Viral Video: ಸೂಪರ್​ಮ್ಯಾನ್​ ಕ್ಯಾಚ್ ಹಿಡಿದು ಎಲ್ಲರನ್ನು ದಂಗಾಗಿಸಿದ ಡೇವಿಡ್​ ವಾರ್ನರ್..!

David Warner's stunning catch: ಶ್ರೀಲಂಕಾ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಅಧ್ಭುತ ಕ್ಯಾಚ್ ಹಿಡಿಯುವ ಮೂಲಕ ಆಸ್ಟ್ರೇಲಿಯಾ ಆಟಗಾರ ಡೇವಿಡ್ ವಾರ್ನರ್​ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ.

Viral Video: ಸೂಪರ್​ಮ್ಯಾನ್​ ಕ್ಯಾಚ್ ಹಿಡಿದು ಎಲ್ಲರನ್ನು ದಂಗಾಗಿಸಿದ ಡೇವಿಡ್​ ವಾರ್ನರ್..!
David Warner
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 15, 2022 | 2:57 PM

ಆಸ್ಟ್ರೇಲಿಯಾದ ಆಟಗಾರ ಡೇವಿಡ್ ವಾರ್ನರ್ ಮೈದಾನದಲ್ಲಿನ ವೀರಾವೇಶಕ್ಕೆ ಹೆಸರುವಾಸಿ. ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸುವ ವಾರ್ನರ್, ಅದ್ಭುತ ಫೀಲ್ಡರ್ ಎಂಬುದು ಗೊತ್ತಿರುವ ವಿಚಾರ. ಇದೀಗ ತಮ್ಮ 35 ವಯಸ್ಸಿನಲ್ಲಿ ಹಿಡಿದಿರುವ ಸೂಪರ್​ ಮ್ಯಾನ್​ ಕ್ಯಾಚ್​ವೊಂದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಮಂಗಳವಾರ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಾರ್ನರ್ ಈ ಅದ್ಭುತ ಕ್ಯಾಚ್ ಹಿಡಿಇದ್ದಾರೆ. ಶ್ರೀಲಂಕಾದ ಇನ್ನಿಂಗ್ಸ್‌ನ 16 ನೇ ಓವರ್‌ನಲ್ಲಿ, ಧನಂಜಯ ಡಿ ಸಿಲ್ವಾ ಆಷ್ಟನ್ ಅಗರ್‌ ಮಿಡ್ ಆನ್‌ನತ್ತ ಬಾರಿಸಿದ್ದರು. ಆದರೆ ಅಲ್ಲೇ ಫೀಲ್ಡಿಂಗ್​ನಲ್ಲಿ ವಾರ್ನರ್ ಬಲಕ್ಕೆ ಓಡಿ ಅಧ್ಭುತವಾಗಿ ಜಿಗಿಯುವ ಮೂಲಕ ಎಡಗೈಯಲ್ಲಿ ಚೆಂಡನ್ನು ಬಂಧಿಸಿದರು. ಅಲ್ಲಿಗೆ ಧನಂಜಯ ಡಿಸಿಲ್ವಾ ಇನಿಂಗ್ಸ್ ಅಂತ್ಯವಾಯಿತು.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಕುಸಾಲ್ ಮೆಂಡಿಸ್​ ಅವರ ಅಜೇಯ 86 ರನ್​ಗಳ ನೆರವಿನಿಂದ 50 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 300 ರನ್​ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಚೇಸ್ ಮಾಡಲು ಹೊರಟಾಗ ಮಳೆ ಬಂದಿದ್ದರಿಂದ ಆಸ್ಟ್ರೇಲಿಯಾಗೆ ಡಕ್​ವರ್ಥ್​ ಲೂಯಿಸ್​ ನಿಯಮದ ಪ್ರಕಾರ 44 ಓವರ್​ಗಳಲ್ಲಿ 282 ರನ್​ಗಳ ಟಾರ್ಗೆಟ್ ನೀಡಲಾಯಿತು.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಗ್ಲೆನ್ ಮ್ಯಾಕ್ಸ್​ವೆಲ್ ಅಬ್ಬರಿಸಿದ್ದರು. 51 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ 80 ರನ್​ ಬಾರಿಸುವ ಮೂಲಕ 42.3 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವು ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಶ್ರೀಲಂಕಾ ವಿರುದ್ದದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವು 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ