David Warner: SRH ತಂಡದಲ್ಲಿಲ್ಲ ಸ್ಥಾನ: ಪ್ರೇಕ್ಷಕನಾಗಿ ಕಾಣಿಸಿಕೊಂಡ ಡೇವಿಡ್ ವಾರ್ನರ್
IPL 2021: ಐಪಿಎಲ್ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಡೇವಿಡ್ ವಾರ್ನರ್ ಅವರನ್ನು ಟೂರ್ನಿಯ ಮೊದಲಾರ್ಧದ ವೇಳೆ ಹೈದರಾಬಾದ್ ಫ್ರಾಂಚೈಸಿ ನಾಯಕತ್ವದಿಂದ ಕೆಳಗಿಳಿಸಿತ್ತು.
ದುಬೈನಲ್ಲಿ ಭಾನುವಾರ ನಡೆದ ಐಪಿಎಲ್ನ (IPL 2021) 49ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿತ್ತು. ಮಾಡು ಇಲ್ಲವೇ ಮಡಿ ಎಂಬಂತಿದ್ದ ಈ ಪಂದ್ಯದಲ್ಲಿ ಕೆಕೆಆರ್ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಇನ್ನು ಪಂದ್ಯದ ವೇಳೆ ಎಸ್ಆರ್ಹೆಚ್ (SRH) ತಂಡದ ಮಾಜಿ ನಾಯಕ ಡೇವಿಡ್ ವಾರ್ನರ್ (David Warner) ಕಾಣಿಸಿಕೊಂಡಿದ್ದು ವಿಶೇಷ. ಏಕೆಂದರೆ ಕಳೆದೆರಡು ಪಂದ್ಯಗಳ ವೇಳೆ ಎಸ್ಆರ್ಹೆಚ್ ಡಗೌಟ್ನಲ್ಲಿ ವಾರ್ನರ್ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ವಾರ್ನರ್ ಅವರನ್ನು ಇಡೀ ಟೂರ್ನಿಯಿಂದಲೇ ಕೈಬಿಡಲಾಗಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಇದರ ಬೆನ್ನಲ್ಲೇ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ವಿರುದ್ದ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.
ಆದರೆ ಕೆಕೆಆರ್ ವಿರುದ್ದದ ಪಂದ್ಯದ ವೇಳೆ ಮತ್ತೊಮ್ಮೆ ಡೇವಿಡ್ ವಾರ್ನರ್ ಕಾಣಿಸಿಕೊಂಡಿದ್ದು ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿತ್ತು. ಇದಾಗ್ಯೂ ವಾರ್ನರ್ ಡಗೌಟ್ನಲ್ಲಿ ಕೂತಿರಲಿಲ್ಲ. ಬದಲಾಗಿ ಅಭಿಮಾನಿಗಳ ಮಧ್ಯೆ ಕುಳಿತು ತಂಡಕ್ಕೆ ಬೆಂಬಲ ನೀಡಿದ್ದರು. ಎಸ್ಆರ್ಹೆಚ್ ಜೆರ್ಸಿಯೊಂದಿಗೆ ಕಾಣಿಸಿಕೊಂಡಿದ್ದ ವಾರ್ನರ್ ಸ್ಟೇಡಿಯಂನಲ್ಲಿ ಕೂತು ತಂಡ ಬಾವುಟವನ್ನು ಹಿಡಿದು ಹುರಿದುಂಬಿಸುತ್ತಿರುವುದು ಕಂಡು ಬಂತು. ಡೇವಿಡ್ ವಾರ್ನರ್ ಅವರ ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ICYMI: Hi ??@SunRisers ? fans here’s @davidwarner31 sending you a wave ?#VIVOIPL | #KKRvSRH pic.twitter.com/mFej5lRiz7
— IndianPremierLeague (@IPL) October 3, 2021
ಈ ಬಾರಿಯ ಐಪಿಎಲ್ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಡೇವಿಡ್ ವಾರ್ನರ್ ಅವರನ್ನು ಟೂರ್ನಿಯ ಮೊದಲಾರ್ಧದ ವೇಳೆ ಹೈದರಾಬಾದ್ ಫ್ರಾಂಚೈಸಿ ನಾಯಕತ್ವದಿಂದ ಕೆಳಗಿಳಿಸಿತ್ತು. ಆ ಬಳಿಕ ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ಗೆ ನಾಯಕತ್ವ ನೀಡಲಾಗಿತ್ತು. ಇದಾಗ್ಯೂ ದ್ವಿತಿಯಾರ್ಧದಲ್ಲಿ ಕಾಣಿಸಿಕೊಂಡ ವಾರ್ನರ್ ಮೊದಲೆರಡು ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಹೀಗಾಗಿ ಅವರನ್ನು ಆಡುವ ಬಳಗದಿಂದ ಕೈಬಿಟ್ಟು ಅವರ ಬದಲಿಗೆ ಜೇಸನ್ ರಾಯ್ಗೆ ಅವಕಾಶ ನೀಡಲಾಗಿತ್ತು. ಈ ಬದಲಾವಣೆಗಳ ಹೊರತಾಗಿಯೂ ಸನ್ರೈಸರ್ಸ್ ಹೈದರಾಬಾದ್ ತಂಡದ ಫಲಿತಾಂಶದಲ್ಲಿ ಯಾವುದೇ ಮಹತ್ವದ ಬದಲಾವಣೆಯಾಗಿಲ್ಲ. ಆಡಿರುವ 12 ಪಂದ್ಯಗಳಲ್ಲಿ 10 ರಲ್ಲಿ ಸೋತು ಸನ್ರೈಸರ್ಸ್ ಹೈದರಾಬಾದ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
Yuzvendra Chahal: ಐಪಿಎಲ್ನಲ್ಲಿ ಹೊಸ ದಾಖಲೆ ಬರೆದ ಯುಜ್ವೇಂದ್ರ ಚಹಾಲ್: ಟಿ-20 ವಿಶ್ವಕಪ್ಗೆ ಆಯ್ಕೆ ಪಕ್ಕಾ
(David Warner Waves SRH Flag From The Stands)
Published On - 2:52 pm, Mon, 4 October 21