DC vs SRH Highlights, IPL 2024: ಡೆಲ್ಲಿ ವಿರುದ್ಧ ಹೈದರಾಬಾದ್‌ಗೆ 67 ರನ್‌ಗಳ ಜಯ
Delhi Capitals vs Sunrisers Hyderabad Highlights in Kannada: ಈ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ 67 ರನ್‌ಗಳಿಂದ ಗೆದ್ದುಕೊಂಡಿದೆ. ಹೈದರಾಬಾದ್ ನೀಡಿದ 267 ರನ್‌ಗಳ ಟಾರ್ಗೆಟ್ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 19ನೇ ಓವರ್‌ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ಬೌಲರ್‌ಗಳ ಅಮೋಘ ಪ್ರದರ್ಶನದ ಆಧಾರದ ಮೇಲೆ ಸನ್‌ರೈಸರ್ಸ್ ಹೈದರಾಬಾದ್ ತಂಡ, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 67 ರನ್‌ಗಳಿಂದ ಸೋಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ಟ್ರಾವಿಸ್ ಹೆಡ್ ಅವರ 32 ಎಸೆತಗಳಲ್ಲಿ 89 ರನ್, ಅಭಿಷೇಕ್ ಶರ್ಮಾ ಅವರ 12 ಎಸೆತಗಳಲ್ಲಿ 46 ರನ್ ಮತ್ತು ಶಹಬಾಜ್ ಅಹ್ಮದ್ ಅವರ ಅಜೇಯ 59 ರನ್‌ಗಳ ನೆರವಿನಿಂದ 20 ಓವರ್‌ಗಳಲ್ಲಿ ಏಳು ವಿಕೆಟ್‌ಗೆ 266 ರನ್ ಗಳಿಸಿತು. ಪ್ರತ್ಯುತ್ತರವಾಗಿ, ಜಾಕ್ ಫ್ರೇಸರ್ ಮೆಕ್‌ಗುರ್ಕ್ ಡೆಲ್ಲಿ ಪರ ಬಿರುಸಿನ ಇನ್ನಿಂಗ್ಸ್ ಆಡಿ ಕೇವಲ 18 ಎಸೆತಗಳಲ್ಲಿ 65 ರನ್ ಗಳಿಸಿದರು. ಆದರೆ ಅವರ ಔಟಾದ ನಂತರ ಡೆಲ್ಲಿ ಇನ್ನಿಂಗ್ಸ್ ತತ್ತರಿಸಿತು. ಅಂತಿಮವಾಗಿ ತಂಡವು 19.1 ಓವರ್‌ಗಳಲ್ಲಿ 199 ರನ್ ಗಳಿಸಿ ಆಲೌಟ್ ಆಯಿತು. ಡೆಲ್ಲಿ ಪರ ನಾಯಕ ರಿಷಬ್ ಪಂತ್ 35 ಎಸೆತಗಳಲ್ಲಿ 44 ರನ್ ಗಳಿಸಿದರೆ, ಹೈದರಾಬಾದ್ ಪರ ಟಿ.ನಟರಾಜನ್ ನಾಲ್ಕು ಓವರ್‌ಗಳಲ್ಲಿ 19 ರನ್ ನೀಡಿ ನಾಲ್ಕು ವಿಕೆಟ್ ಪಡೆದರು.
LIVE NEWS & UPDATES
-
67 ರನ್‌ಗಳ ಜಯ
ಈ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ 67 ರನ್‌ಗಳಿಂದ ಗೆದ್ದುಕೊಂಡಿದೆ. ಹೈದರಾಬಾದ್ ನೀಡಿದ 267 ರನ್‌ಗಳ ಟಾರ್ಗೆಟ್ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 19ನೇ ಓವರ್‌ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಲಷ್ಟೇ ಶಕ್ತವಾಯಿತು.
-
18 ಎಸೆತಗಳಲ್ಲಿ 79 ರನ್ ಬೇಕು
ಗೆಲುವಿಗೆ ಡೆಲ್ಲಿ 18 ಎಸೆತಗಳಲ್ಲಿ 79 ರನ್ ಗಳಿಸಬೇಕಿದ್ದು ಮೂರು ವಿಕೆಟ್ ಬಾಕಿ ಉಳಿದಿದೆ. ಪಂತ್ 30 ಎಸೆತಗಳಲ್ಲಿ 35 ರನ್ ಮತ್ತು ಅಕ್ಷರ್ ಪಟೇಲ್ ಐದು ಎಸೆತಗಳಲ್ಲಿ ನಾಲ್ಕು ರನ್ ಗಳಿಸಿ ಆಡುತ್ತಿದ್ದಾರೆ.
-
-
15 ಓವರ್ ಅಂತ್ಯ
15 ಓವರ್‌ಗಳ ಅಂತ್ಯಕ್ಕೆ ಡೆಲ್ಲಿ ಆರು ವಿಕೆಟ್‌ಗೆ 166 ರನ್ ಗಳಿಸಿದ್ದು, 30 ಎಸೆತಗಳಲ್ಲಿ 101 ರನ್ ಗಳಿಸಬೇಕಾಗಿದೆ. ಸದ್ಯ ಪಂತ್ 23 ಎಸೆತಗಳಲ್ಲಿ 19 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.
-
ಐದನೇ ವಿಕೆಟ್
ಟ್ರಿಸ್ಟಾನ್ ಸ್ಟಬ್ಸ್ ಅವರನ್ನು ಔಟ್ ಮಾಡುವ ಮೂಲಕ ನಿತೀಶ್ ರೆಡ್ಡಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಐದನೇ ಹೊಡೆತ ನೀಡಿದರು. 11 ಎಸೆತಗಳಲ್ಲಿ 10 ರನ್ ಗಳಿಸಿ ಸ್ಟಬ್ಸ್ ವಿಕೆಟ್ ಒಪ್ಪಿಸಿದರು.
-
ಪೊರೆಲ್ ಔಟ್
ಮಯಾಂಕ್ ಮಾರ್ಕಾಂಡೆ ಬೌಲಿಂಗ್ನಲ್ಲಿ ಅಭಿಷೇಕ್ ಪೊರೆಲ್ ವಿಕೆಟ್ ಪತನವಾಗಿದೆ. ಪೊರೆಲ್ 22 ಎಸೆತಗಳಲ್ಲಿ 42 ರನ್ ಗಳಿಸಿ ಔಟಾದರು. ಇದು ಈ ಪಂದ್ಯದಲ್ಲಿ ಮಾರ್ಕಂಡೆ ಅವರ ಎರಡನೇ ವಿಕೆಟ್ ಆಗಿದೆ. ಒಂಬತ್ತು ಓವರ್‌ಗಳ ಅಂತ್ಯಕ್ಕೆ ಡೆಲ್ಲಿ ನಾಲ್ಕು ವಿಕೆಟ್‌ಗೆ 136 ರನ್ ಗಳಿಸಿದೆ. ಈಗ 66 ಎಸೆತಗಳಲ್ಲಿ 131 ರನ್ ಗಳಿಸಬೇಕಿದೆ.
-
-
ಮೆಕ್‌ಗುರ್ಕ್ ಪೆವಿಲಿಯನ್‌ಗೆ
ಮೆಕ್‌ಗುರ್ಕ್ ಅವರನ್ನು ಔಟ್ ಮಾಡುವ ಮೂಲಕ ಮಯಾಂಕ್ ಮಾರ್ಕಾಂಡೆ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮೂರನೇ ಹೊಡೆತ ನೀಡಿದರು. ಮೆಕ್‌ಗುರ್ಕ್ 18 ಎಸೆತಗಳಲ್ಲಿ 65 ರನ್ ಗಳಿಸಿ ಔಟಾದರು.
-
ವೇಗದ ಅರ್ಧಶತಕ
ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟ್ಸ್‌ಮನ್ ಮೆಕ್‌ಗುರ್ಕ್ ಅದ್ಭುತ ಬ್ಯಾಟಿಂಗ್ ಮಾಡಿ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದರೊಂದಿಗೆ ಡೆಲ್ಲಿ 40 ಎಸೆತಗಳಲ್ಲಿ 100 ರನ್‌ಗಳ ಗಡಿ ದಾಟಿದೆ. ಮೆಕ್‌ಗುರ್ಕ್ ಐಪಿಎಲ್ 2024 ರ ವೇಗದ ಅರ್ಧಶತಕ ಬಾರಿಸಿದರು.
-
ಪವರ್ ಪ್ಲೇ ಅಂತ್ಯ
ಆರಂಭಿಕ ಹಿನ್ನಡೆಗಳ ನಡುವೆ, ಅಭಿಷೇಕ್ ಪೊರೆಲ್ ಜೊತೆಗೆ ಜಾಕ್ ಫ್ರೇಸರ್ ಮೆಕ್‌ಗುರ್ಕ್ ಡೆಲ್ಲಿ ಇನ್ನಿಂಗ್ಸ್ ನಿಭಾಯಿಸಿದ್ದಾರೆ. ಇಬ್ಬರೂ ಬ್ಯಾಟ್ಸ್‌ಮನ್‌ಗಳು ಪವರ್‌ಪ್ಲೇಯಲ್ಲಿ ಅದ್ಭುತವಾಗಿ ಬ್ಯಾಟ್ ಮಾಡಿದರು. ಪವರ್‌ಪ್ಲೇ ಅಂತ್ಯಕ್ಕೆ ಡೆಲ್ಲಿ ಎರಡು ವಿಕೆಟ್‌ಗೆ 88 ರನ್ ಗಳಿಸಿದೆ. ಮೆಕ್‌ಗುರ್ಕ್ 13 ಎಸೆತಗಳಲ್ಲಿ 46 ರನ್ ಗಳಿಸಿ ಆಡುತ್ತಿದ್ದಾರೆ.
-
ಎರಡನೇ ವಿಕೆಟ್ ಪತನ
ಡೇವಿಡ್ ವಾರ್ನರ್ ಕೇವಲ ಒಂದು ರನ್‌ಗಳಿಗೆ ಇನ್ನಿಂಗ್ಸ್ ಮುಗಿಸಿದ್ದಾರೆ. ಅಭಿಷೇಕ್ ಪೊರೆಲ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ. ಅವರಿಗೆ ಬೆಂಬಲ ನೀಡಲು ಜ್ಯಾಕ್ ಫ್ರೇಸರ್ ಮೆಕ್‌ಗುರ್ಕ್ ಕ್ರೀಸ್‌ನಲ್ಲಿದ್ದಾರೆ.
-
ಪೃಥ್ವಿ ಔಟ್
ವಾಷಿಂಗ್ಟನ್ ಸುಂದರ್ ಎಸೆದ ಮೊದಲ ಓವರ್‌ನ ಐದನೇ ಎಸೆತದಲ್ಲಿ ಪೃಥ್ವಿ ಶಾ ವಿಕೆಟ್ ಪತನವಾಗಿದೆ. ಸತತ ನಾಲ್ಕು ಎಸೆತಗಳಲ್ಲಿ ನಾಲ್ಕು ಬೌಂಡರಿಸಿ ಪೃಥ್ವಿ ಔಟಾದರು. ಜ್ಯಾಕ್ ಫ್ರೇಸರ್ ಮೆಕ್‌ಗುರ್ಕ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ.
-
ಡೆಲ್ಲಿಗೆ 267 ರನ್‌ಗಳ ಗುರಿ
ಆರಂಭಿಕರಾದ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಅವರ ಸ್ಫೋಟಕ ಇನ್ನಿಂಗ್ಸ್‌ನ ನಂತರ ಶಹಬಾಜ್ ಅಹ್ಮದ್ ಅವರ ಅರ್ಧಶತಕದ ಸಹಾಯದಿಂದ ಸನ್‌ರೈಸರ್ಸ್ ಹೈದರಾಬಾದ್ ಡೆಲ್ಲಿ ಕ್ಯಾಪಿಟಲ್ಸ್‌ಗೆ 267 ರನ್‌ಗಳ ಗುರಿಯನ್ನು ನೀಡಿದೆ. ಹೈದರಾಬಾದ್ 20 ಓವರ್‌ಗಳಲ್ಲಿ ಏಳು ವಿಕೆಟ್‌ಗೆ 266 ರನ್ ಗಳಿಸಿತು. ಹೈದರಾಬಾದ್ ಪರ ಟ್ರಾವಿಸ್ ಹೆಡ್ 32 ಎಸೆತಗಳಲ್ಲಿ 11 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 89 ರನ್ ಗಳಿಸಿದರೆ, ಶಹಬಾಜ್ 29 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 59 ರನ್ ಗಳಿಸಿ ಅಜೇಯರಾಗಿ ಉಳಿದರು.
-
200 ರನ್ ಪೂರ್ಣ
ಸನ್ ರೈಸರ್ಸ್ ಹೈದರಾಬಾದ್ ತನ್ನ ಅದ್ಭುತ ಬ್ಯಾಟಿಂಗ್ ಮುಂದುವರಿಸಿ 200 ರನ್ ಗಳ ಗಡಿ ದಾಟಿದೆ. ಹೈದರಾಬಾದ್ 15 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗೆ 204 ರನ್ ಗಳಿಸಿದೆ. ನಿತೀಶ್ ರೆಡ್ಡಿ 26 ರನ್ ಮತ್ತು ಶಹಬಾಜ್ ಅಹ್ಮದ್ 24 ಎಸೆತಗಳನ್ನು ಗಳಿಸಿ ಕ್ರೀಸ್‌ನಲ್ಲಿದ್ದಾರೆ.
-
ಕ್ಲಾಸೆನ್ ಬೌಲ್ಡ್
ಉತ್ತಮ ಆರಂಭದ ನಂತರ ಸನ್ ರೈಸರ್ಸ್ ಹೈದರಾಬಾದ್ ಇನ್ನಿಂಗ್ಸ್ ತತ್ತರಿಸಿದ್ದು, ತಂಡ ನಾಲ್ಕು ವಿಕೆಟ್ ಕಳೆದುಕೊಂಡಿದೆ. ಅಕ್ಷರ್ ಪಟೇಲ್ ಹೆನ್ರಿಚ್ ಕ್ಲಾಸೆನ್ ಬೌಲ್ಡ್ ಮಾಡುವ ಮೂಲಕ ಹೈದರಾಬಾದ್‌ಗೆ ನಾಲ್ಕನೇ ಹೊಡೆತ ನೀಡಿದರು.
-
ಹೆಡ್ ಔಟ್
ರಿಸ್ಟ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅದ್ಭುತ ಬೌಲಿಂಗ್ ಮಾಡಿ ಟ್ರಾವಿಸ್ ಹೆಡ್ ಅವರನ್ನು ಪೆವಿಲಿಯನ್ಗಟ್ಟಿದ್ದಾರೆ. 32 ಎಸೆತಗಳಲ್ಲಿ 89 ರನ್ ಗಳಿಸಿ ಹೆಡ್ ಔಟಾದರು.
-
2ನೇ ವಿಕೆಟ್
ಏಡನ್ ಮಾರ್ಕ್ರಾಮ್ ವಿಕೆಟ್ ಪತನವಾಗಿದೆ. ಮೂರು ಎಸೆತಗಳಲ್ಲಿ ಒಂದು ರನ್ ಗಳಿಸಿದ ನಂತರ ಮಾರ್ಕ್ರಾಮ್ ಪೆವಿಲಿಯನ್‌ಗೆ ಮರಳಿದರು. ಆದರೆ, ಟ್ರಾವಿಸ್ ಹೆಡ್ ಕ್ರೀಸ್‌ನಲ್ಲಿದ್ದು 27 ಎಸೆತಗಳಲ್ಲಿ 85 ರನ್ ಗಳಿಸಿ ಆಡುತ್ತಿದ್ದಾರೆ.
-
ಅಭಿಷೇಕ್ ಔಟ್
ಚೈನಾಮನ್ ಬೌಲರ್ ಕುಲ್ದೀಪ್ ಯಾದವ್ ಬೌಲಿಂಗ್ನಲ್ಲಿ ಅರ್ಧಶತಕದತ್ತ ಸಾಗುತ್ತಿದ್ದ ಅಭಿಷೇಕ್ ಶರ್ಮಾ ಔಟಾಗಿದ್ದಾರೆ. ಅಭಿಷೇಕ್ 12 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 46 ರನ್ ಗಳಿಸಿ ಔಟಾದರು. ಇದರೊಂದಿಗೆ ಹೆಡ್ ಮತ್ತು ಅಭಿಷೇಕ್ ನಡುವಿನ ಮೊದಲ ವಿಕೆಟ್‌ಗೆ 131 ರನ್‌ಗಳ ಜೊತೆಯಾಟ ಮುರಿದುಬಿತ್ತು.
-
ಪವರ್‌ಪ್ಲೇ ಅಂತ್ಯ
ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಆರು ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 125 ರನ್ ಗಳಿಸಿದರು. ಇದು ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಪವರ್‌ಪ್ಲೇ ಸ್ಕೋರ್ ಆಗಿದೆ.
-
ಶತಕ ಪೂರ್ಣ
ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಅವರ ಸಿಡಿಲಬ್ಬರದ ಬ್ಯಾಟಿಂಗ್‌ನಿಂದಾಗಿ ಹೈದರಾಬಾದ್ ಐದು ಓವರ್‌ಗಳ ಅಂತ್ಯಕ್ಕೆ 100 ರನ್ ದಾಟಿದೆ. ಈ ಅವಧಿಯಲ್ಲಿ ಇಬ್ಬರೂ ಬ್ಯಾಟ್ಸ್‌ಮನ್‌ಗಳು 10 ಸಿಕ್ಸರ್‌ಗಳು ಮತ್ತು ಒಂಬತ್ತು ಬೌಂಡರಿಗಳನ್ನು ಬಾರಿಸಿದ್ದಾರೆ. ಹೆಡ್ 20 ಎಸೆತಗಳಲ್ಲಿ 62 ರನ್ ಹಾಗೂ ಅಭಿಷೇಕ್ 10 ಎಸೆತಗಳಲ್ಲಿ 40 ರನ್ ಗಳಿಸಿ ಆಡುತ್ತಿದ್ದಾರೆ.
-
ಹೆಡ್ ಅರ್ಧಶತಕ
ಸನ್‌ರೈಸರ್ಸ್ ಹೈದರಾಬಾದ್‌ಗೆ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಮತ್ತೊಮ್ಮೆ ಉತ್ತಮ ಆರಂಭ ನೀಡಿದ್ದಾರೆ. ಇಬ್ಬರ ಬಿರುಸಿನ ಬ್ಯಾಟಿಂಗ್‌ನಿಂದಾಗಿ ಮೂರು ಓವರ್‌ಗಳ ಅಂತ್ಯಕ್ಕೆ ಸ್ಕೋರ್ ಯಾವುದೇ ವಿಕೆಟ್ ನಷ್ಟವಿಲ್ಲದೆ 62 ರನ್‌ಗಳಿಗೆ ತಲುಪಿದೆ. ಇದರೊಂದಿಗೆ ಟ್ರಾವಿಸ್ ಹೆಡ್ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
-
ಹೈದರಾಬಾದ್ ಇನ್ನಿಂಗ್ಸ್ ಆರಂಭ
ಸನ್ ರೈಸರ್ಸ್ ಹೈದರಾಬಾದ್ ಇನ್ನಿಂಗ್ಸ್ ಆರಂಭವಾಗಿದೆ. ಹೈದರಾಬಾದ್ ಪರ ಇನ್ನಿಂಗ್ಸ್ ಆರಂಭಿಸಲು ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಬಂದಿದ್ದಾರೆ. ವೇಗಿ ಖಲೀಲ್ ಅಹ್ಮದ್ ಡೆಲ್ಲಿ ಪರ ಬೌಲಿಂಗ್ ಆರಂಭಿಸಿದ್ದಾರೆ.
-
ಡೆಲ್ಲಿ ಕ್ಯಾಪಿಟಲ್ಸ್
ಡೇವಿಡ್ ವಾರ್ನರ್, ಜಾಕ್ ಫ್ರೇಸರ್ ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ರಿಷಬ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಕುಲ್ದೀಪ್ ಯಾದವ್, ಅನ್ರಿಚ್ ನೋಕಿಯಾ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್.
ಇಂಪ್ಯಾಕ್ಟ್ ಪ್ಲೇಯರ್: ಪೃಥ್ವಿ ಶಾ, ಶಾಯ್ ಹೋಪ್, ಪ್ರವೀಣ್ ದುಬೆ, ರಾಶಿಖ್ ದಾರ್ ಸಲಾಮ್, ಸುಮಿತ್ ಕುಮಾರ್.
-
ಸನ್‌ರೈಸರ್ಸ್ ಹೈದರಾಬಾದ್
ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ.ನಟರಾಜನ್.
ಇಂಪ್ಯಾಕ್ಟ್ ಪ್ಲೇಯರ್: ಉಮ್ರಾನ್ ಮಲಿಕ್, ಅನ್ಮೋಲ್ಪ್ರೀತ್ ಸಿಂಗ್, ಆಕಾಶ್ ಮಹಾರಾಜ್ ಸಿಂಗ್, ಗ್ಲೆನ್ ಫಿಲಿಪ್ಸ್, ವಾಷಿಂಗ್ಟನ್ ಸುಂದರ್.
-
ಟಾಸ್ ಗೆದ್ದ ಡೆಲ್ಲಿ
ಟಾಸ್ ಗೆದ್ದ ಡೆಲ್ಲಿ ನಾಯಕ ರಿಷಬ್ ಪಂತ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
-
ಡೆಲ್ಲಿ- ಹೈದರಾಬಾದ್ ಮುಖಾಮುಖಿ
ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಇದುವರೆಗೆ 7 ಪಂದ್ಯಗಳಲ್ಲಿ 3 ಪಂದ್ಯಗಳನ್ನು ಆಡಿ ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಆದರೆ ಸನ್‌ರೈಸರ್ಸ್ ಹೈದರಾಬಾದ್ 6 ಪಂದ್ಯಗಳಲ್ಲಿ 4 ಗೆದ್ದು ನಾಲ್ಕನೇ ಸ್ಥಾನದಲ್ಲಿದೆ. ಇನ್ನು ಕೆಲವೇ ಸಮಯದಲ್ಲಿ ಟಾಸ್ ನಡೆಯಲಿದೆ.
Published On - Apr 20,2024 6:40 PM
