DC vs CSK Playing XI: ಧೋನಿ ಅಲಭ್ಯ: ಹೀಗಿದೆ ಉಭಯ ತಂಡಗಳ ಪ್ಲೇಯಿಂಗ್ 11

IPL Delhi Capitals vs Chennai Super Kings in Kannada Playing XI: ಉಭಯ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್​ 20 ಬಾರಿ ಗೆದ್ದಿದೆ. ಇನ್ನು 12 ಮ್ಯಾಚ್​​ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದಿದೆ. ಅಂದರೆ ಅಂಕಿ ಅಂಶಗಳ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್​ ಮೇಲುಗೈ ಹೊಂದಿದೆ.

DC vs CSK Playing XI: ಧೋನಿ ಅಲಭ್ಯ: ಹೀಗಿದೆ ಉಭಯ ತಂಡಗಳ ಪ್ಲೇಯಿಂಗ್ 11
Dc Vs Csk
Image Credit source: IPL

Updated on: May 05, 2026 | 7:17 PM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಸಿಎಸ್​ಕೆ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಇನ್ನು ಈ ಪಂದ್ಯಕ್ಕೂ ಮಹೇಂದ್ರ ಸಿಂಗ್ ಧೋನಿ ಅಲಭ್ಯರಾಗಿದ್ದಾರೆ. ಫಿಟ್​ನೆಸ್​ ಸಮಸ್ಯೆಯಿಂದ ಬಳಲುತ್ತಿರುವ ಈ ಬಾರಿ ಒಂದೇ ಒಂದು ಪಂದ್ಯವಾಡಿಲ್ಲ. ಅಂದರೆ ಈ ಬಾರಿ ಸಿಎಸ್​ಕೆ ಆಡಿದ 10 ಪಂದ್ಯಗಳಲ್ಲೂ ಎಂಎಸ್​ಡಿ ಕಾಣಿಸಿಕೊಂಡಿಲ್ಲ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್, ಪಾತುಮ್ ನಿಸ್ಸಾಂಕ, ಕರುಣ್ ನಾಯರ್, ಟ್ರಿಸ್ಟನ್ ಸ್ಟಬ್ಸ್, ನಿತೀಶ್ ರಾಣಾ, ಅಕ್ಷರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ಲುಂಗಿ ಎನ್‌ಗಿಡಿ, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ಟಿ ನಟರಾಜನ್.

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಜೇಮಿ ಓವರ್ಟನ್, ಅಕೇಲ್ ಹೊಸೈನ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಮುಖೇಶ್ ಚೌಧರಿ, ಗುರ್ಜಪ್ನೀತ್ ಸಿಂಗ್.

ಹೆಡ್ ಟು ಹೆಡ್​:

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈವರೆಗೆ 32 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಸಿಎಸ್​ಕೆ ತಂಡ ಬರೋಬ್ಬರಿ 20 ಪಂದ್ಯಗಳಲ್ಲಿ ಜಯಗಳಿಸಿದ್ದಾರೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದಿರುವುದು ಕೇವಲ 12 ಪಂದ್ಯಗಳಲ್ಲಿ ಮಾತ್ರ.

ಇದಾಗ್ಯೂ ಈ ಬಾರಿಯ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಪ್ರದರ್ಶನ ನೀಡಿದೆ. ಇದಾಗ್ಯೂ ಅಕ್ಷರ್ ಪಟೇಲ್ ಪಡೆ ಗೆದ್ದಿರುವುದು ಕೇವಲ 4 ಪಂದ್ಯಗಳಲ್ಲಿ ಮಾತ್ರ. ಇತ್ತ ಸಿಎಸ್​ಕೆ ತಂಡ ಕೂಡ 4 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅಂದರೆ ಇಂದಿನ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೇಲೇರಲಿದೆ. ಹೀಗಾಗಿ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್ (ನಾಯಕ) ನಿತೀಶ್ ರಾಣಾ, ಅಭಿಷೇಕ್ ಪೊರೆಲ್, ಅಜಯ್ ಮಂಡಲ್, ಅಶುತೋಷ್ ಶರ್ಮಾ, ದುಷ್ಮಂತ ಚಮೀರಾ, ಕರುಣ್ ನಾಯರ್, ಕೆಎಲ್ ರಾಹುಲ್, ಕುಲದೀಪ್ ಯಾದವ್, ಮಾಧವ್ ತಿವಾರಿ, ಮಿಚೆಲ್ ಸ್ಟಾರ್ಕ್, ಸಮೀರ್ ರಿಝ್ವಿ, ಟಿ ನಟರಾಜನ್, ತ್ರಿಪುರಾಣ ವಿಜಯ್, ಟ್ರಿಸ್ಟನ್ ಸ್ಟಬ್ಸ್, ವಿಪ್ರಾಜ್ ನಿಗಮ್, ಡೇವಿಡ್ ಮಿಲ್ಲರ್, ಬೆನ್ ಡಕೆಟ್, ಆಖಿಬ್ ನಬಿ, ಪಾತುಮ್ ನಿಸ್ಸಾಂಕಾ, ಲುಂಗಿ ಎನ್‌ಗಿಡಿ, ಸಾಹಿಲ್ ಪರಾಖ್, ಪೃಥ್ವಿ ಶಾ, ಕೈಲ್ ಜೇಮಿಸನ್.

ಇದನ್ನೂ ಓದಿ: RCB ಅಭಿಮಾನಿಗಳಿಗೆ ಬಿಸಿಸಿಐ ಕಡೆಯಿಂದ ಶೀಘ್ರದಲ್ಲೇ ಕಹಿ ಸುದ್ದಿ!

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್.

 

Published On - 7:15 pm, Tue, 5 May 26

Follow Us