AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರನೌಟ್​ಗೆ ಅವಕಾಶವಿದ್ದರೂ ಔಟ್ ಮಾಡದ ದೀಪಕ್ ಚಹರ್..!

Deepak Chahar: ವಿಶೇಷ ಎಂದರೆ ಈ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಕೈಯಾ ಅವರನ್ನು ಔಟ್ ಮಾಡುವ ಅವಕಾಶ ವೇಗಿ ದೀಪಕ್ ಚಹರ್ ಮುಂದಿತ್ತು.

Viral Video: ರನೌಟ್​ಗೆ ಅವಕಾಶವಿದ್ದರೂ ಔಟ್ ಮಾಡದ ದೀಪಕ್ ಚಹರ್..!
Deepak Chahar
TV9 Web
| Updated By: ಝಾಹಿರ್ ಯೂಸುಫ್|

Updated on: Aug 23, 2022 | 10:37 AM

Share

ಭಾರತ-ಜಿಂಬಾಬ್ವೆ ನಡುವಣ ಏಕದಿನ ಸರಣಿ ಮುಗಿದಿದೆ. ಈ ಸರಣಿಯನ್ನು 3-0 ಅಂತರದಿಂದ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಆತಿಥೇಯರನ್ನು ಕ್ಲೀನ್ ಸ್ವೀಪ್ ಮಾಡಿದೆ. ಆದರೆ ಮೊದಲೆರಡು ಪಂದ್ಯಗಳಲ್ಲಿ ನೀರಯಾಸವಾಗಿ ಗೆದ್ದಿದ್ದ ಟೀಮ್ ಇಂಡಿಯಾಗೆ ಜಿಂಬಾಬ್ವೆ ಭರ್ಜರಿ ಪೈಪೋಟಿ ನೀಡಿತ್ತು ಎಂಬುದು ವಿಶೇಷ. ಟೀಮ್ ಇಂಡಿಯಾ ನೀಡಿದ 290 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಜಿಂಬಾಬ್ವೆ ಪರ ಇನ್ನೊಸೆಂಟ್ ಕೈಯಾ ಹಾಗೂ ಕೈಟಾನೊ ಇನಿಂಗ್ಸ್ ಆರಂಭಿಸಿದ್ದರು.

ವಿಶೇಷ ಎಂದರೆ ಈ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಕೈಯಾ ಅವರನ್ನು ಔಟ್ ಮಾಡುವ ಅವಕಾಶ ವೇಗಿ ದೀಪಕ್ ಚಹರ್ ಮುಂದಿತ್ತು. ನಾನ್‌ಸ್ಟ್ರೈಕರ್‌ನ ತುದಿಯಲ್ಲಿದ್ದ ಓಪನರ್ ಇನ್ನೋಸೆಂಟ್ ಕೈಯಾ ಚಹರ್ ಚೆಂಡೆಸೆಯುವ ಮುನ್ನವೇ ಕ್ರೀಸ್ ಬಿಟ್ಟಿದ್ದರು. ಇದನ್ನು ಗಮಿಸಿದ ಟೀಮ್ ಇಂಡಿಯಾ ವೇಗಿ ಮಂಕಡ್ ರನೌಟ್ ಮಾಡಿದರು. ಆದರೆ ಅಂಪೈರ್​ಗೆ ಯಾವುದೇ ಮನವಿ ಸಲ್ಲಿಸದೇ ಜೀವದಾನ ನೀಡಿದರು. ಅಂದರೆ ದೀಪಕ್ ಚಹರ್ ಅಪೀಲ್ ಮಾಡಿದ್ದರೆ ಅಂಪೈರ್​ಗೆ ಔಟ್ ನೀಡುವ ಅವಕಾಶವಿತ್ತು. ಇದಕ್ಕೆ ಮುಂದಾಗದೇ ದೀಪಕ್ ಚಹರ್ ಮತ್ತೆ ಬೌಲಿಂಗ್ ಮಾಡಲು ಮುಂದಾದರು.

ಇದೀಗ ದೀಪಕ್ ಚಹರ್ ಅವರ ಮಂಕಡಿಂಗ್ ರನೌಟ್ ವಿಡಿಯೋ ವೈರಲ್ ಆಗಿದೆ. ಅಲ್ಲದೆ ಬೇಲ್ಸ್ ಎಗರಿಸಿದರೂ ಔಟ್​ಗಾಗಿ ಮೇಲ್ಮನವಿ ಸಲ್ಲಿಸದೇ ಕ್ರೀಡಾ ಸ್ಪೂರ್ತಿ ಮೆರೆದಿದಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಇನ್ನು ದೀಪಕ್ ಚಹರ್ ನೀಡಿದ ಈ ಜೀವದಾನವನ್ನು ಬಳಸಿಕೊಳ್ಳುವಲ್ಲಿ ಇನ್ನೊಸೆಂಟ್ ಕೈಯಾ ವಿಫಲರಾದರು. 9 ಎಸೆತಗಳಲ್ಲಿ 6 ರನ್​ಗಳಿಸಿ ಕೊನೆಗೆ ಚಹರ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ಹೊರನಡೆದರು.

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 290 ರನ್​ಗಳ ಬೃಹತ್ ಗುರಿ ಬೆನ್ನತ್ತಿದ ಜಿಂಬಾಬ್ವೆ ತಂಡವು 276 ರನ್​ಗಳಿಗೆ ಆಲೌಟ್ ಆಗುವ ಮೂಲಕ 13 ರನ್​ಗಳಿಂದ ವಿರೋಚಿತ ಸೋಲೊಪ್ಪಿಕೊಂಡಿತು.

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್