AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ಗೆ ಮತ್ತೆ ವಕ್ಕರಿಸಿದ ಕೊರೊನಾ: ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಕೋವಿಡ್ ಪಾಸಿಟಿವ್

COVID-19 hits IPL 2022: ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ಆಟಗಾರನಿಗೆ ಕೊರೊನಾ ಪಾಸಿಟಿವ್ ಇರುವುದು ಕಂಡುಬಂದಿದೆ. ಮೂರು ದಿನಗಳ ಹಿಂದೆಯಷ್ಟೆ ಡೆಲ್ಲಿ ತಂಡದ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್‌ಗೆ ಕೊರೊನಾ ಕಾಣಿಸಿಕೊಂಡಿತ್ತು.

IPL 2022: ಐಪಿಎಲ್​ಗೆ ಮತ್ತೆ ವಕ್ಕರಿಸಿದ ಕೊರೊನಾ: ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಕೋವಿಡ್ ಪಾಸಿಟಿವ್
Delhi Capitals COVID 19 IPL 2022
TV9 Web
| Updated By: Vinay Bhat|

Updated on: Apr 18, 2022 | 12:01 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ (IPL 2022) ಮೇಲೆ ಮತ್ತೆ ಕೊರೊನಾ (Corona Virus) ಕರಿನೆರಳು ಆವರಿಸಿದೆ. ಐಪಿಎಲ್ 2022 ಟೂರ್ನಿಯನ್ನು ಕೊರೊನಾದಿಂದ ಕಾಪಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬಯೋಬಬಲ್ ಸೇರಿದಂತೆ ಹಲವು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಆದರೂ ಇದೀಗ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ಆಟಗಾರನಿಗೆ ಕೊರೊನಾ ಪಾಸಿಟಿವ್ ಇರುವುದು ಕಂಡುಬಂದಿದೆ. ಮೂರು ದಿನಗಳ ಹಿಂದೆಯಷ್ಟೆ ಡೆಲ್ಲಿ ತಂಡದ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್‌ಗೆ ಕೊರೊನಾ ಕಾಣಿಸಿಕೊಂಡಿತ್ತು. ಐಪಿಎಲ್ 2022ರ ಟೂರ್ನಿಯಲ್ಲಿ ಕಾಣಿಸಿಕೊಂಡ ಮೊದಲ ಕೋವಿಡ್ ಪ್ರಕರಣ ಇದಾಗಿತ್ತು. ಇದೀಗ ಆಟಗಾರನಿಗೂ ಕೊರೊನಾ ಅಂಟಿಕೊಂಡಿರುವುದು ಐಪಿಎಲ್ ಟೂರ್ನಿಯಲ್ಲಿ ಆತಂಕ ಶುರುವಾಗಿದೆ. ಕೋವಿಡ್ ಪ್ರಕರಣಗಳು ಕ್ರಮೇಣ ಹೆಚ್ಚಾಗುತ್ತಿರುವ ಕಾರಣ ಎರಡು ತಿಂಗಳ ಅವಧಿಯ ಐಪಿಎಲ್ 2022ಕ್ಕೂ ಕೋವಿಡ್‍ನ ಬಿರುಗಾಳಿ ಅಪ್ಪಳಿಸುತ್ತೋ ಎಂಬ ಭಯ ಕಾಡುತ್ತಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 22 ರಂದು ಮಹಾರಾಷ್ಟ್ರ ಕ್ರಿಕೆಟ್ ಅಸೀಸಿಯೇಷನ್ ಕ್ರೀಡಾಂಗಣದಲ್ಲಿ ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿದೆ. ಇದಕ್ಕಾಗಿ ಪಂತ್ ಪಡೆ ಇಂದು ಪುಣೆಗೆ ತೆರಳಬೇಕಿತ್ತು. ಆದರೀಗ ಓರ್ವ ಆಟಗಾರನಿಗೆ ಕೊರೊನಾ ದೃಢವಾಗಿರುವ ಕಾರಣ ಪ್ರಯಾಣವನ್ನು ರದ್ದು ಪಡಿಸಲಾಗಿದೆ. ಅಲ್ಲದೆ ಇಂದು ಆರ್​ಟಿಪಿಸಿಆರ್ ಟೆಸ್ಟ್​ ನಡೆಸಲಿದ್ದು ಇನ್ನೆಷ್ಟು ಆಟಗಾರರಿಗೆ ಕೊರೊನಾ ಇದೆ ಎಂಬುದು ತಿಳಿದುಬರಬೇಕಿದೆ. ತಂಡದ ಆಟಗಾರರೆಲ್ಲ ಇದೀಗ ಕ್ವಾರಂಟೈನ್​ಗೆ ಒಳಪಟ್ಟಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ಕೊರೊನಾದಿಂದಾಗಿ ಐಪಿಎಲ್ 14ನೇ ಆವೃತ್ತಿಯ ಮೊದಲಾರ್ಧವನ್ನು ಸ್ಥಗಿತಗೊಳಿಸಿ ನಂತರ ಉಳಿದ ಪಂದ್ಯಗಳನ್ನು ಯುಎಇಯಲ್ಲಿ ಆಯೋಜಿಸಲಾಗಿತ್ತು. 31 ಲೀಗ್ ಪಂದ್ಯಗಳ ಬಳಿಕ ಕೊರೊನಾ ಕಾರಣ ಭಾರತದಲ್ಲಿ ಟೂರ್ನಿ ಸ್ಥಗಿತಗೊಂಡಿತ್ತು. ಮೇ 4 ರಂದು ಬಿಸಿಸಿಐ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಘೋಷಿಸಿತ್ತು. ಬಳಿಕ ಮಾರ್ಚ್ 29 ರಂದು ಯುಎಇನಲ್ಲಿ ಉಳಿದ ಪಂದ್ಯಗಳನ್ನು ಆಯೋಜಿಸುವುದಾಗಿ ಬಿಸಿಸಿಐ ಘೋಷಿಸಿತ್ತು. ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ 2021ರ ಐಪಿಎಲ್ ಟೂರ್ನಿಯ ಉಳಿದ ಪಂದ್ಯಗಳನ್ನು ಬಿಸಿಸಿಐ ಯುಎಇನಲ್ಲಿ ಆಯೋಜಿಸಿತು.

ಈ ಬಾರಿಯ ಐಪಿಎಲ್ 2022 ಸರಣಿಯನ್ನು ಬಿಸಿಸಿಐ ಮಹಾರಾಷ್ಟ್ರದ ನಾಲ್ಕು ಕ್ರೀಡಾಂಗಣಗಳಲ್ಲಿ ನಡೆಸಲಾಗುತ್ತಿದೆ. ಮುಂಬೈ, ನವಿ ಮುಂಬೈ ಮತ್ತು ಪುಣೆಯಲ್ಲಿರುವ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಆದರೆ, ಇದೀಗ ಕಟ್ಟುನಿಟ್ಟಿನ ಬಯೋ ಬಬಲ್ ನಿಯಮವಿದ್ದರೂ ಐಪಿಎಲ್ 2022 ಟೂರ್ನಿಯಲ್ಲಿ ಕೊರೊನಾ ಕಾಣಿಸಿಕೊಂಡಿರುವುದು ಮತ್ತೆ ಆತಂಕಕ್ಕೆ ಕಾರಣವಾಗಿದೆ.

ಕೋವಿಡ್ ಬಗ್ಗೆ ಬಿಸಿಸಿಐ ನಿಯಮವೇನು?:

ಐಪಿಎಲ್ 2022 ಆರಂಭಕ್ಕೂ ಮುನ್ನ ಬಿಸಿಸಿಐ ಕೋವಿಡ್ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳನ್ನು ತಂದಿತ್ತು. ಯಾವುದೇ ತಂಡವು ಕೋವಿಡ್‌ ಸೋಂಕಿಗೆ ಗುರಿಯಾಗಿ ತಂಡದಲ್ಲಿ 12 ಕ್ಕಿಂತ ಕಡಿಮೆ ಆಟಗಾರರನ್ನು ಹೊಂದಿದ್ದರೆ(ಅದರಲ್ಲಿ ಕನಿಷ್ಠ 7 ಭಾರತೀಯ ಆಟಗಾರರಾಗಿರಬೇಕು) ಪಂದ್ಯಗಳನ್ನು ಬಿಸಿಸಿಐ ರೀ ಶೆಡ್ಯೂಲ್ ಮಾಡಲಿದೆ. ಮರು ನಿಗದಿಪಡಿಸಲು ಸಾಧ್ಯವಾಗದಿದ್ದರೆ, ಐಪಿಎಲ್ ತಾಂತ್ರಿಕ ತಂಡವು ಗಮನಕ್ಕೆ ತರಲಿದೆ. ನಂತರ ಇದಕ್ಕೆ ತಾಂತ್ರಿಕ ಸಮಿತಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ.

ದೇಶದಲ್ಲಿ ಕೋವಿಡ್ ಸೋಂಕು ಮತ್ತೆ ಏರಿಕೆ:

ಭಾರತದಲ್ಲಿ ಕೊರೊನಾ ಸೋಂಕು ಮತ್ತೆ ಏರಿಕೆಯಾಗುತ್ತಿದ್ದು, ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,183 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 214 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,44,280ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,21,967ಕ್ಕೆ ಏರಿಕೆಯಾಗಿದೆ.

Vishwa Deenadayalan: 18 ವರ್ಷದ ಭರವಸೆಯ ಟೇಬಲ್ ಟೆನಿಸ್ ಆಟಗಾರ ಅಪಘಾತದಲ್ಲಿ ಸಾವು

Ravindra Jadeja: ಐದನೇ ಸೋಲು: ಪಂದ್ಯ ಮುಗಿದ ಬಳಿಕ ರವೀಂದ್ರ ಜಡೇಜಾ ಹೇಳಿದ್ದೇನು ನೋಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್