ಟಿ20 ವಿಶ್ವಕಪ್‌ನಿಂದ ದೀಪಕ್ ಚಹಾರ್ ಔಟ್! ಶಮಿ, ಸಿರಾಜ್, ಶಾರ್ದೂಲ್​ಗೆ ಆಸ್ಟ್ರೇಲಿಯಾ ಟಿಕೆಟ್; ವರದಿ

T20 World Cup 2022: ದೀಪಕ್ ಅವರನ್ನು ಮೀಸಲು ಆಟಗಾರರ ಪಟ್ಟಿಯಿಂದ ಕೈಬಿಟ್ಟಿದ್ದು ಅವರ ಬದಲಿಗೆ ಮತ್ತೊಬ್ಬ ವೇಗಿ ಶಾರ್ದೂಲ್ ಠಾಕೂರ್ ಭಾರತದ ಮೀಸಲು ಆಟಗಾರರ ಪಟ್ಟಿಗೆ ಎಂಟ್ರಿಕೊಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಟಿ20 ವಿಶ್ವಕಪ್‌ನಿಂದ ದೀಪಕ್ ಚಹಾರ್ ಔಟ್! ಶಮಿ, ಸಿರಾಜ್, ಶಾರ್ದೂಲ್​ಗೆ ಆಸ್ಟ್ರೇಲಿಯಾ ಟಿಕೆಟ್; ವರದಿ
ದೀಪಕ್ ಚಹಾರ್, ಶಾರ್ದೂಲ್ ಠಾಕೂರ್
Follow us
TV9 Web
| Updated By: ಪೃಥ್ವಿಶಂಕರ

Updated on:Oct 12, 2022 | 12:33 PM

ಟೀಂ ಇಂಡಿಯಾದ ಯುವ ವೇಗದ ಬೌಲರ್ ದೀಪಕ್ ಚಹಾರ್ (Deepak Chahar) 2022 ರ ಟಿ20 ವಿಶ್ವಕಪ್​ನಿಂದ (T20 World Cup) ಹೊರಗುಳಿದಿದ್ದಾರೆ ಎಂದು ‘ಸ್ಪೋರ್ಟ್ಸ್ ಟಾಕ್’ ವರದಿ ಮಾಡಿದೆ. ಈ ವರದಿಯ ಪ್ರಕಾರ ದೀಪಕ್ ಅವರನ್ನು ಮೀಸಲು ಆಟಗಾರರ ಪಟ್ಟಿಯಿಂದ ಕೈಬಿಟ್ಟಿದ್ದು ಅವರ ಬದಲಿಗೆ ಮತ್ತೊಬ್ಬ ವೇಗಿ ಶಾರ್ದೂಲ್ ಠಾಕೂರ್ (Shardul Thakur) ಭಾರತದ ಮೀಸಲು ಆಟಗಾರರ ಪಟ್ಟಿಗೆ ಎಂಟ್ರಿಕೊಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಮೊದಲು ಮೊಹಮ್ಮದ್ ಶಮಿ (Mohammad Shami), ದೀಪಕ್ ಚಹಾರ್, ಶ್ರೇಯಸ್ ಅಯ್ಯರ್ ಮತ್ತು ರವಿ ಬಿಷ್ಣೋಯ್ ಅವರು ಟಿ20 ವಿಶ್ವಕಪ್ 2022 ರ ಟೀಂ ಇಂಡಿಯಾದ ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದರು. ಆದರೆ ಇತ್ತೀಚಿನ ವರದಿಗಳ ಪ್ರಕಾರ, ಇಂಜುರಿ ಕಾರಣ ಟಿ20 ವಿಶ್ವಕಪ್​ನಿಂದ ಹೊರಬಿದ್ದಿರುವ ಜಸ್ಪ್ರೀತ್ ಬುಮ್ರಾ ಅವರ ಸ್ಥಾನಕ್ಕೆ ಮೊಹಮ್ಮದ್ ಶಮಿ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಿದ ಸಿರಾಜ್ ನಡುವೆ ಫೈಪೋಟಿ ಇದೆ ಎಂದು ಹೇಳಲಾಗುತ್ತಿದೆ.

ಹೀಗಾಗಿ ಕೊರೊನಾದಿಂದ ಗುಣಮುಖರಾಗಿರುವ ಶಮಿ, ಆಫ್ರಿಕಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿರುವ ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಆಸ್ಟ್ರೇಲಿಯಾಕ್ಕೆ ಹಾರಲು ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ. ಐಸಿಸಿ ನೀಡಿರುವ ಗಡುವಿನ ಮೊದಲು ಟೀಮ್ ಇಂಡಿಯಾ ತನ್ನ 15 ಜನರ ತಂಡವನ್ನು ಅಂತಿಮಗೊಳಿಸಬೇಕಾಗಿದ್ದು, ಅಕ್ಟೋಬರ್ 15 ರ ಒಳಗೆ ಅಂತಿಮ ತಂಡದ ಪಟ್ಟಿಯನ್ನು ಟೀಂ ಇಂಡಿಯಾ ಐಸಿಸಿಗೆ ಸಲ್ಲಿಸಬೇಕಾಗುತ್ತದೆ.

ಶಮಿ, ಸಿರಾಜ್ ಹಾಗೂ ಶಾರ್ದೂಲ್ ಆಸ್ಟ್ರೇಲಿಯಾಕ್ಕೆ ತಲುಪಿದ ನಂತರ ಬುಮ್ರಾ ಬದಲಿಗೆ ಯಾರನ್ನು ಆಡಿಸಬೇಕು ಎಂದು ನಾಯಕ ರೋಹಿತ್ ಶರ್ಮಾ ಮತ್ತು ಮ್ಯಾನೇಜ್‌ಮೆಂಟ್ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಆದರೆ ವಿಶ್ವಕಪ್‌ಗೆ ಬುಮ್ರಾ ಆಗಲಿ, ರವೀಂದ್ರ ಜಡೇಜಾ ಆಗಲಿ ಅಥವಾ ದೀಪಕ್ ಚಹಾರ್ ಆಗಲಿ ಲಭ್ಯವಾಗದಿರುವುದು ಭಾರತಕ್ಕೆ ದೊಡ್ಡ ಹಿನ್ನಡೆಯಾಗಿದ್ದು, ಎಲ್ಲಾ ಮೂವರು ಆಟಗಾರರು ಗಾಯದಿಂದ ಹೊರಗುಳಿದಿದ್ದಾರೆ.

ಇನ್ನು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಆಡಲಿರುವ ಪಂದ್ಯಗಳ ಬಗ್ಗೆ ಮಾತನಾಡುವುದಾದರೆ ಅಕ್ಟೋಬರ್ 23 ರಂದು ಪಾಕಿಸ್ತಾನ ವಿರುದ್ಧದ ಪಂದ್ಯದೊಂದಿಗೆ ಟೀಂ ಇಂಡಿಯಾ ತನ್ನ ವಿಶ್ವಕಪ್‌ ಅಭಿಯಾನವನ್ನು ಆರಂಭಿಸಲಿದೆ. ಆ ಬಳಿಕ ಅಕ್ಟೋಬರ್ 27 ರಂದು ಭಾರತ ಅರ್ಹತಾ ಸುತ್ತಲ್ಲಿ ಎ ಗುಂಪಿನ ರನ್ನರ್ ಅಪ್ ತಂಡವನ್ನು ಎದುರಿಸಲಿದೆ. ಇದರ ನಂತರ ಅಕ್ಟೋಬರ್ 30 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯ ನಡೆಯಲಿದೆ. ನವೆಂಬರ್ 2 ರಂದು ಬಾಂಗ್ಲಾದೇಶವನ್ನು ಎದುರಿಸಲಿದ್ದು, ನವೆಂಬರ್ 6 ರಂದು ಬಿ ಗುಂಪಿನಿಂದ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡದ ವಿರುದ್ಧ ಪಂದ್ಯವನ್ನಾಡಲಿದೆ.

Published On - 11:45 am, Wed, 12 October 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ