Team India: ಇಂಗ್ಲೆಂಡ್ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಔಟ್..!

| Updated By: ಝಾಹಿರ್ ಯೂಸುಫ್

Updated on: Jun 21, 2022 | 9:26 PM

India vs England: ಕಳೆದ ವರ್ಷ ನಡೆದ ಟೆಸ್ಟ್ ಸರಣಿಯ ಕೊನೆಯ ಪಂದ್ಯವನ್ನು ಕೊರೋನಾ ಕಾರಣದಿಂದ ಮುಂದೂಡಲಾಗಿತ್ತು. ಆ ಪಂದ್ಯವನ್ನು ಜುಲೈ 1 ರಿಂದ ಆಡಲಾಗುತ್ತದೆ.

Team India: ಇಂಗ್ಲೆಂಡ್ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಔಟ್..!
Team India
Follow us on

ಭಾರತ-ಇಂಗ್ಲೆಂಡ್ (England vs India) ನಡುವಣ ಸೀಮಿತ ಓವರ್​ಗಳ ಸರಣಿ ಜುಲೈ 7 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ (Team India) 3 ಟಿ20 ಹಾಗೂ 3 ಏಕದಿನ ಪಂದ್ಯಗಳನ್ನು ಆಡಲಿದೆ. ಇದಕ್ಕೂ ಮುನ್ನ ಭಾರತ-ಇಂಗ್ಲೆಂಡ್ ಏಕೈಕ ಟೆಸ್ಟ್ ಪಂದ್ಯವಾಡಲಿದೆ. ಕಳೆದ ವರ್ಷ ನಡೆದ ಟೆಸ್ಟ್ ಸರಣಿಯ ಕೊನೆಯ ಪಂದ್ಯವನ್ನು ಕೊರೋನಾ ಕಾರಣದಿಂದ ಮುಂದೂಡಲಾಗಿತ್ತು. ಆ ಪಂದ್ಯವನ್ನು ಜುಲೈ 1 ರಿಂದ ಆಡಲಾಗುತ್ತದೆ. ಇದಾದ ಬಳಿಕ ಸೀಮಿತ ಓವರ್​ಗಳ ಸರಣಿ ನಡೆಯಲಿದೆ. ಈ ಸಿರೀಸ್​ಗೆ ಇನ್ನಷ್ಟೇ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಬೇಕಿದೆ. ಆದರೆ ತಂಡದ ಆಯ್ಕೆಗೂ ಮುನ್ನವೇ ಪ್ರಮುಖ ಬೌಲರ್ ದೀಪಕ್ ಚಹರ್ (Deepak Chahar)  ಸರಣಿಯಿಂದ ಕೂಡ ಹೊರಗುಳಿಯುವುದಾಗಿ ತಿಳಿಸಿದ್ದಾರೆ. ಗಾಯಗೊಂಡಿರುವ ದೀಪಕ್ ಚಹರ್ ಇನ್ನೂ ಸಹ ಚೇತರಿಸಿಕೊಂಡಿಲ್ಲ. ಹೀಗಾಗಿ ಬಿಸಿಸಿಐ ಆಯ್ಕೆ ಸಮಿತಿಗೆ ಚಹರ್ ತಮ್ಮ ಅಲಭ್ಯತೆಯನ್ನು ತಿಳಿಸಿದ್ದಾರೆ.

ದೀಪಕ್ ಚಹರ್ ಭಾರತ-ಶ್ರೀಲಂಕಾ ನಡುವಣ ಸರಣಿಯ ವೇಳೆ ಗಾಯಗೊಂಡಿದ್ದರು. ಈ ಕಾರಣದಿಂದಾಗಿ ಅವರು ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಾಗ್ಯೂ ಇಂಗ್ಲೆಂಡ್ ವಿರುದ್ದದ ಸರಣಿ ವೇಳೆಗೆ ಲಭ್ಯರಿರಲಿದ್ದಾರೆ ಎನ್ನಲಾಗಿತ್ತು. ಏಕೆಂದರೆ  ದೀಪಕ್ ಚಹರ್ ಇತ್ತೀಚೆಗೆ ದಾಂಪತ್ಯ ಜೀವನಕ್ಕೂ ಕಾಲಿಟ್ಟಿದ್ದರು. ಹೀಗಾಗಿಯೇ ಅವರು ಶೀಘ್ರದಲ್ಲೇ ಕಂಬ್ಯಾಕ್ ಮಾಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಆದರೀಗ ಚಹರ್ ಸಂಪೂರ್ಣ ಫಿಟ್​ ಆಗಲು ಇನ್ನೂ 4 ರಿಂದ 5 ವಾರಗಳು ಬೇಕಾಗುತ್ತವೆ ಎಂದು ತಿಳಿದು ಬಂದಿದೆ. ಅದರಂತೆ ಏಷ್ಯಾಕಪ್ ವೇಳೆಗೆ ಅವರು ಆಯ್ಕೆಗೆ ಲಭ್ಯರಿರಲಿದ್ದಾರೆ. ಮುಂಬರುವ ಟಿ20 ವಿಶ್ವಕಪ್​ ಹಿನ್ನಲೆಯಲ್ಲಿ ದೀಪಕ್ ಚಹರ್ ಅವರ ಲಭ್ಯತೆಯು ಅನಿವಾರ್ಯ ಎನ್ನಬಹುದು. ಏಕೆಂದರೆ ಚಹರ್ ಹೊಸ ಬಾಲ್​ನಲ್ಲಿ, ಅದರಲ್ಲೂ ಪವರ್​ಪ್ಲೇನಲ್ಲಿ ವಿಕೆಟ್ ಟೇಕರ್ ಆಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಟಿ20 ವಿಶ್ವಕಪ್​ಗೂ ಮುನ್ನ ಅವರು ಉತ್ತಮ ಪ್ರದರ್ಶನ ನೀಡಿದ್ರೆ, ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಬಹುದು.

ಇದನ್ನೂ ಓದಿ
Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ರ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
ಪೆಟ್ರೋಲ್ ಪಂಪ್​ನಲ್ಲಿ ಚಹಾ ನೀಡುತ್ತಿರುವ ಶ್ರೀಲಂಕಾ ಕ್ರಿಕೆಟಿಗ
Rishabh Pant: ನಾಯಕನಾಗಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಷಭ್ ಪಂತ್

ಸದ್ಯ ನಾನು 4 ರಿಂದ 5 ಓವರ್‌ಗಳನ್ನು ಬೌಲಿಂಗ್ ಮಾಡುತ್ತಿದ್ದೇನೆ. ನನ್ನ ಚೇತರಿಕೆ ಹಂತ ಹಂತವಾಗಿ ನಡೆಯುತ್ತಿದೆ. ಮುಂದಿನ 4 ರಿಂದ 5 ವಾರಗಳಲ್ಲಿ ನಾನು ಸಂಪೂರ್ಣವಾಗಿ ಫಿಟ್ ಆಗುತ್ತೇನೆ. ಹೀಗಾಗಿ ಮುಂದಿನ ತಿಂಗಳು ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಭಾಗವಾಗಲು ಸಾಧ್ಯವಿಲ್ಲ. ಒಮ್ಮೆ ನಾನು ಫಿಟ್ ಆಗಿದ್ದರೆ, ಕ್ಲಬ್ ಮಟ್ಟದ ಸ್ಪರ್ಧೆಯ ಮೂಲಕ ನನ್ನ ಫಿಟ್‌ನೆಸ್ ಅನ್ನು ಪರೀಕ್ಷಿಸಲಿದ್ದೇನೆ ಎಂದು ದೀಪಕ್ ಚಹರ್ ತಿಳಿಸಿದ್ದಾರೆ. ಅದರಂತೆ ಇಂಗ್ಲೆಂಡ್ ವಿರುದ್ದದ ಸೀಮಿತ ಓವರ್​ಗಳ ಸರಣಿಯಿಂದ ದೀಪಕ್ ಚಹರ್ ಹೊರಗುಳಿದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳಾಪಟ್ಟಿ ಹೀಗಿದೆ:

ಜುಲೈ 1 – 5: ಏಕೈಕ ಟೆಸ್ಟ್ ಪಂದ್ಯ (ಎಡ್ಜ್‌ಬಾಸ್ಟನ್)

ಜುಲೈ 7: ಮೊದಲ ಟಿ20 ಪಂದ್ಯ (ಏಜಿಯಾಸ್ ಬೌಲ್)

ಜುಲೈ 9: 2ನೇ ಟಿ20 ಪಂದ್ಯ (ಎಡ್ಜ್‌ಬಾಸ್ಟನ್)

ಜುಲೈ 10: 3ನೇ ಟಿ20 ಪಂದ್ಯ (ಟ್ರೆಂಟ್ ಬ್ರಿಡ್ಜ್)

ಏಕದಿನ ಸರಣಿ ವೇಳಾಪಟ್ಟಿ:

ಜುಲೈ 12- ಮೊದಲ ಏಕದಿನ ಪಂದ್ಯ (ಕಿಯಾ ಓವಲ್)

ಜುಲೈ 14- 2ನೇ ಏಕದಿನ ಪಂದ್ಯ (ಲಾರ್ಡ್ಸ್)

ಜುಲೈ 17- 3ನೇ ಏಕದಿನ ಪಂದ್ಯ (ಮ್ಯಾಂಚೆಸ್ಟರ್)

ಭಾರತೀಯ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಪ್ರಸಿಧ್ದ್ ಕೃಷ್ಣ.

 

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.