AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: ಭಾರತದಲ್ಲಿ ಪಾಕಿಸ್ತಾನ್ ವಿಶ್ವಕಪ್ ಆಡಲ್ವಾ? ಪಿಸಿಬಿ ಅಧ್ಯಕ್ಷ ಹೇಳಿದ್ದೇನು?

ಪಾಕ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷರು ಬದಲಾಗಿದ್ದಾರೆ. ರಮೀಜ್ ರಾಜಾ ಅವರ ಬದಲಿಗೆ ನೂತನ ಅಧ್ಯಕ್ಷರಾಗಿ ನಜಮ್ ಸೇಥಿ ಅವರನ್ನು ನೇಮಿಸಲಾಗಿದೆ.

World Cup 2023: ಭಾರತದಲ್ಲಿ ಪಾಕಿಸ್ತಾನ್ ವಿಶ್ವಕಪ್ ಆಡಲ್ವಾ? ಪಿಸಿಬಿ ಅಧ್ಯಕ್ಷ ಹೇಳಿದ್ದೇನು?
India vs Pakistan
TV9 Web
| Edited By: |

Updated on: Dec 27, 2022 | 5:55 PM

Share

World Cup 2023: ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ್ ತಂಡ ಭಾಗವಹಿಸುವುದು ಇನ್ನೂ ಕೂಡ ಖಚಿತವಾಗಿಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷ ನಜಮ್ ಸೇಥಿ ತಿಳಿಸಿದ್ದಾರೆ. ಪಾಕ್ ತಂಡವನ್ನು ಭಾರತಕ್ಕೆ ಕಳುಹಿಸಬೇಕೆ ಅಥವಾ ಬೇಡವೇ ಎಂಬ ಬಗ್ಗೆಗಿನ ತೀರ್ಮಾನವನ್ನು ಕ್ರಿಕೆಟ್ ಮಂಡಳಿ ತೆಗೆದುಕೊಳ್ಳುವುದಿಲ್ಲ. ಇಂತಹ ತೀರ್ಮಾನಗಳನ್ನು ಸರ್ಕಾರದ ಮಟ್ಟದಲ್ಲಿ ತೆಗೆದುಕೊಳ್ಳಲಾಗುತ್ತದೆ ಎಂದು ಸೇಥಿ ತಿಳಿಸಿದ್ದಾರೆ.

2023 ರಲ್ಲಿ ಪಾಕಿಸ್ತಾನದಲ್ಲಿ ಏಷ್ಯಾಕಪ್ ನಡೆಯಲಿದೆ. ಆದರೆ ಪಾಕ್​ನಲ್ಲಿ ಟೂರ್ನಿ ನಡೆದರೆ ಭಾರತ ತಂಡ ಭಾಗವಹಿಸುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಸ್ಪಷ್ಟಪಡಿಸಿದ್ದರು. ಇದರ ಬೆನ್ನಲ್ಲೇ  ಪಾಕ್ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ರಮೀಜ್ ರಾಜಾ, ಟೀಮ್ ಇಂಡಿಯಾ ಏಷ್ಯಾಕಪ್​ನಿಂದ ಹಿಂದೆ ಸರಿದರೆ, ಪಾಕಿಸ್ತಾನ್ ತಂಡವು ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್​ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಬೆದರಿಕೆಯೊಡ್ಡಿದ್ದರು.

ಇದೀಗ ಪಾಕ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷರು ಬದಲಾಗಿದ್ದಾರೆ. ರಮೀಜ್ ರಾಜಾ ಅವರ ಬದಲಿಗೆ ನೂತನ ಅಧ್ಯಕ್ಷರಾಗಿ ನಜಮ್ ಸೇಥಿ ಅವರನ್ನು ನೇಮಿಸಲಾಗಿದೆ. ಹೀಗಾಗಿಯೇ ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ನಲ್ಲಿ ಪಾಕ್​ ತಂಡ ಭಾಗವಹಿಸಲಿದೆಯಾ ಎಂಬ ಪ್ರಶ್ನೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ.

ಇದನ್ನೂ ಓದಿ
Image
IPL 2023: 2 ದೇಶಗಳಿಂದ ಐಪಿಎಲ್​ಗೆ ಆಯ್ಕೆಯಾದ ಏಕೈಕ ಕ್ರಿಕೆಟಿಗ
Image
IPL 2023: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವುದು ಡೌಟ್, ಏಕೆಂದರೆ…
Image
IPL 2023: ಐಪಿಎಲ್​ಗೆ ನಮೀಬಿಯಾ, ಐರ್ಲೆಂಡ್, ಜಿಂಬಾಬ್ವೆ ಆಟಗಾರರು ಎಂಟ್ರಿ
Image
IPL 2023 RCB Team: RCB ಹೊಸ ತಂಡ ಹೀಗಿದೆ

ಈ ಬಗ್ಗೆ ಮಾತನಾಡಿರುವ ನಜಮ್ ಸೇಥಿ, ವಿಶ್ವಕಪ್​ಗಾಗಿ ಭಾರತಕ್ಕೆ ತೆರಳುವ ಬಗ್ಗೆ ಇನ್ನೂ ಕೂಡ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಇದನ್ನು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಮಾತ್ರ ನಿರ್ಧರಿಸುವುದಿಲ್ಲ. ಬದಲಾಗಿ ಸರ್ಕಾರ ಮಟ್ಟದಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಪಾಕ್ ಸರ್ಕಾರ ನಮ್ಮ ತಂಡವನ್ನು ಕಳುಹಿಸುವುದು ಬೇಡ ಎಂದರೆ ನಾವು ಕಳುಹಿಸಲ್ಲ ಎಂದು ನಜಮ್ ಸೇಥಿ ತಿಳಿಸಿದ್ದಾರೆ.

ಪಾಕಿಸ್ತಾನ ತಂಡವು ಕೊನೆಯದಾಗಿ 2016 ರಲ್ಲಿ ಟಿ20 ವಿಶ್ವಕಪ್‌ಗಾಗಿ ಭಾರತಕ್ಕೆ ಆಗಮಿಸಿತ್ತು. ಇದಾದ ಬಳಿಕ ಉಭಯ ತಂಡಗಳು ಐಸಿಸಿ ಪಂದ್ಯಾವಳಿಗಳಲ್ಲಿ ತಟಸ್ಥ ಸ್ಥಳಗಳಲ್ಲಿ ಮುಖಾಮುಖಿಯಾಗಿದ್ದವು. ಹಾಗೆಯೇ 2012-13ರ ಬಳಿಕ ಉಭಯ ತಂಡಗಳು ದ್ವಿಪಕ್ಷೀಯ ಸರಣಿಯನ್ನೂ ಸಹ ಆಡಿಲ್ಲ.

ಇದನ್ನೂ ಓದಿ: IPL 2023: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವುದು ಡೌಟ್, ಏಕೆಂದರೆ…

ಇದೀಗ ಪಾಕಿಸ್ತಾನದಲ್ಲಿ ನಡೆಯಲಿರುವ ಏಷ್ಯಾಕಪ್​ನಿಂದ ಸುರಕ್ಷತೆಯ ದೃಷ್ಟಿಯಲ್ಲಿ ಟೀಮ್ ಇಂಡಿಯಾ ಹೊರಗುಳಿಯುವ ನಿರ್ಧಾರ ತೆಗೆದುಕೊಂಡಿದೆ. ಇದರ ಬೆನ್ನಲ್ಲೇ ಮುಂದಿನ ವರ್ಷ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ ಅನ್ನು ಬಹಿಷ್ಕರಿಸುವ ಬೆದರಿಕೆಯನ್ನು ಪಾಕ್ ಮಂಡಳಿ ಹಾಕಿದೆ. ಇದಾಗ್ಯೂ ಐಸಿಸಿ ಟೂರ್ನಿಯಿಂದ ಪಾಕ್ ತಂಡವು ಹೊರಗುಳಿದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ. ಹೀಗಾಗಿ ಅಂತಿಮ ಹಂತದಲ್ಲಿ ತನ್ನ ನಿರ್ಧಾರವನ್ನು ಬದಲಿಸುವ ಸಾಧ್ಯತೆ ಹೆಚ್ಚಿದೆ.

Follow Us