DC vs MI, IPL 2023: ಐಪಿಎಲ್ನಲ್ಲಿಂದು ಸೋತವರ ಕಾಳಗ: ಮೊದಲ ಗೆಲುವಿಗೆ ಡೆಲ್ಲಿ-ಮುಂಬೈ ಸೆಣೆಸಾಟ
Delhi vs Mumbai: ವಿಶೇಷ ಎಂದರೆ ಈ ಬಾರಿಯ ಟೂರ್ನಿಯಲ್ಲಿ ಉಭಯ ತಂಡಗಳು ಇದುವರೆಗೆ ಗೆಲುವಿನ ಸಿಹಿ ಅನುಭವಿಸಿಲ್ಲ. ಡೆಲ್ಲಿ ಹಾಗೂ ಮುಂಬೈಗೆ (DC vs MI) ಇದು ಮಹತ್ವದ ಪಂದ್ಯ ಆಗಿರುವ ಕಾರಣ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.
ದಿನದಿಂದ ದಿನಕ್ಕೆ ರೋಚಕತೆ ಪಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ (IPL 2023) ಇಂದು ಸೋತವರ ನಡುವೆ ಕಾಳಗ ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರೋಹಿತ್ ಶರ್ಮಾ (Rohit Sharma) ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿ ಆಗುತ್ತಿದೆ. ವಿಶೇಷ ಎಂದರೆ ಈ ಬಾರಿಯ ಟೂರ್ನಿಯಲ್ಲಿ ಉಭಯ ತಂಡಗಳು ಇದುವರೆಗೆ ಗೆಲುವಿನ ಸಿಹಿ ಅನುಭವಿಸಿಲ್ಲ. ಡೆಲ್ಲಿ ಹಾಗೂ ಮುಂಬೈಗೆ (DC vs MI) ಇದು ಮಹತ್ವದ ಪಂದ್ಯ ಆಗಿರುವ ಕಾರಣ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್:
ಡೆಲ್ಲಿ ಕ್ಯಾಪಿಟಲ್ಸ್ ಆಡಿರುವ ಮೂರು ಪಂದ್ಯಗಳ ಪೈಕಿ ಮೂರರಲ್ಲೂ ಸೋಲುಂಡಿದೆ. ಪಾಯಿಂಟ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲಿದೆ. ತಂಡದ ಪರ ನಾಯಕ ಡೇವಿಡ್ ವಾರ್ನರ್ ಬಿಟ್ಟರೆ ಮತ್ಯಾವ ಪ್ಲೇಯರ್ ಕೂಡ ನಿರೀಕ್ಷೆಗೆ ತಕ್ಕಂತೆ ಆಟವಾಡುತ್ತಿಲ್ಲ. ಪೃಥ್ವಿ ಶಾ ಸಂಪೂರ್ಣ ವೈಫಲ್ಯ ಅನುಭವಿಸಿರುವು ತಂಡಕ್ಕೆ ದೊಡ್ಡ ಹಿನ್ನಡೆ ಆಗಿದೆ. ಕಳೆದ ಪಂದ್ಯದಲ್ಲಿ ಸ್ಥಾನ ಪಡೆದುಕೊಂಡಿದ್ದ ಮನೀಶ್ ಪಾಂಡೆ ಡಕ್ಗೆ ಔಟಾಗಿದ್ದರು, ರಿಲೀ ರುಸ್ಸೋ, ರೋಮನ್ ಪಾವೆಲ್, ಅಕ್ಷರ್ ಪಟೇಲ್, ಸರ್ಫರಾಜ್ ಖಾನ್, ಅಭಿಷೇಕ್ ಕಡೆಯಿಂದ ಉತ್ತಮ ಆಟ ಬರಬೇಕಿದೆ. ಬೌಲಿಂಗ್ನಲ್ಲಿ ಕೂಡ ಅಮನ್ ಹಕಿಮ್, ಕುಲ್ದೀಪ್ ಯಾದವ್, ಆ್ಯನ್ರಿಚ್ ನಾರ್ಟ್ಜೆ, ಮುಖೇಶ್ ಕುಮಾರ್ ಇದ್ದರೂ ಮಾರಕವಾಗಿಲ್ಲ. ಇಂದಿನ ಪಂದ್ಯಕ್ಕೆ ಡೆಲ್ಲಿಯಲ್ಲಿ ಬದಲಾವಣೆ ಕೂಡ ನಿರೀಕ್ಷಿಸಲಾಗಿದೆ.
IPL 2023: ಹೊಸ ಮೈಲುಗಲ್ಲು ದಾಟಿದ ಶುಭ್ಮನ್ ಗಿಲ್: ರಿಷಭ್ ಪಂತ್ ದಾಖಲೆ ಜಸ್ಟ್ ಮಿಸ್
ಮುಂಬೈ ಇಂಡಿಯನ್ಸ್:
ಮುಂಬೈ ತಂಡ ಕೂಡ ಆಡಿದ ಎರಡೂ ಪಂದ್ಯಗಳಲ್ಲಿ ಸೋಲು ಕಂಡು ಪಾಯಿಂಟ್ ಟೇಬಲ್ನಲ್ಲಿ ಒಂಬತ್ತನೆ ಸ್ಥಾನದಲ್ಲಿದೆ. ಮೊದಲ ಪಂದ್ಯದಲ್ಲೇ ಆರ್ಸಿಬಿ ವಿರುದ್ಧ ಸೋತರೆ ನಂತರದ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ ಕಳಪೆ ಪ್ರದರ್ಶನ ತೋರಿತು. ರೋಹಿತ್ ಪಡೆ ಇದೀಗ ಮೊದಲ ಗೆಲುವಿನ ಹುಡುಕಾಟದಲ್ಲಿದೆ. ತಂಡದಲ್ಲಿ ಅನುಭವಿ ಸ್ಟಾರ್ ಆಟಗಾರರ ದಂಡೇ ಇದ್ದರೂ ಮಿಂಚುತ್ತಿಲ್ಲ. ರೋಹಿತ್ ಕಡೆಯಿಂದ ನಾಯಕನ ಆಟ ಬರಬೇಕಿದೆ. ಇಶಾನ್ ಕಿಶನ್ ಉತ್ತಮ ಆರಂಭ ಒದಗಿಸಬೇಕಿದೆ. ಸೂರ್ಯಕುಮಾರ್ ಯಾದವ್ ಕಳಪೆ ಫಾರ್ಮ್ ತಂಡಕ್ಕೆ ದೊಡ್ಡ ಹಿನ್ನಡೆ ಆಗಿದೆ. ದುಬಾರಿ ಬೆಲೆ ಕೊಟ್ಟು ಖರೀದಿ ಮಾಡಿದ ಕ್ಯಾಮ್ರೋನ್ ಗ್ರೀನ್ ನಿರೀಕ್ಷೆಗೆ ತಕ್ಕಂತೆ ಆಡುತ್ತಿಲ್ಲ. ಟಿಮ್ ಡೇವಿಡ್, ತಿಲಕ್ ವರ್ಮಾ ಹಾಗೂ ನೆಹಲ್ ವಧೀರ ಮೇಲೆ ನಿರೀಕ್ಷೆ ಹೆಚ್ಚಿದೆ. ಜೋಫ್ರಾ ಆರ್ಚರ್, ಪಿಯೂಶ್ ಚಾವ್ಲಾ ಹಾಗೂ ಅರ್ಶದ್ ಖಾನ್ ಮಾರಕವಾಗಬೇಕಿದೆ.
ಸಂಭಾವ್ಯ ಪ್ಲೇಯಿಂಗ್ ಇಲೆವೆನ್:
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ರೋಮನ್ ಪಾವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಕುಲ್ದೀದೀಪ್ ಯಾದವ್, ಮುಖೇಶ್ ಕುಮಾರ್.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಜೋಫ್ರಾ ಆರ್ಚರ್, ಅರ್ಷದ್ ಖಾನ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:17 am, Tue, 11 April 23