AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರ್ ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ನ ಸ್ಟಾರ್ ಆಟಗಾರ..!

David Willey: 2015 ರಲ್ಲಿ ಇಂಗ್ಲೆಂಡ್ ಪರ ಪಾದಾರ್ಪಣೆ ಮಾಡಿದ್ದ ಡೇವಿಡ್ ವಿಲ್ಲಿ 70 ಏಕದಿನ ಪಂದ್ಯಗಳಿಂದ 627 ರನ್ ಕಲೆಹಾಕಿದ್ದಾರೆ. ಹಾಗೆಯೇ 94 ವಿಕೆಟ್​ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಟಿ20 ಕ್ರಿಕೆಟ್​ನಲ್ಲಿ 43 ಪಂದ್ಯಗಳಿಂದ 226 ರನ್ ಹಾಗೂ 51 ವಿಕೆಟ್​ ಕಬಳಿಸಿದ್ದಾರೆ.

ದಿಢೀರ್ ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ನ ಸ್ಟಾರ್ ಆಟಗಾರ..!
England
TV9 Web
| Updated By: ಝಾಹಿರ್ ಯೂಸುಫ್|

Updated on:Nov 01, 2023 | 4:09 PM

Share

ಏಕದಿನ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಇದರ ನಡುವೆ ತಂಡದ ಪ್ರಮುಖ ಆಟಗಾರ ಡೇವಿಡ್ ವಿಲ್ಲಿ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಇಂಗ್ಲೆಂಡ್ ತಂಡದ ಪ್ರಮುಖ ಆಲ್​ರೌಂಡರ್​ಗಳಲ್ಲಿ ಒಬ್ಬರಾಗಿರುವ ವಿಲ್ಲಿ, ಈ ಬಾರಿಯ ವಿಶ್ವಕಪ್​ನೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದುವುದಾಗಿ ತಿಳಿಸಿದ್ದಾರೆ.

ನಾನು ಬಾಲ್ಯದಿಂದಲೂ ಇಂಗ್ಲೆಂಡ್ ಪರ ಆಡಬೇಕೆಂಬ ಕನಸು ಕಂಡಿದ್ದೆ. ಈ ಕನಸುಗಳು ಈಡೇರಿವೆ. ಇದೀಗ ನಿವೃತ್ತಿ ಹೊಂದುವ ಬಗ್ಗೆ ಯೋಚಿಸಿದೆ. ಅದರಂತೆ ವಿಶ್ವಕಪ್‌ನ ಕೊನೆಯಲ್ಲಿ ನಾನು ಎಲ್ಲಾ ರೀತಿಯ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಡೇವಿಡ್ ವಿಲ್ಲಿ ತಿಳಿಸಿದ್ದಾರೆ.

ಅದರಂತೆ ಈ ಬಾರಿಯ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ ನಡೆಯಲಿರುವ ಪಂದ್ಯವು ಡೇವಿಡ್ ವಿಲ್ಲಿ ಪಾಲಿಗೆ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗುವ ಸಾಧ್ಯತೆಯಿದೆ. ಈ ಮೂಲಕ 33 ವರ್ಷದ ಎಡಗೈ ಆಲ್​ರೌಂಡರ್ ಇಂಟರ್​ನ್ಯಾಷನಲ್ ಕ್ರಿಕೆಟ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.

ಡೇವಿಡ್ ವಿಲ್ಲಿ ವೃತ್ತಿ ಜೀವನ:

2015 ರಲ್ಲಿ ಇಂಗ್ಲೆಂಡ್ ಪರ ಪಾದಾರ್ಪಣೆ ಮಾಡಿದ್ದ ಡೇವಿಡ್ ವಿಲ್ಲಿ 70 ಏಕದಿನ ಪಂದ್ಯಗಳಿಂದ 627 ರನ್ ಕಲೆಹಾಕಿದ್ದಾರೆ. ಹಾಗೆಯೇ 94 ವಿಕೆಟ್​ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಟಿ20 ಕ್ರಿಕೆಟ್​ನಲ್ಲಿ 43 ಪಂದ್ಯಗಳಿಂದ 226 ರನ್ ಹಾಗೂ 51 ವಿಕೆಟ್​ ಕಬಳಿಸಿದ್ದಾರೆ.

ಇದನ್ನೂ ಓದಿ: IPL 2024: ಮತ್ತೆ ಬದಲಾಗಲಿದೆಯಾ RCB ತಂಡದ ನಾಯಕತ್ವ..?

ಇದೀಗ 8 ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಕೆರಿಯರ್​ಗೆ ವಿದಾಯ ಹೇಳಲು ನಿರ್ಧರಿಸಿರುವ ಡೇವಿಡ್ ವಿಲ್ಲಿ ಟಿ20 ಲೀಗ್​ನಲ್ಲಿ ಮುಂದುವರೆಯಬಹುದು. ಅದರಲ್ಲೂ ಐಪಿಎಲ್​ನಲ್ಲಿ ಆರ್​ಸಿಬಿ ತಂಡದಲ್ಲಿ ಸ್ಥಾನ ಪಡೆದಿರುವ ವಿಲ್ಲಿ ಮುಂಬರುವ ಸೀಸನ್​ನಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

Published On - 4:07 pm, Wed, 1 November 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ