AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 2021: ಮುಜುಗರಕ್ಕೊಳಗಾದ ಮೂರು ತಂಡಗಳು..!

ಮೆಲ್ಬೋರ್ನ್‌ನಲ್ಲಿ ಡಿಸೆಂಬರ್ 26 ರಿಂದ 28 ರವರೆಗೆ ನಡೆದ ಮೂರನೇ ಆ್ಯಶಸ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 185 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 267 ರನ್ ಗಳಿಸಿತ್ತು.

ಡಿಸೆಂಬರ್ 2021: ಮುಜುಗರಕ್ಕೊಳಗಾದ ಮೂರು ತಂಡಗಳು..!
ಸಾಂದರ್ಭಿಕ
TV9 Web
| Edited By: |

Updated on: Dec 29, 2021 | 3:05 PM

Share

2021 ರ ವರ್ಷಾಂತ್ಯಕ್ಕೆ ಬಂದು ನಿಂತಿದ್ದೇವೆ. ಬಾಕ್ಸಿಂಗ್​ ಡೇ ಟೆಸ್ಟ್​ನೊಂದಿಗೆ ಈ ವರ್ಷದ ಟೆಸ್ಟ್​ ಕ್ರಿಕೆಟ್​ಗೂ ಫುಲ್​ ಸ್ಟಾಪ್ ಬೀಳಲಿದೆ. ಈಗಾಗಲೇ ಆಸ್ಟ್ರೇಲಿಯಾ ಇಂಗ್ಲೆಂಡ್ ತಂಡವನ್ನು ಬಾಕ್ಸಿಂಗ್​ ಡೇ ಟೆಸ್ಟ್​ನಲ್ಲಿ ಸೋಲಿಸಿದರೆ, ಟೀಮ್ ಇಂಡಿಯಾ-ದಕ್ಷಿಣ ಆಫ್ರಿಕಾ ನಡುವಣ ಪಂದ್ಯವು ಮುಂದುವರೆದಿದೆ. ಅದರಂತೆ ಈ ಬಾರಿಯ ಡಿಸೆಂಬರ್ ಆಸ್ಟ್ರೇಲಿಯಾ ಪಾಲಿಗೆ ಆ್ಯಶಸ್ ಸರಣಿ ಗೆಲುವಿನ ಖುಷಿ ನೀಡಿದರೆ, ಇಂಗ್ಲೆಂಡ್ ಪಾಲಿಗೆ ಕಹಿ ನೆನಪು. ಜೊತೆಗೆ ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ತಂಡಗಳು ಕೂಡ ವರ್ಷಾಂತ್ಯದ ಟೆಸ್ಟ್ ಪಂದ್ಯಗಳಿಂದ ಮುಜುಗರಕ್ಕೊಳಗಾಗಿತ್ತು. ಏಕೆಂದರೆ ಈ ಮೂರು ತಂಡಗಳು ಡಿಸೆಂಬರ್​ ತಿಂಗಳಲ್ಲಿ 100 ಕ್ಕಿಂತ ಕಡಿಮೆ ರನ್​ಗೆ ಆಲೌಟ್ ಆಗಿದ್ದರು.

ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್, ಮೆಲ್ಬೋರ್ನ್: ಮೆಲ್ಬೋರ್ನ್‌ನಲ್ಲಿ ಡಿಸೆಂಬರ್ 26 ರಿಂದ 28 ರವರೆಗೆ ನಡೆದ ಮೂರನೇ ಆ್ಯಶಸ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 185 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 267 ರನ್ ಗಳಿಸಿತ್ತು. ಆಸ್ಟ್ರೇಲಿಯದ ಬೌಲರ್‌ಗಳ ದಾಳಿಗೆ ಇಂಗ್ಲೆಂಡ್‌ನ ಎರಡನೇ ಇನ್ನಿಂಗ್ಸ್ 68 ರನ್‌ಗಳಿಗೆ ಸರ್ವಪತನ ಕಂಡಿತು. ಸ್ಕಾಟ್ ಬೋಲ್ಯಾಂಡ್ 7 ರನ್ ನೀಡಿ 6 ವಿಕೆಟ್ ಪಡೆದು ಮಿಂಚಿದ್ದರು. ಇದರೊಂದಿಗೆ ಆ್ಯಶಸ್ ಸರಣಿಯ ಹೀನಾಯ ಸೋಲು ಇಂಗ್ಲೆಂಡ್ ಪಾಲಾಯಿತು.

ಭಾರತದ ವಿರುದ್ಧ ನ್ಯೂಜಿಲೆಂಡ್, ಮುಂಬೈ: ಮುಂಬೈನಲ್ಲಿ ಡಿಸೆಂಬರ್ 3 ರಿಂದ 6 ರವರೆಗೆ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್‌ ತಂಡವನ್ನು ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 62 ರನ್‌ಗಳಿಗೆ ಆಲೌಟ್ ಮಾಡಿತ್ತು. ಆರ್ ಅಶ್ವಿನ್ ಮೊದಲ ಇನಿಂಗ್ಸ್ ನಲ್ಲಿ 8 ರನ್ ನೀಡಿ 4 ವಿಕೆಟ್ ಪಡೆದರು. ಇದರೊಂದಿಗೆ ಡಿಸೆಂಬರ್​ನಲ್ಲಿ ಎರಡಂಕಿ ಮೊತ್ತಕ್ಕೆ ಆಲೌಟಾದ ದಾಖಲೆ ನ್ಯೂಜಿಲೆಂಡ್ ಪಾಲಾಯಿತು.

ಪಾಕಿಸ್ತಾನ್ ವಿರುದ್ದ ಬಾಂಗ್ಲಾದೇಶ, ಢಾಕಾ: ಢಾಕಾದಲ್ಲಿ ಡಿಸೆಂಬರ್ 4 ರಿಂದ 8 ರವರೆಗೆ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ, ಪಾಕಿಸ್ತಾನ್ ಗಳಿಸಿದ 300 ರನ್‌ಗಳಿಗೆ ಉತ್ತರವಾಗಿ ಬಾಂಗ್ಲಾದೇಶದ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 87 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ 2021 ರಲ್ಲಿ ಬಾಂಗ್ಲಾದೇಶ ತಂಡ ಕೂಡ ಟೆಸ್ಟ್​ ಕ್ರಿಕೆಟ್​ನಲ್ಲಿ ಎರಡಂಕಿ ಮೊತ್ತಕ್ಕೆ ಆಲೌಟ್ ಆದ ತಂಡ ಎನಿಸಿಕೊಂಡಿತು.

ಈ ಮೂರು ತಂಡಗಳು ಡಿಸೆಂಬರ್ ತಿಂಗಳಲ್ಲೇ ಎರಡಂಕಿ ಮೊತ್ತಕ್ಕೆ ಆಲೌಟ್ ಆಗಿರುವುದು ವಿಶೇಷ. ಅದರಂತೆ ಇಂಗ್ಲೆಂಡ್, ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ತಂಡಗಳು ಈ ವರ್ಷಾಂತ್ಯವನ್ನು ಅತ್ಯಂತ ಕಳಪೆ ದಾಖಲೆಯೊಂದಿಗೆ ಕೊನೆಗೊಳಿಸಿದೆ.

ಇದನ್ನೂ ಓದಿ:  ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(December 2021 is now the first calendar month with england, new zealand, banagladesh double digit bowled out)

ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ