AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC vs LSG Prediction Playing XI IPL 2022: ಲಕ್ನೋಗೆ ಡೆಲ್ಲಿ ಹುಡುಗರ ಸವಾಲು: ಉಭಯ ತಂಡಗಳ ಪ್ಲೇಯಿಂಗ್ 11

DC vs LSG Prediction Playing XI: ಹೊಸ ಬೌಲರ್ ಮೊಹ್ಸಿನ್ ಖಾನ್ ಪಂಜಾಬ್ ವಿರುದ್ಧ ಅದ್ಭುತವಾಗಿ ಬೌಲಿಂಗ್ ಮಾಡಿದ್ದು, ದುಷ್ಮಂತ ಚಮೀರಾ, ಕೃನಾಲ್ ಪಾಂಡ್ಯ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

DC vs LSG Prediction Playing XI IPL 2022: ಲಕ್ನೋಗೆ ಡೆಲ್ಲಿ ಹುಡುಗರ ಸವಾಲು: ಉಭಯ ತಂಡಗಳ ಪ್ಲೇಯಿಂಗ್ 11
DC vs LSG Prediction Playing XI
TV9 Web
| Updated By: ಝಾಹಿರ್ ಯೂಸುಫ್|

Updated on: Apr 30, 2022 | 6:21 PM

Share

IPL 2022: ಭಾನುವಾರ ಐಪಿಎಲ್​ನಲ್ಲಿ ಡಬಲ್ ಹೆಡರ್ ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (DC vs LSG) ಮುಖಾಮುಖಿಯಾಗಲಿದೆ. ರಿಷಬ್ ಪಂತ್ ನಾಯಕತ್ವದ ಡೆಲ್ಲಿ ತಂಡವು ಉತ್ತಮ ಫಾರ್ಮ್‌ನಲ್ಲಿರುವ ಲಕ್ನೋವನ್ನು ಮಣಿಸುವುದು ಸುಲಭವಲ್ಲ. ಅತ್ತ ಪ್ಲೇಆಫ್​ಗೇರಲು ಲಕ್ನೋ ಸೂಪರ್ ಜೈಂಟ್ಸ್​ಗೂ ಈ ಪಂದ್ಯ ಬಹಳ ಮಹತ್ವದ್ದು. ಹೀಗಾಗಿ ಈ ಪಂದ್ಯಕ್ಕಾಗಿ ಡೆಲ್ಲಿ ಅಥವಾ ಲಕ್ನೋ ತಮ್ಮ ಪ್ಲೇಯಿಂಗ್ 11 ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಬಹುದು.

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕಳೆದ ಪಂದ್ಯದಲ್ಲಿ ಮಿಚೆಲ್ ಮಾರ್ಷ್ ವಾಪಸಾದರೆ, ಚೇತನ್ ಸಕರಿಯಾ ಮೊದಲ ಬಾರಿಗೆ ಅವಕಾಶ ಪಡೆದರು. ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದ ಖಲೀಲ್ ಅಹ್ಮದ್ ಅವರ ಬದಲಿಗೆ ಸಕರಿಯಾ ಅವರನ್ನು ತಂಡಕ್ಕೆ ಸೇರಿಸಲಾಯಿತು. ಹೀಗಾಗಿ ಖಲೀಲ್ ಫಿಟ್ ಆದರೆ ತಂಡಕ್ಕೆ ಕಂಬ್ಯಾಕ್ ಮಾಡಬಹುದು. ಇದರ ಹೊರತಾಗಿ ತಂಡದಲ್ಲಿ ಪ್ರಮುಖ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ.

ಲಕ್ನೋ ಸೂಪರ್​ ಜೈಂಟ್ಸ್ ತಂಡವು ಕಳೆದ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಹೊರತಾಗಿಯೂ ಪಂಜಾಬ್ ಕಿಂಗ್ಸ್​ ತಂಡವನ್ನು ಸೋಲಿಸಿತ್ತು. ಕಳೆದ ಕೆಲವು ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕವು ಸಂಪೂರ್ಣ ವಿಫಲವಾಗಿದೆ. ಇದಾಗ್ಯೂ ಬೌಲಿಂಗ್ ಮೂಲಕ ಲಕ್ನೋ ಗೆಲ್ಲುತ್ತಿದೆ. ಹೊಸ ಬೌಲರ್ ಮೊಹ್ಸಿನ್ ಖಾನ್ ಪಂಜಾಬ್ ವಿರುದ್ಧ ಅದ್ಭುತವಾಗಿ ಬೌಲಿಂಗ್ ಮಾಡಿದ್ದು, ದುಷ್ಮಂತ ಚಮೀರಾ, ಕೃನಾಲ್ ಪಾಂಡ್ಯ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದರೊಂದಿಗೆ ಬ್ಯಾಟ್‌ನಲ್ಲೂ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಹೀಗಾಗಿ ಈ ಪಂದ್ಯದಿಂದಲೂ ಮನೀಷ್ ಪಾಂಡೆ ಹೊರಗುಳಿಯಲಿದ್ದಾರೆ ಎಂದೇ ಹೇಳಬಹುದು. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿರಲಿದೆ.

DC vs LSG: ಸಂಭಾವ್ಯ ಪ್ಲೇಯಿಂಗ್ XI: ಡೆಲ್ಲಿ ಕ್ಯಾಪಿಟಲ್ಸ್: ರಿಷಬ್ ಪಂತ್ (ನಾಯಕ), ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಷರ್ ಪಟೇಲ್, ರೋವ್ಮನ್ ಪೊವೆಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್ ಮತ್ತು ಚೇತನ್ ಸಕಾರಿಯಾ.

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ದುಷ್ಮಂತ ಚಮೀರಾ, ಅವೇಶ್ ಖಾನ್, ಮೊಹ್ಸಿನ್ ಖಾನ್, ರವಿ ಬಿಷ್ಣೋಯ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ