ಮೊನಚಿಲ್ಲದ ಅರ್ಷದೀಪ್ ಸಿಂಗ್​ರ ಡೆತ್ ಓವರ್

Arshdeep Singh: ಯುವ ಎಡಗೈ ವೇಗಿ ಐಪಿಎಲ್​ನಲ್ಲಿ ಅತ್ಯುತ್ತಮ ಡೆತ್ ಓವರ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿದ್ದರು. ಐಪಿಎಲ್‌ನಲ್ಲಿ ಕೊನೆಯ ನಾಲ್ಕು ಓವರ್‌ಗಳಲ್ಲಿ 8.98 ಎಕಾನಮಿ ರೇಟ್​ನಲ್ಲಿ ಮಾತ್ರ ರನ್ ನೀಡಿದ್ದಾರೆ.

ಮೊನಚಿಲ್ಲದ ಅರ್ಷದೀಪ್ ಸಿಂಗ್​ರ ಡೆತ್ ಓವರ್
Arshdeep Singh
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 19, 2023 | 5:39 PM

ಟಿ20 ಕ್ರಿಕೆಟ್​ನಲ್ಲಿ ಡೆತ್ ಓವರ್​ಗಳು ಇಡೀ ಪಂದ್ಯದ ಚಿತ್ರಣ ಬದಲಿಸಬಹುದು. ಇದಕ್ಕೆ ಅತ್ಯುತ್ತಮ ಸಾಕ್ಷಿ, ಕಳೆದ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ ವಿರಾಟ್ ಕೊಹ್ಲಿ (Virat Kohli) ಹಾಗೂ ಟೀಮ್ ಇಂಡಿಯಾ ಆಟಗಾರರು ಕೊನೆಯ 18 ಎಸೆತಗಳಲ್ಲಿ 48 ರನ್ ಸಿಡಿಸಿ ರೋಚಕ ಗೆಲುವು ದಾಖಲಿಸಿರುವುದು. ಅತ್ತ ಪಾಕ್ ತಂಡದ ಡೆತ್ ಓವರ್ ಸ್ಪೆಷಲಿಸ್ಟ್​ಗಳ ಬೆಂಡೆತ್ತಿದ ಟೀಮ್ ಇಂಡಿಯಾಗೂ ಅದೇ ಸಮಸ್ಯೆ ಕಾಡುತ್ತಿರುವುದು ಸುಳ್ಳಲ್ಲ. ಇದಕ್ಕೆ ಸಾಕ್ಷಿಯೇ ಅರ್ಷದೀಪ್ ಸಿಂಗ್ ಅವರ ಈ ಅಂಕಿ ಅಂಶಗಳು.

ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 18ನೇ ಮತ್ತು 20ನೇ ಓವರ್ ಬೌಲಿಂಗ್ ಮಾಡಿದ್ದರು. 17ನೇ ಓವರ್ ಮುಕ್ತಾಯದ ವೇಳೆಗೆ ಐರ್ಲೆಂಡ್ ಕಲೆಹಾಕಿದ್ದು ಕೇವಲ 114 ರನ್​ಗಳು ಮಾತ್ರ. ಇನ್ನು 18ನೇ ಓವರ್​ನಲ್ಲಿ ಅರ್ಷದೀಪ್ ಸಿಂಗ್ ನೀಡಿದ್ದು ಕೇವಲ 2 ರನ್​ ಮಾತ್ರ.

ಆದರೆ ಇದೇ ಅರ್ಷದೀಪ್ ಸಿಂಗ್ 20ನೇ ಓವರ್​ನಲ್ಲಿ ಚಚ್ಚಿಸಿಕೊಂಡಿದ್ದು ಬರೋಬ್ಬರಿ 22 ರನ್​ಗಳು. ಹೀಗೆ 22 ರನ್​ಗಳನ್ನು ಕಲೆಹಾಕಿರುವುದು ಬ್ಯಾಟಿಂಗ್​ಗೆ ಇಳಿದ ಬೌಲರ್​ಗಳು ಎಂಬುದು ಇಲ್ಲಿ ಉಲ್ಲೇಖಾರ್ಹ.

ಪವರ್​ಪ್ಲೇನಲ್ಲಿ ಮಿಂಚುವ ಅರ್ಷದೀಪ್:

ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಅರ್ಷದೀಪ್ ಸಿಂಗ್ ಪವರ್​ಪ್ಲೇನಲ್ಲಿ ಅತ್ಯುತ್ತಮವಾಗಿ ಬೌಲಿಂಗ್ ಮಾಡುತ್ತಾರೆ. ಆದರೆ ಕೊನೆಯ ಓವರ್​ಗಳಲ್ಲಿ ಅತೀ ಹೆಚ್ಚು ರನ್​ ನೀಡುತ್ತಾರೆ ಎಂಬುದು. ಟೀಮ್ ಇಂಡಿಯಾ ಪರ ಇದುವರೆಗೆ 32 ಟಿ20 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಅರ್ಷದೀಪ್ ಸಿಂಗ್ 19ನೇ ಮತ್ತು 20ನೇ ಓವರ್‌ನಲ್ಲಿ 12.73 ರ ಸರಾಸರಿಯಲ್ಲಿ ಒಟ್ಟು 244 ರನ್ ಬಿಟ್ಟು ಕೊಟ್ಟಿದ್ದಾರೆ. ಈ ವೇಳೆ ಒಟ್ಟು 15 ಸಿಕ್ಸ್​ಗಳನ್ನು ಕೂಡ ಹೊಡೆಸಿಕೊಂಡಿದ್ದಾರೆ.

ಡೆತ್ ಓವರ್​ನಲ್ಲಿ ಅರ್ಷದೀಪ್ ಸಿಂಗ್​ರನ್ನು ಬಳಸಿಕೊಳ್ಳಲು ಕಾರಣವೇನು?

ಯುವ ಎಡಗೈ ವೇಗಿ ಐಪಿಎಲ್​ನಲ್ಲಿ ಅತ್ಯುತ್ತಮ ಡೆತ್ ಓವರ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿದ್ದರು. ಐಪಿಎಲ್‌ನಲ್ಲಿ ಕೊನೆಯ ನಾಲ್ಕು ಓವರ್‌ಗಳಲ್ಲಿ 8.98 ಎಕಾನಮಿ ರೇಟ್​ನಲ್ಲಿ ಮಾತ್ರ ರನ್ ನೀಡಿದ್ದಾರೆ. ಅಲ್ಲದೆ 28 ಇನಿಂಗ್ಸ್​ಗಳಲ್ಲಿ ಡೆತ್ ಓವರ್ ಮಾಡಿರುವ ಅರ್ಷದೀಪ್ ಸಿಂಗ್ ಒಟ್ಟು 27 ವಿಕೆಟ್​ಗಳನ್ನು ಪಡೆದಿದ್ದಾರೆ. ಇದೇ ಕಾರಣದಿಂದಾಗಿ ಟೀಮ್ ಇಂಡಿಯಾ ಡೆತ್ ಓವರ್​ ವೇಳೆ ಚೆಂಡನ್ನು ಅರ್ಷದೀಪ್ ಸಿಂಗ್​ಗೆ ನೀಡಲಾಗುತ್ತಿದೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಔಟ್ ಮಾಡುವುದೇ ನನ್ನ ಗುರಿ: ನಸೀಮ್ ಶಾ

ಆದರೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವಾಗ ಅರ್ಷದೀಪ್ ಸಿಂಗ್ 19ನೇ ಅಥವಾ 20ನೇ ಓವರ್​ನಲ್ಲಿ ದುಬಾರಿಯಾಗುತ್ತಿದ್ದಾರೆ. ಇದಕ್ಕೆ ಸಾಕ್ಷಿಯೇ 19ನೇ ಮತ್ತು 20ನೇ ಓವರ್​ಗಳಲ್ಲಿ 12.73 ರ ಸರಾಸರಿಯಲ್ಲಿ ರನ್ ಬಿಟ್ಟು ಕೊಟ್ಟಿರುವುದು. ಇದೀಗ ಟೀಮ್ ಇಂಡಿಯಾಗೆ ಬುಮ್ರಾ ಆಗಮನವಾಗಿದ್ದು, ಹೀಗಾಗಿ ಈ ಸಮಸ್ಯೆಗೆ ಪರಿಹಾರ ಸಿಗಲಿದೆಯಾ ಕಾದು ನೋಡಬೇಕಿದೆ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ