Javed Miandad: ಸಾವು ನಿಶ್ಚಿತ… ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಬರಬೇಕು: ಜಾವೇದ್ ಮಿಯಾಂದಾದ್
Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಅದರಂತೆ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ಇನ್ನು 2025ರ ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೈಯಲ್ಲಿದ್ದು, ಹೀಗಾಗಿ ಭಾರತ ತಂಡ ಪಾಕ್ಗೆ ತೆರಳಲಿದೆಯಾ ಎಂಬುದೇ ಈಗ ಪ್ರಶ್ನೆ.
T20 World Cup 2024: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ (Champions Trophy 2025) ಸಿದ್ಧತೆಗಳನ್ನು ಶುರು ಮಾಡಲಿದೆ. 2025 ರಲ್ಲಿ ನಡೆಯಲಿರುವ ಈ ಟೂರ್ನಿಯನ್ನು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಯೋಜಿಸಲಿದೆ. ಅದರಂತೆ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಪಾಕಿಸ್ತಾನದಲ್ಲಿ ನಡೆಯುವ ಸಾಧ್ಯತೆಯಿದೆ. ಆದರೆ ಪಾಕ್ನಲ್ಲಿ ಟೂರ್ನಿ ನಡೆದರೆ ಭಾರತ ತಂಡ ತೆರಳುವ ಸಾಧ್ಯತೆಯಿಲ್ಲ.
ಸುರಕ್ಷತೆಯ ಕಾರಣಗಳನ್ನು ಮುಂದಿಟ್ಟು ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ತೆರಳಲು ಹಿಂದೇಟು ಹಾಕಬಹುದು. ಹೀಗೆ ಭಾರತ ತಂಡ ಟೂರ್ನಿಯಿಂದ ಹಿಂದೆ ಸರಿಯುವ ವಿಚಾರವನ್ನು ಮನಗಂಡಿರುವ ಪಾಕ್ ತಂಡದ ಮಾಜಿ ಆಟಗಾರ ಜಾವೇದ್ ಮಿಯಾಂದಾದ್ ಈ ಹಿಂದೆ ಧೈರ್ಯ ತುಂಬುವ ಹೇಳಿಕೆಗಳನ್ನು ನೀಡಿದ್ದರು. ಆದರೆ ಈ ಹೇಳಿಕೆಯಲ್ಲಿ ಸಾವಿನ ವಿಷಯ ಪ್ರಸ್ತಾಪಿಸಿರುವುದು ಅಚ್ಚರಿ.
ಈ ಬಗ್ಗೆ ಮಾತನಾಡಿರುವ ಜಾವೇದ್ ಮಿಯಾಂದಾದ್, ಭಾರತ ತಂಡವು ಪಾಕಿಸ್ತಾನಕ್ಕೆ ಬರಲು ಹೆದರಬೇಕಿಲ್ಲ. ಸಾವು ಅನ್ನೋದು ನಿಶ್ಚಿತ. ಯಾವಾಗ, ಎಲ್ಲಿ ಬೇಕಾದರೂ ಸಾವು ಬರಬಹುದು. ಹೀಗಾಗಿ ಸಾವಿಗೆ ಹೆದರಿ ಪಾಕಿಸ್ತಾನಕ್ಕೆ ಬರದಿರಬೇಡಿ ಎಂದು ಮಿಯಾಂದಾದ್ ಹೇಳಿದ್ದಾರೆ.
ಈ ಹಿಂದೆ ನೀಡಿರುವ ಸಂದರ್ಶನವೊಂದರಲ್ಲಿ ನೀಡಿದ ಈ ಹೇಳಿಕೆಯು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಒಂದು ತಂಡವನ್ನು ತನ್ನ ದೇಶಕ್ಕೆ ಆಮಂತ್ರಿಸುವಾಗ ಸಾವಿನ ವಿಚಾರವನ್ನು ಮುಂದಿಟ್ಟಿರುವ ಬಗ್ಗೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟೀಮ್ ಇಂಡಿಯಾ ಪಾಲ್ಗೊಳ್ಳುತ್ತಾ?
ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ಪಾಲ್ಗೊಳ್ಳಲಿದೆಯಾ? ಎನ್ನುವ ಪ್ರಶ್ನೆಗೆ ಸದ್ಯಕ್ಕೆ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಇದಾಗ್ಯೂ ಭಾರತ ತಂಡವು ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಐಸಿಸಿಗೆ ಮನವಿ ಮಾಡಲಿದೆ.
ಅಂದರೆ ಭಾರತದ ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ಆಯೋಜಿಸುವಂತೆ ಬೇಡಿಕೆ ಮುಂದಿಡಲಿದೆ. ಈ ಮೂಲಕ ಪಾಕ್ಗೆ ತೆರಳದೇ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಇದನ್ನೂ ಓದಿ: Virat Kohli-Rohit Sharma: ವಿಶ್ವ ದಾಖಲೆ ಬರೆಯಲು ಕೊಹ್ಲಿ-ರೋಹಿತ್ ನಡುವೆ 4 ರನ್ಗಳ ಪೈಪೋಟಿ
ಅದರಂತೆ ಮುಂಬರುವ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನ್ ಮತ್ತು ಶ್ರೀಲಂಕಾ ಅಥವಾ ಯುಎಇ ನಲ್ಲಿ ನಡೆಯುವ ಸಾಧ್ಯತೆಯಿದೆ. ಇಲ್ಲಿ ಭಾರತದ ಪಂದ್ಯಗಳು ಶ್ರೀಲಂಕಾ ಅಥವಾ ಯುಎಇ ನಲ್ಲಿ ನಡೆಯಬಹುದು.