಅತ್ಯುತ್ತಮ ಆರಂಭ ಒದಗಿಸುತ್ತಿರುವ ವಾರ್ನರ್ ತಂಡದ ಗೆಲುವಿನಲ್ಲೂ ಪ್ರಮುಖ ಪಾತ್ರವಹಿಸುತ್ತಿದ್ದಾರೆ.

DAVID WARNER: 3 ಅರ್ಧಶತಕ ಬಾರಿಸಿದರೂ ಬೇಸರ ವ್ಯಕ್ತಪಡಿಸುತ್ತಿರುವ ವಾರ್ನರ್​ ಮಕ್ಕಳು..!
David Warner-Buttler
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 21, 2022 | 5:41 PM

ಡೆಲ್ಲಿ ಕ್ಯಾಪಿಟಲ್ಸ್‌ನ (Delhi Capitals) ಸ್ಫೋಟಕ ಆರಂಭಿಕ ಆಟಗಾರ ಡೇವಿಡ್ ವಾರ್ನರ್ (David Warner) ಪ್ರಸ್ತುತ ಐಪಿಎಲ್‌ನಲ್ಲಿ (IPL 2022) ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ವಾರ್ನರ್ ಅವರ ಅಜೇಯ 60 ರನ್​ಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ದ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಉತ್ತಮ ಫಾರ್ಮ್​ನಲ್ಲಿರುವ ವಾರ್ನರ್ ಈ ಬಾರಿ 3 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದಾಗ್ಯೂ ಅವರ ಮಕ್ಕಳು ಮಾತ್ರ ಸಂತೋಷವಾಗಿಲ್ಲ ಎಂದು ಖುದ್ದು ಡೇವಿಡ್ ವಾರ್ನರ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ವಾರ್ನರ್, ‘ನಾನು 3 ಅರ್ಧಶತಕ ಬಾರಿಸಿದರೂ, ಜೋಸ್ ಬಟ್ಲರ್‌ನಂತೆ ಶತಕವನ್ನು ಏಕೆ ಬಾರಿಸುತ್ತಿಲ್ಲ ಎಂದು ನನ್ನ ಮಕ್ಕಳು ಕೇಳುತ್ತಾರೆ. ಹೀಗಾಗಿ ನಾನು ಮತ್ತಷ್ಟು ಚೆನ್ನಾಗಿ ಆಡಬೇಕಿದೆ. ಮತ್ತೊಂದೆಡೆ ಮಕ್ಕಳು ಆಟವನ್ನು ಗಮನಿಸುತ್ತಿರುವುದು ಖುಷಿಯ ವಿಚಾರ ಎಂದು ವಾರ್ನರ್ ಹೇಳಿದ್ದಾರೆ. ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಜೋಸ್ ಬಟ್ಲರ್ ಎರಡು ಶತಕ ಬಾರಿಸಿದ್ದಾರೆ. ಅಲ್ಲದೆ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಅವರಂತೆ ಶತಕ ಬಾರಿಸುವುದನ್ನು ವಾರ್ನರ್ ಮಕ್ಕಳೂ ಕೂಡ ಎದುರು ನೋಡುತ್ತಿದ್ದಾರೆ.

ವಾರ್ನರ್ ಹೊಸ ಆರಂಭ: ಆಸ್ಟ್ರೇಲಿಯಾದ ಎಡಗೈ ಓಪನರ್ ಡೇವಿಡ್ ವಾರ್ನರ್ ಕಳೆದ ಸೀಸನ್​ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಭಾಗವಾಗಿದ್ದರು. ಅವರ ನಾಯಕತ್ವದಲ್ಲಿ, ಸನ್‌ರೈಸರ್ಸ್ 2016 ರಲ್ಲಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಐಪಿಎಲ್ 2022 ರ ಮೆಗಾ ಹರಾಜಿನ ಮೊದಲು ಅವರನ್ನು ಫ್ರಾಂಚೈಸಿ ಬಿಡುಗಡೆ ಮಾಡಿತ್ತು. ಈ ಸೀಸನ್​ನಲ್ಲಿ ಡೆಲ್ಲಿ ಪರ ಆಡುತ್ತಿರುವಾಗ ವಾರ್ನರ್ ನಾಲ್ಕು ಇನ್ನಿಂಗ್ಸ್‌ಗಳಲ್ಲಿ 191 ರನ್ ಗಳಿಸಿದ್ದಾರೆ. ಈ ವೇಳೆ 152.80 ಸ್ಟ್ರೈಕ್ ರೇಟ್​ನಲ್ಲಿ ಮೂರು ಅರ್ಧಶತಕಗಳನ್ನು ಬಾರಿಸಿದ್ದಾರೆ.

ಸದ್ಯ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಅತ್ಯುತ್ತಮ ಆರಂಭ ಒದಗಿಸುತ್ತಿರುವ ವಾರ್ನರ್ ತಂಡದ ಗೆಲುವಿನಲ್ಲೂ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಈ ಮೂಲಕ ಸೋಲುಗಳಿಂದ ಕಂಗೆಟ್ಟಿದ್ದ ಡೆಲ್ಲಿ ತಂಡವನ್ನು ಜಯದತ್ತ ಕೊಂಡೊಯ್ಯುವಲ್ಲಿ ವಾರ್ನರ್ ಕೊಡುಗೆ ನೀಡುತ್ತಿದ್ದಾರೆ. ಇದೀಗ ಮೂರು ಅರ್ಧಶತಕ ಬಾರಿಸಿರುವ ವಾರ್ನರ್ ಇದೇ ಫಾರ್ಮ್​ ಮುಂದುವರೆಸಿದರೆ ಎದುರಾಳಿ ಬೌಲರ್​ಗಳಿಗೆ ಚಿಂತೆ ಶುರುವಾಗುವುದರಲ್ಲಿ ಅನುಮಾನವೇ ಇಲ್ಲ.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ