David Wiese: ಟಿ20 ವಿಶ್ವಕಪ್ ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ

T20 World Cup 2024: ಟಿ20 ವಿಶ್ವಕಪ್​ನ 34ನೇ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ನಮೀಬಿಯಾ ತಂಡಗಳು ಮುಖಾಮುಖಿಯಾಗಿತ್ತು. ಮಳೆ ಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 10 ಓವರ್​ಗಳಲ್ಲಿ 5 ವಿಕೆಟ್​ 122 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನಮೀಬಿಯಾ ತಂಡವು 10 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 84 ರನ್ ಕಲೆಹಾಕಲಷ್ಟೇ ಶಕ್ತರಾದರು. ಈ ಸೋಲಿನೊಂದಿಗೆ ನಮೀಬಿಯಾ ತಂಡದ ಸ್ಟಾರ್ ಆಟಗಾರ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ.

David Wiese: ಟಿ20 ವಿಶ್ವಕಪ್ ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ
David Wiese
Follow us
ಝಾಹಿರ್ ಯೂಸುಫ್
|

Updated on:Jun 16, 2024 | 7:54 AM

ನಮೀಬಿಯಾ ತಂಡದ ಸ್ಟಾರ್ ಆಲ್​ರೌಂಡರ್ ಡೇವಿಡ್ ವೀಝ (David Wiese) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಆಂಟಿಗುವಾದ ನಾರ್ತ್ ಸೌಂಡ್‌ನಲ್ಲಿರುವ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೊನೆಯ ಬಾರಿ ಕಣಕ್ಕಿಳಿಯುವ ಮೂಲಕ ವೀಝ ಇಂಟರ್​ನ್ಯಾಷನಲ್ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಿದರು.

2013 ರಿಂದ 2016 ರವರೆಗೆ ಸೌತ್ ಆಫ್ರಿಕಾ ತಂಡವನ್ನು ಪ್ರತಿನಿಧಿಸಿದ್ದ ವೀಝ ಆ ಬಳಿಕ ನಮೀಬಿಯಾ ಪರ ಹೊಸ ಕೆರಿಯರ್ ಆರಂಭಿಸಿದ್ದರು. ಇದೀಗ ತಮ್ಮ 11 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.

View this post on Instagram

A post shared by ICC (@icc)

ಡೇವಿಡ್ ವೀಝ ವೃತ್ತಿಜೀವನ:

ಏಕದಿನ ಕ್ರಿಕೆಟ್​ನಲ್ಲಿ 15 ಪಂದ್ಯಗಳನ್ನಾಡಿರುವ ಡೇವಿಡ್ ವೀಝ 330 ರನ್ ಮತ್ತು 15 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ 54 ಟಿ20 ಪಂದ್ಯಗಳಿಂದ 624 ರನ್​ ಹಾಗೂ 59 ವಿಕೆಟ್ ಪಡೆದಿದ್ದಾರೆ.

ಐಪಿಎಲ್​ನಲ್ಲೂ ಮಿಂಚಿಂಗ್:

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆರ್​ಸಿಬಿ, ಕೆಕೆಆರ್ ಪರ ಒಟ್ಟು 18 ಪಂದ್ಯಗಳನ್ನಾಡಿರುವ ಡೇವಿಡ್ ವೀಝ 148 ರನ್​ ಹಾಗೂ 16 ವಿಕೆಟ್ ಕಬಳಿಸಿದ್ದಾರೆ. ವಿಶೇಷ ಎಂದರೆ ಎರಡು ದೇಶಗಳನ್ನು ಪ್ರತಿನಿಧಿಸಿ ಐಪಿಎಲ್​ನಲ್ಲಿ ಸ್ಥಾನ ಪಡೆದ ಏಕೈಕ ಆಟಗಾರ ಎಂಬ ದಾಖಲೆ ಡೇವಿಡ್ ವೀಝ ಹೆಸರಿನಲ್ಲಿದೆ.

ಸೌತ್ ಆಫ್ರಿಕಾ ತಂಡದಲ್ಲಿದ್ದಾಗ 2015 ರಲ್ಲಿ ಡೇವಿಡ್ ವೀಝ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು. ಅಲ್ಲದೆ ಎರಡು ಸೀಸನ್​ಗಳಲ್ಲಿ ಕಣಕ್ಕಿಳಿದಿದ್ದ ವೀಝ ಒಟ್ಟು 15 ಪಂದ್ಯಗಳನ್ನಾಡಿ 16 ವಿಕೆಟ್​ಗಳನ್ನು ಕಬಳಿಸಿದ್ದರು.

ಇದಾದ ಬಳಿಕ ನಮೀಬಿಯಾ ತಂಡವನ್ನು ಪ್ರತಿನಿಧಿಸಿದ್ದ ಡೇವಿಡ್ ವೀಝ, ಐಪಿಎಲ್ 2023 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಯ್ಕೆಯಾಗಿದ್ದರು. ಈ ಮೂಲಕ ಎರಡು ದೇಶಗಳನ್ನು ಪ್ರತಿನಿಧಿಸಿ ಐಪಿಎಲ್​ನಲ್ಲಿ ಅವಕಾಶ ಪಡೆದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: T20 World Cup 2024: ಟೀಮ್ ಇಂಡಿಯಾದ ಮುಂದಿನ ಎದುರಾಳಿ ಯಾರು? ಇಲ್ಲಿದೆ ಪೂರ್ಣ ಮಾಹಿತಿ

ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿರುವ ಡೇವಿಡ್ ವೀಝ ಮುಂಬರುವ ದಿನಗಳಲ್ಲಿ ಫ್ರಾಂಚೈಸಿ ಲೀಗ್​ನಲ್ಲಿ ಮುಂದುವರೆಯುವ ಸಾಧ್ಯತೆಯಿದೆ.

Published On - 7:54 am, Sun, 16 June 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ