AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಭುವನೇಶ್ವರ್​ ಕುಮಾರ್ ಪಾದ ಮುಟ್ಟಿ ನಮಸ್ಕರಿಸಿದ ಡೇವಿಡ್ ವಾರ್ನರ್: ವಿಡಿಯೋ ವೈರಲ್

IPL 2023 Kannada: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9 ವಿಕೆಟ್ ನಷ್ಟಕ್ಕೆ 144 ರನ್​ ಕಲೆಹಾಕಿತ್ತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 6 ವಿಕೆಟ್ ನಷ್ಟಕ್ಕೆ 137 ರನ್​ಗಳಿಸಲಷ್ಟೇ ಶಕ್ತರಾದರು.

IPL 2023: ಭುವನೇಶ್ವರ್​ ಕುಮಾರ್ ಪಾದ ಮುಟ್ಟಿ ನಮಸ್ಕರಿಸಿದ ಡೇವಿಡ್ ವಾರ್ನರ್: ವಿಡಿಯೋ ವೈರಲ್
Bhuvi-Warner
TV9 Web
| Updated By: ಝಾಹಿರ್ ಯೂಸುಫ್|

Updated on: Apr 25, 2023 | 6:37 PM

Share

IPL 2023: ಐಪಿಎಲ್​ನ 34ನೇ ಪಂದ್ಯಕ್ಕೂ ಮುನ್ನ ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನೆರೆದಿದ್ದ ಪ್ರೇಕ್ಷಕರು ಸ್ವಾರಸ್ಯಕರ ಘಟನೆಗೆ ಸಾಕ್ಷಿಯಾದರು. ಸನ್​ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಟಾಸ್ ಪ್ರಕ್ರಿಯೆಗೂ ಮುನ್ನ ಡೇವಿಡ್ ವಾರ್ನರ್ (David Warner) ಮೈದಾನಕ್ಕೆ ಆಗಮಿಸಿದ್ದರು. ಈ ವೇಳೆ ಮೈದಾನದಲ್ಲಿ ಎಸ್​ಆರ್​ಹೆಚ್ (SRH) ವೇಗಿ ಭುವನೇಶ್ವರ್ ಕುಮಾರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಇಶಾಂತ್ ಶರ್ಮಾ ಜೊತೆ ಮಾತನಾಡುತ್ತಾ ನಿಂತಿದ್ದರು. ಭುವನೇಶ್ವರ್​ ಕುಮಾರ್ ಅವರನ್ನು ಕಾಣುತ್ತಿದ್ದಂತೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಅವರತ್ತ ಸಾಗಿದರು.

ಅಷ್ಟೇ ಅಲ್ಲದೆ ಭುವನೇಶ್ವರ್ ಅವರ ಪಾದವನ್ನು ಮುಟ್ಟಿ ನಮಸ್ಕರಿಸುವ ಮೂಲಕ ಗಮನ ಸೆಳೆದರು. ಮೇಲ್ನೋಟಕ್ಕೆ ಹಿರಿಯರ ಆಶೀರ್ವಾದ ಪಡೆದಂತೆ ಭುವಿಯನ್ನು ಕಿಚಾಯಿಸಿರುವ ವಾರ್ನರ್​ ಅವರ ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ
Image
IPL 2023: ಮೊದಲ ಓವರ್​ನ ಮ್ಯಾಜಿಷಿಯನ್: ಭುವನೇಶ್ವರ್ ಕುಮಾರ್ ಹೊಸ ದಾಖಲೆ
Image
Suryakumar Yadav: ಸ್ಪೋಟಕ ಬ್ಯಾಟಿಂಗ್​ ಮೂಲಕ ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
Image
IPL 2023: ಸಿಕ್ಸ್​ಗಳ ಸುರಿಮಳೆಗೈದ CSK: ಆದ್ರೂ RCB ದಾಖಲೆ ಮುರಿಯಲಾಗಲಿಲ್ಲ..!
Image
IPL 2023: ವಿರಾಟ್ ಕೊಹ್ಲಿಯ ದಾಖಲೆ ಮುರಿದ ಕೆಎಲ್ ರಾಹುಲ್

ಇನ್ನು  ಭುವನೇಶ್ವರ್ ಕುಮಾರ್ ಹಾಗೂ ಡೇವಿಡ್ ವಾರ್ನರ್ ಆತ್ಮೀಯವಾಗಿ ತಬ್ಬಿಕೊಂಡು ಕುಶಲೋಪರಿ ನಡೆಸುತ್ತಿರುವುದು ಈ ವಿಡಿಯೋದಲ್ಲಿ ಕಾಣಬಹುದು. ಇದೇ ವೇಳೆ ಇಶಾಂತ್ ಶರ್ಮಾ ಕೂಡ ಇವರ ಜೊತೆಗಿದ್ದರು. ಅಂದಹಾಗೆ ಡೇವಿಡ್ ವಾರ್ನರ್ ಹಾಗೂ ಭುವನೇಶ್ವರ್ ಕುಮಾರ್ 2014 ರಿಂದ 2021 ರವರೆಗೆ ಎಸ್​ಆರ್​ಹೆಚ್​ ತಂಡದಲ್ಲಿದ್ದರು.

7 ವರ್ಷಗಳ ಕಾಲ ಜೊತೆಯಾಗಿ ಡ್ರೆಸ್ಸಿಂಗ್ ಕೋಣೆಯನ್ನು ಹಂಚಿಕೊಂಡಿದ್ದ ಇಬ್ಬರು ನಡುವೆ ತುಂಬಾ ಆತ್ಮೀಯತೆ ಇದೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದರೂ ಡೇವಿಡ್ ವಾರ್ನರ್ ತನ್ನ ಮಾಜಿ ಸಹ ಆಟಗಾರನೊಂದಿಗೆ ಗೆಳೆತನ ಮುಂದುವರೆಸಿದ್ದಾರೆ. ಇದಕ್ಕೆ ಸಾಕ್ಷಿಯೇ ಪ್ರಸ್ತುತ ವೈರಲ್ ಆಗುತ್ತಿರುವ ವಿಡಿಯೋ.

ಇದನ್ನೂ ಓದಿ: Virat Kohli: ಐಪಿಎಲ್​ನಲ್ಲಿ ಅನಗತ್ಯ ದಾಖಲೆ ಬರೆದ ವಿರಾಟ್ ಕೊಹ್ಲಿ

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9 ವಿಕೆಟ್ ನಷ್ಟಕ್ಕೆ 144 ರನ್​ ಕಲೆಹಾಕಿತ್ತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 6 ವಿಕೆಟ್ ನಷ್ಟಕ್ಕೆ 137 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ರನ್​ಗಳ ರೋಚಕ ಜಯ ಸಾಧಿಸಿತು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ