Deepti Sharma: ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ
India Women vs England Women Test: ಈ ಪಂದ್ಯದಲ್ಲಿ 292 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದೆ. 2ನೇ ದಿನದಾಟದ ಅಂತ್ಯಕ್ಕೆ ಭಾರತ ತಂಡವು 6 ವಿಕೆಟ್ ಕಳೆದುಕೊಂಡು 186 ರನ್ ಪೇರಿಸಿದೆ.
ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ದೀಪ್ತಿ ಶರ್ಮಾ (Deepti Sharma) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಮಹಿಳಾ ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸುವ ಮೂಲಕ ಎಂಬುದು ವಿಶೇಷ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಶುಭಾ ಸತೀಶ್ (69), ಜೆಮಿಮಾ ರೊಡ್ರಿಗಾಸ್ (68), ಯಾಸ್ತಿಕಾ ಭಾಟಿಯಾ (66) ಹಾಗೂ ದೀಪ್ತಿ ಶರ್ಮಾ (67) ಅವರ ಅರ್ಧಶತಕಗಳ ನೆರವಿನಿಂದ 428 ರನ್ ಕಲೆಹಾಕಿತು.
ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ದೀಪ್ತಿ ಶರ್ಮಾ ಅವರ ಸ್ಪಿನ್ ಮೋಡಿಗೆ ಪೆವಿಲಿಯನ್ ಪರೇಡ್ ನಡೆಸಿದರು. 5.3 ಓವರ್ಗಳನ್ನು ಬೌಲಿಂಗ್ ಮಾಡಿದ್ದ ದೀಪ್ತಿ ಶರ್ಮಾ ಕೇವಲ 7 ರನ್ ನೀಡಿ 5 ವಿಕೆಟ್ ಕಬಳಿಸಿದರು. ಇದರೊಂದಿಗೆ ಇಂಗ್ಲೆಂಡ್ ತಂಡ 136 ರನ್ಗಳಿಗೆ ಆಲೌಟ್ ಆಯಿತು.
ಇದರೊಂದಿಗೆ ಮಹಿಳಾ ಟೆಸ್ಟ್ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ ಐದು ವಿಕೆಟ್ಗಳನ್ನು ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆ ದೀಪ್ತಿ ಶರ್ಮಾ ಪಾಲಾಯಿತು. ದೀಪ್ತಿ ಕೇವಲ 33 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಭಾರತೀಯ ಆಟಗಾರ್ತಿ ಗಾರ್ಗಿ ಬ್ಯಾನರ್ಜಿ ಹೆಸರಿನಲ್ಲಿತ್ತು.
1985 ರಲ್ಲಿ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ನಲ್ಲಿ ಗಾರ್ಗಿ 9.4 ಓವರ್ಗಳಲ್ಲಿ 5 ವಿಕೆಟ್ಗಳ ಸಾಧನೆ ಮಾಡಿದ್ದರು. ಇದೀಗ ಕೇವಲ 5.3 ಓವರ್ಗಳಲ್ಲಿ 5 ವಿಕೆಟ್ ಕಬಳಿಸುವ ಮೂಲಕ ದೀಪ್ತಿ ಶರ್ಮಾ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.
ಇನ್ನು ಈ ಪಂದ್ಯದಲ್ಲಿ 292 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದೆ. 2ನೇ ದಿನದಾಟದ ಅಂತ್ಯಕ್ಕೆ ಭಾರತ ತಂಡವು 6 ವಿಕೆಟ್ ಕಳೆದುಕೊಂಡು 186 ರನ್ ಪೇರಿಸಿದೆ.
ಸದ್ಯ ಕ್ರೀಸ್ನಲ್ಲಿ ಹರ್ಮನ್‌ಪ್ರೀತ್ ಕೌರ್ (44) ಹಾಗೂ ಪೂಜಾ ವಸ್ತ್ರಾಕರ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ ಟೀಮ್ ಇಂಡಿಯಾ ಮೊತ್ತ 478 ಕ್ಕೇರಿದೆ.
ಭಾರತ ಪ್ಲೇಯಿಂಗ್ XI: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಸ್ನೇಹ ರಾಣಾ, ಶುಭಾ ಸತೀಶ್, ಪೂಜಾ ವಸ್ತ್ರಾಕರ್, ರೇಣುಕಾ ಠಾಕೂರ್ ಸಿಂಗ್, ರಾಜೇಶ್ವರಿ ಗಾಯಕ್ವಾಡ್.
ಇದನ್ನೂ ಓದಿ: IPL 2024: ಐಪಿಎಲ್ಗಾಗಿ ಕೆಎಲ್ ರಾಹುಲ್ ಮಾಸ್ಟರ್ ಪ್ಲ್ಯಾನ್
ಇಂಗ್ಲೆಂಡ್ ಪ್ಲೇಯಿಂಗ್ XI: ಟಮ್ಮಿ ಬ್ಯೂಮಾಂಟ್, ಸೋಫಿಯಾ ಡಂಕ್ಲಿ, ಹೀದರ್ ನೈಟ್ (ನಾಯಕಿ), ನ್ಯಾಟ್ ಸ್ಕೈವರ್-ಬ್ರಂಟ್, ಡೇನಿಯಲ್ ವ್ಯಾಟ್, ಆಮಿ ಜೋನ್ಸ್ (ವಿಕೆಟ್ ಕೀಪರ್), ಸೋಫಿ ಎಕ್ಲೆಸ್ಟೋನ್, ಷಾರ್ಲೆಟ್ ಡೀನ್, ಕೇಟ್ ಕ್ರಾಸ್, ಲಾರೆನ್ ಫೈಲರ್, ಲಾರೆನ್ ಬೆಲ್.