AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಸೌತ್ ಆಫ್ರಿಕಾ ಸರಣಿಗೂ ಟೀಮ್ ಇಂಡಿಯಾ ಆಟಗಾರ ಡೌಟ್..!

India vs South Africa: ಡಿಸೆಂಬರ್ 17 ರಿಂದ ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ಈ ಸರಣಿಗೂ ಮುನ್ನ ದೀಪಕ್ ಚಹರ್ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವುದು ಅನುಮಾನ. ಏಕೆಂದರೆ ಅವರ ತಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

IND vs SA: ಸೌತ್ ಆಫ್ರಿಕಾ ಸರಣಿಗೂ ಟೀಮ್ ಇಂಡಿಯಾ ಆಟಗಾರ ಡೌಟ್..!
ಟೀಮ್ ಇಂಡಿಯಾ
TV9 Web
| Edited By: |

Updated on:Dec 10, 2023 | 8:28 PM

Share

ಟೀಮ್ ಇಂಡಿಯಾ ವೇಗಿ ದೀಪಕ್ ಚಹರ್ (Deepak Chahar) ಸೌತ್ ಆಫ್ರಿಕಾ ವಿರುದ್ಧದ ಸೀಮಿತ ಓವರ್​ಗಳ ಸರಣಿಯಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಗಾಯದ ಕಾರಣ ಕಳೆದ ಕೆಲ ತಿಂಗಳಿಂದ ಮೈದಾನದದಿಂದ ಹೊರಗುಳಿದಿದ್ದ ದೀಪಕ್ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿ ಹಾಗೂ ಏಕದಿನ ಸರಣಿಗೆ ಆಯ್ಕೆಯಾಗಿದ್ದರು.

ಆದರೆ ತಂದೆ ಅನಾರೋಗ್ಯದ ಕಾರಣ ಅವರು ಸೌತ್ ಆಫ್ರಿಕಾಗೆ ಪ್ರಯಾಣ ಬೆಳೆಸಿಲ್ಲ. ಹೀಗಾಗಿ 3 ಪಂದ್ಯಗಳ ಟಿ20 ಸರಣಿಯಿಂದ ಅವರು ಹೊರಗುಳಿದಿದ್ದರು. ಇದೀಗ ಏಕದಿನ ಸರಣಿಗೂ ಅವರು ಅಲಭ್ಯರಾಗುವ ಸಾಧ್ಯತೆಯಿದೆ.

ದೀಪಕ್ ಚಹರ್ ಇನ್ನೂ ಡರ್ಬನ್‌ನಲ್ಲಿರುವ ಭಾರತ ತಂಡವನ್ನು ಸೇರಿಕೊಂಡಿಲ್ಲ. ಅವರ ಕುಟುಂಬದ ಸದಸ್ಯರೊಬ್ಬರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಅವರ ಕುಟುಂಬದ ಸದಸ್ಯರ ಆರೋಗ್ಯದ ಆಧಾರದ ಮೇಲೆ ಅವರು ತಂಡವನ್ನು ಸೇರಬಹುದು ಅಥವಾ ಸೇರಿಕೊಳ್ಳದೇ ಇರಬಹುದು” ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಿಸೆಂಬರ್ 17 ರಿಂದ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಶುರುವಾಗಲಿದ್ದು, ಇದಕ್ಕೂ ಮುನ್ನ ದೀಪಕ್ ಚಹರ್ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವುದು ಕೂಡ ಅನುಮಾನ.

ಈ ಬಗ್ಗೆ ಇನ್​ಸೈಡ್​ ಸ್ಪೋರ್ಟ್ಸ್ ಜೊತೆ ಮಾತನಾಡಿರುವ ದೀಪಕ್ ಚಹರ್, ನನಗೆ ನನ್ನ ತಂದೆ ಬಹಳ ಮುಖ್ಯ. ಅವರು ನನ್ನನ್ನು ಆಟಗಾರನನ್ನಾಗಿ ಮಾಡಿದವರು. ಸದ್ಯದ ಸ್ಥಿತಿಯಲ್ಲಿ ಅವರನ್ನು ಬಿಟ್ಟು ಎಲ್ಲಿಯೂ ಹೋಗಲು ಸಾಧ್ಯವಿಲ್ಲ ಎಂದಿದ್ದಾರೆ.

ಅಲ್ಲದೆ ಸೌತ್ ಆಫ್ರಿಕಾ ವಿರುದ್ಧದ ಸರಣಿ ಬಗ್ಗೆ ಕೇಳಿದಾಗ, ನಾನು ಭಾರತ ತಂಡವನ್ನು ಕೂಡಿಕೊಳ್ಳುವುದು ನನ್ನ ತಂದೆಯ ಆರೋಗ್ಯದ ಮೇಲೆ ಅವಲಂಬಿತವಾಗಿದೆ ಎಂದು ಒತ್ತಿ ಹೇಳಿದರು. ಇದು ನನ್ನ ತಂದೆಯ ಆರೋಗ್ಯವನ್ನು ಅವಲಂಬಿಸಿರುತ್ತದೆ. ಸದ್ಯಕ್ಕೆ ಅವರನ್ನು ಬಿಟ್ಟು ಹೋಗಲಾರೆ ಎಂದು ತಿಳಿಸಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದಲೂ ದೀಪಕ್ ಚಹರ್ ಹೊರಗುಳಿಯುವ ಸಾಧ್ಯತೆಯಿದೆ.

ಭಾರತ ಏಕದಿನ ತಂಡ: ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್ , ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ದೀಪಕ್ ಚಹರ್.

ಇದನ್ನೂ ಓದಿ: IPL 2024: ಐಪಿಎಲ್ ಯಾವಾಗ ಶುರು? ಇಲ್ಲಿದೆ ಉತ್ತರ

ಭಾರತ-ಸೌತ್ ಆಫ್ರಿಕಾ ಏಕದಿನ ಸರಣಿ ವೇಳಾಪಟ್ಟಿ:

  • ಡಿಸೆಂಬರ್ 17- ಮೊದಲ ಏಕದಿನ ಪಂದ್ಯ (ಜೋಹಾನ್ಸ್​ಬರ್ಗ್​)
  • ಡಿಸೆಂಬರ್ 19- ಎರಡನೇ ಏಕದಿನ ಪಂದ್ಯ (ಗೆಬರ್ಹ)
  • ಡಿಸೆಂಬರ್ 21- ಮೂರನೇ ಏಕದಿನ ಪಂದ್ಯ (ಪಾರ್ಲ್​)

Published On - 8:26 pm, Sun, 10 December 23

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ