
ಇಂಡಿಯನ್ ಪ್ರೀಮಿಯರ್ ಲೀಗ್ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ 17.3 ಓವರ್ಗಳಲ್ಲಿ ಚೇಸ್ ಮಾಡಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್, ಪಾತುಮ್ ನಿಸ್ಸಾಂಕ, ಕರುಣ್ ನಾಯರ್, ಟ್ರಿಸ್ಟನ್ ಸ್ಟಬ್ಸ್, ನಿತೀಶ್ ರಾಣಾ, ಅಕ್ಷರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ಲುಂಗಿ ಎನ್‌ಗಿಡಿ, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ಟಿ ನಟರಾಜನ್.
ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಜೇಮಿ ಓವರ್ಟನ್, ಅಕೇಲ್ ಹೊಸೈನ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಮುಖೇಶ್ ಚೌಧರಿ, ಗುರ್ಜಪ್ನೀತ್ ಸಿಂಗ್.
.
15 ಓವರ್ಗಳಲ್ಲಿ 126 ರನ್ ಕಲೆಹಾಕಿದ ಚೆನ್ನೈ ಸೂಪರ್ ಕಿಂಗ್ಸ್.
ಸಿಎಸ್ಕೆ ತಂಡದ ಗೆಲುವಿಗೆ 30 ಎಸೆತಗಳಲ್ಲಿ30 ರನ್ಗಳ ಅವಶ್ಯಕತೆ.
ಕ್ರೀಸ್ನಲ್ಲಿ ಸಂಜು ಸ್ಯಾಮ್ಸನ್ ಹಾಗೂ ಕಾರ್ತಿಕ್ ಶರ್ಮಾ ಭರ್ಜರಿ ಬ್ಯಾಟಿಂಗ್.
ಗೆಲುವಿನತ್ತ ದಾಪುಗಾಲಿಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್.
ಕುಲ್ದೀಪ್ ಯಾದವ್ ಎಸೆದ 12ನೇ ಓವರ್ನ 3ನೇ ಮತ್ತು 4ನೇ ಎಸೆತಗಳಲ್ಲಿ ಸಿಕ್ಸ್ ಸಿಡಿಸಿದ ಸಂಜು ಸ್ಯಾಮ್ಸನ್.
ಈ ಸಿಕ್ಸರ್ಗಳೊಂದಿಗೆ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸಂಜು ಸ್ಯಾಮ್ಸನ್.
12 ಓವರ್ಗಳ ಮುಕ್ತಾಯದ ವೇಳೆಗೆ ಸಿಎಸ್ಕೆ ಸ್ಕೋರ್ 92 ರನ್ಗಳು.
ಕ್ರೀಸ್ನಲ್ಲಿ ಸಂಜು ಸ್ಯಾಮ್ಸನ್ ಹಾಗೂ ಕಾರ್ತಿಕ್ ಶರ್ಮಾ ಬ್ಯಾಟಿಂಗ್.
ನಟರಾಜನ್ ಎಸೆದ 9ನೇ ಓವರ್ನ ಕೊನೆಯ ಎರಡು ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಫೋರ್ ಬಾರಿಸಿದ ಸಂಜು ಸ್ಯಾಮ್ಸನ್.
9 ಓವರ್ಗಳಲ್ಲಿ 66 ರನ್ ಕಲೆಹಾಕಿದ ಚೆನ್ನೈ ಸೂಪರ್ ಕಿಂಗ್ಸ್.
ರುತುರಾಜ್ ಗಾಯಕ್ವಾಡ್ ಹಾಗೂ ಉರ್ವಿಲ್ ಪಟೇಲ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದ ಡೆಲ್ಲಿ ಕ್ಯಾಪಿಟಲ್ಸ್.
ಕ್ರೀಶ್ನಲ್ಲಿ ಸಂಜು ಸ್ಯಾಮ್ಸನ್ ಹಾಗೂ ಕಾರ್ತಿಕ್ ಶರ್ಮಾ ಬ್ಯಾಟಿಂಗ್.
ಅಕ್ಷರ್ ಪಟೇಲ್ ಎಸೆದ 7ನೇ ಓವರ್ನ 3ನೇ ಎಸೆತದಲ್ಲಿ ಸ್ಟಂಪ್ ಔಟ್ ಆಗಿ ಹೊರ ನಡೆದ ಉರ್ವಿಲ್ ಪಟೇಲ್.
9 ಎಸೆತಗಳಲ್ಲಿ 17 ರನ್ ಬಾರಿಸಿ ಇನಿಂಗ್ಸ್ ಅಂತ್ಯಗೊಳಿಸಿದ ಉರ್ವಿಲ್ ಪಟೇಲ್.
7 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 49 ರನ್ ಕಲೆಹಾಕಿರುವ ಸಿಎಸ್ಕೆ.
ಕ್ರೀಸ್ನಲ್ಲಿ ಸಂಜು ಸ್ಯಾಮ್ಸನ್ ಹಾಗೂ ಕಾರ್ತಿಕ್ ಶರ್ಮಾ ಬ್ಯಾಟಿಂಗ್.
ಲುಂಗಿ ಎನ್‌ಗಿಡಿ ಎಸೆದ 6ನೇ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿದ ಉರ್ವಿಲ್ ಪಟೇಲ್.
ಪವರ್ಪ್ಲೇ ಮುಕ್ತಾಯದ ವೇಳೆಗೆ ಸಿಎಸ್ಕೆ ತಂಡದ ಸ್ಕೋರ್ 44 ರನ್ಗಳು.
ಮೊದಲ 6 ಓವರ್ಗಳಲ್ಲಿ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದ ಡೆಲ್ಲಿ ಕ್ಯಾಪಿಟಲ್ಸ್.
ಕ್ರೀಸ್ನಲ್ಲಿ ಉರ್ವಿಲ್ ಪಟೇಲ್ ಹಾಗೂ ಸಂಜು ಸ್ಯಾಮ್ಸನ್ ಬ್ಯಾಟಿಂಗ್.
ಲುಂಗಿ ಎನ್‌ಗಿಡಿ ಎಸೆದ 4ನೇ ಓವರ್ನ 5ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಫ್ಲಿಕ್ ಮಾಡಿ ಕ್ಯಾಚ್ ನೀಡಿದ ಲುಂಗಿ ಎನ್‌ಗಿಡಿ.
ಕೇವಲ 6 ರನ್ಗಳಿಸಿ ವಿಕೆಟ್ ಒಪ್ಪಿಸಿದ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್.
ಕ್ರೀಸ್ನಲ್ಲಿ ಸಂಜು ಸ್ಯಾಮ್ಸನ್ ಹಾಗೂ ಉರ್ವಿಲ್ ಪಟೇಲ್ ಬ್ಯಾಟಿಂಗ್.
ಮೊದಲ 2 ಓವರ್ಗಳಲ್ಲಿ 15 ರನ್ ಕಲೆಹಾಕಿದ ಚೆನ್ನೈ ಸೂಪರ್ ಕಿಂಗ್ಸ್.
ಕ್ರೀಸ್ನಲ್ಲಿ ಸಂಜು ಸ್ಯಾಮ್ಸನ್ ಹಾಗೂ ರುತುರಾಜ್ ಗಾಯಕ್ವಾಡ್.
ಚೆನ್ನೈ ಸೂಪರ್ ಕಿಂಗ್ಸ್ಗೆ 156 ರನ್ಗಳ ಗುರಿ ನೀಡಿರುವ ಡೆಲ್ಲಿ ಕ್ಯಾಪಿಟಲ್ಸ್.
ಜೇಮಿ ಓವರ್ಟನ್ ಎಸೆದ 19ನೇ ಓವರ್ನ 5ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಟ್ರಿಸ್ಟನ್ ಸ್ಟಬ್ಸ್.
19ನೇ ಓವರ್ನಲ್ಲಿ ಕೇವಲ 5 ರನ್ ಮಾತ್ರ ನೀಡಿದ ಜೇಮಿ ಓವರ್ಟನ್ (38).
ಕ್ರೀಸ್ನಲ್ಲಿ ಸಮೀರ್ ರಿಝ್ವಿ ಹಾಗೂ ಟ್ರಿಸ್ಟನ್ ಸ್ಟಬ್ಸ್ ಬ್ಯಾಟಿಂಗ್.
ಅನ್ಶುಲ್ ಕಂಬೋಜ್ ಎಸೆದ 18ನೇ ಓವರ್ನ 6ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ರಿಝ್ವಿ.
41 ಎಸೆತಗಳಲ್ಲಿ ಅರ್ಧಶತಕದ ಜೊತೆಯಾಟ ಪೂರೈಸಿದ ಟ್ರಿಸ್ಟನ್ ಸ್ಟಬ್ಸ್ ಮತ್ತು ಸಮೀರ್ ರಿಝ್ವಿ.
18ನೇ ಓವರ್ನ ಕೊನೆಯ ಎಸೆತದಲ್ಲಿ ಲೆಗ್ ಸೈಡ್ನತ್ತ ಮತ್ತೊಂದು ಸಿಕ್ಸ್ ಬಾರಿಸಿದ ರಿಝ್ವಿ.
18 ಓವರ್ಗಳ ಮುಕ್ತಾಯದ ವೇಳೆಗೆ ಡೆಲ್ಲಿ ಕ್ಯಾಪಿಟಲ್ಸ್ ಸ್ಕೋರ್ 130 ರನ್ಗಳು.
15.2 ಓವರ್ಗಳಲ್ಲಿ ಶತಕ ಪೂರೈಸಿದ ಡೆಲ್ಲಿ ಕ್ಯಾಪಿಟಲ್ಸ್.
ಮುಖೇಶ್ ಚೌಧರಿ ಎಸೆದ 16ನೇ ಓವರ್ನ 4ನೇ ಎಸೆತದಲ್ಲಿ ಸಿಕ್ಸ್ ಸಿಡಿಸಿದ ಸಮೀರ್ ರಿಝ್ವಿ.
16 ಓವರ್ಗಳಲ್ಲಿ 109 ರನ್ ಕಲೆಹಾಕಿದ ಡೆಲ್ಲಿ ಕ್ಯಾಪಿಟಲ್ಸ್.
ಕ್ರೀಸ್ನಲ್ಲಿ ಟ್ರಿಸ್ಟನ್ ಸ್ಟಬ್ಸ್ ಹಾಗೂ ಸಮೀರ್ ರಿಝ್ವಿ ಬ್ಯಾಟಿಂಗ್.
15 ಓವರ್ಗಳಲ್ಲಿ 97 ರನ್ ಕಲೆಹಾಕಿರುವ ಡೆಲ್ಲಿ ಕ್ಯಾಪಿಟಲ್ಸ್.
5 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಸಿಎಸ್ಕೆ.
ಕ್ರೀಸ್ನಲ್ಲಿ ಟ್ರಿಸ್ಟನ್ ಸ್ಟಬ್ಸ್ ಹಾಗೂ ಸಮೀರ್ ರಿಝ್ವಿ ಬ್ಯಾಟಿಂಗ್.
ಔಟಾದ ಬ್ಯಾಟರ್ಗಳು:
ಗುರ್ಜಪ್ನೀತ್ ಸಿಂಗ್ ಎಸೆದ 14ನೇ ಓವರ್ನ 4ನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ಟ್ರಿಸ್ಟನ್ ಸ್ಟಬ್ಸ್.
14 ಓವರ್ಗಳ ಮುಕ್ತಾಯದ ವೇಳೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಕೋರ್ 87 ರನ್ಗಳು.
ಕ್ರೀಸ್ನಲ್ಲಿ ಟ್ರಿಸ್ಟನ್ ಸ್ಟಬ್ಸ್ ಹಾಗೂ ಸಮೀರ್ ರಿಝ್ವಿ ಬ್ಯಾಟಿಂಗ್.
ಗುರ್ಜಪ್ನೀತ್ ಸಿಂಗ್ ಎಸೆದ 11ನೇ ಓವರ್ನ ಕೊನೆಯ ಎಸೆತದಲ್ಲಿ ಫ್ರಂಟ್ ಫೀಲ್ಡರ್ಗೆ ಸುಲಭ ಕ್ಯಾಚ್ ನೀಡಿದ ಅಕ್ಷರ್ ಪಟೇಲ್.
ಕೇವಲ 2 ರನ್ಗಳಿಸಿ ವಿಕೆಟ್ ಒಪ್ಪಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್.
ಕ್ರೀಸ್ನಲ್ಲಿ ಟ್ರಿಸ್ಟನ್ ಸ್ಟಬ್ಸ್ ಮತ್ತು ಸಮೀರ್ ರಿಝ್ವಿ ಬ್ಯಾಟಿಂಗ್.
ನೂರ್ ಅಹ್ಮದ್ ಎಸೆದ 10ನೇ ಓವರ್ನ 2ನೇ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ನಿತೀಶ್ ರಾಣಾ.
ಮೂರನೇ ಎಸೆತದಲ್ಲಿ ಲೆಗ್ ಸೈಡ್ನಲ್ಲಿ ಕ್ಯಾಚ್ ನೀಡಿದ ನಿತೀಶ್ ರಾಣಾ (15).
ಡೆಲ್ಲಿ ಕ್ಯಾಪಿಟಲ್ಸ್ ತಂಡದ 4ನೇ ವಿಕೆಟ್ ಪತನ.
10 ಓವರ್ಗಳ ಮುಕ್ತಾಯದ ವೇಳೆಗೆ ಡೆಲ್ಲಿ ಕ್ಯಾಪಿಟಲ್ಸ್ ಸ್ಕೋರ್ 62/4
ಕ್ರೀಸ್ನಲ್ಲಿ ಟ್ರಿಸ್ಟನ್ ಸ್ಟಬ್ಸ್ ಮತ್ತು ಅಕ್ಷರ್ ಪಟೇಲ್ ಬ್ಯಾಟಿಂಗ್.
9 ಓವರ್ಗಳಲ್ಲಿ 6.33 ಸರಾಸರಿಯಲ್ಲಿ ರನ್ ಕಲೆಹಾಕಿರುವ ಡೆಲ್ಲಿ ಕ್ಯಾಪಿಟಲ್ಸ್.
54 ಎಸೆತಗಳಲ್ಲಿ ಕೇವಲ 57 ರನ್ ಮಾತ್ರ ಗಳಿಸಿರುವ ಡೆಲ್ಲಿ ಪಡೆ.
9 ಓವರ್ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್.
ಕ್ರೀಸ್ನಲ್ಲಿ ನಿತೀಶ್ ರಾಣಾ ಹಾಗೂ ಅಕ್ಷರ್ ಪಟೇಲ್ ಬ್ಯಾಟಿಂಗ್.
ನೂರ್ ಅಹ್ಮದ್ ಎಸೆದ 8ನೇ ಓವರ್ನ 2ನೇ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಕರುಣ್ ನಾಯರ್.
ಈ ಫೋರ್ನೊಂದಿಗೆ ಅರ್ಧಶತಕ ಪೂರೈಸಿದ ಡೆಲ್ಲಿ ಕ್ಯಾಪಿಟಲ್ಸ್.
ಕೊನೆಯ ಎಸೆತದಲ್ಲಿ ಸ್ವೀಪ್ ಶಾಟ್ಗೆ ಯತ್ನಿಸಿ ಕ್ಯಾಚ್ ನೀಡಿದ ಕರುಣ್ ನಾಯರ್ (13)
8 ಓವರ್ಗಳ ಮುಕ್ತಾಯದ ವೇಳೆಗೆ ಡೆಲ್ಲಿ ಕ್ಯಾಪಿಟಲ್ಸ್ ಸ್ಕೋರ್ 52 ರನ್ಗಳು.
ಕ್ರೀಸ್ನಲ್ಲಿ ನಿತೀಶ್ ರಾಣಾ ಹಾಗೂ ಕರುಣ್ ನಾಯರ್ ಬ್ಯಾಟಿಂಗ್.
ಔಟಾದ ಬ್ಯಾಟರ್ಗಳು:
ಅಕಿಲ್ ಹೊಸೈನ್ ಎಸೆದ 6ನೇ ಓವರ್ನ ಮೊದಲ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದ ಕೆಎಲ್ ರಾಹುಲ್.
13 ಎಸೆತಗಳಲ್ಲಿ ಕೇವಲ 12 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಕೆಎಲ್ ರಾಹುಲ್.
ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 2ನೇ ಯಶಸ್ಸು.
ಅನ್ಶುಲ್ ಕಂಬೋಜ್ ಎಸೆದ 5ನೇ ಓವರ್ನ 5ನೇ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಎಡಗೈ ದಾಂಡಿಗ ನಿತೀಶ್ ರಾಣಾ.
5 ಓವರ್ಗಳ ಮುಕ್ತಾಯದ ವೇಳೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಕೋರ್ 36/1
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ನಿತೀಶ್ ರಾಣಾ ಬ್ಯಾಟಿಂಗ್.
ಮುಖೇಶ್ ಚೌಧರಿ ಎಸೆದ 4ನೇ ಓವರ್ನ 3ನೇ ಎಸೆತದಲ್ಲಿ ಆಫ್ ಸೈಡ್ನತ್ತ ರಾಕೆಟ್ ವೇಗದಲ್ಲಿ ಫೋರ್ ಬಾರಿಸಿದ ಪಾತುಮ್ ನಿಸ್ಸಂಕಾ.
4ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಸ್ಕೂಪ್ ಮಾಡಿ ಸಿಕ್ಸ್ ಸಿಡಿಸಿದ ನಿಸ್ಸಂಕಾ.
ಕೊನೆಯ ಎಸೆತದಲ್ಲಿ ಕ್ಯಾಚ್ ನೀಡಿದ ಪಾತುಮ್ ನಿಸ್ಸಂಕಾ (19)
ಸಿಎಸ್ಕೆ ತಂಡಕ್ಕೆ ಮೊದಲ ಯಶಸ್ಸು.
ಅಕಿಲ್ ಹೊಸೈನ್ ಎಸೆದ 3ನೇ ಓವರ್ನ ಕೊನೆಯ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಕೆಎಲ್ ರಾಹುಲ್.
ಮೂರು ಓವರ್ಗಳಲ್ಲಿ ಕೇವಲ 19 ರನ್ ಮಾತ್ರ ಕಲೆಹಾಕಿದ ಡೆಲ್ಲಿ ಕ್ಯಾಪಿಟಲ್ಸ್.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಪಾತುಮ್ ನಿಸ್ಸಂಕಾ ಬ್ಯಾಟಿಂಗ್.
ಮುಖೇಶ್ ಚೌಧರಿ ಎಸೆದ 2ನೇ ಓವರ್ನ 2ನೇ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ಕೆಎಲ್ ರಾಹುಲ್.
ದ್ವಿತೀಯ ಓವರ್ನಲ್ಲಿ ಕೇವಲ 5 ರನ್ ಮಾತ್ರ ನೀಡಿದ ಎಡಗೈ ವೇಗಿ ಮುಖೇಶ್ ಚೌಧರಿ
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಪಾತುಮ್ ನಿಸ್ಸಂಕಾ ಬ್ಯಾಟಿಂಗ್.
ಮೊದಲ ಓವರ್ನಲ್ಲಿ 8 ರನ್ ಕಲೆಹಾಕಿದ ಡೆಲ್ಲಿ ಕ್ಯಾಪಿಟಲ್ಸ್.
ಕ್ರೀಸ್ನಲ್ಲಿ ಪಾತುಮ್ ನಿಸ್ಸಂಕಾ ಹಾಗೂ ಕೆಎಲ್ ರಾಹುಲ್ ಬ್ಯಾಟಿಂಗ್.
ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಜೇಮಿ ಓವರ್ಟನ್, ಅಕೇಲ್ ಹೊಸೈನ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಮುಖೇಶ್ ಚೌಧರಿ, ಗುರ್ಜಪ್ನೀತ್ ಸಿಂಗ್.
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್, ಪಾತುಮ್ ನಿಸ್ಸಾಂಕ, ಕರುಣ್ ನಾಯರ್, ಟ್ರಿಸ್ಟನ್ ಸ್ಟಬ್ಸ್, ನಿತೀಶ್ ರಾಣಾ, ಅಕ್ಷರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ಲುಂಗಿ ಎನ್‌ಗಿಡಿ, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ಟಿ ನಟರಾಜನ್.
🚨 Toss 🚨@DelhiCapitals have won the toss and elected to bat first against @ChennaiIPL in Delhi.
Updates ▶️ https://t.co/f1bRZthndy#TATAIPL | #KhelBindaas | #DCvCSK pic.twitter.com/Cm25OUrv4N
— IndianPremierLeague (@IPL) May 5, 2026
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಸಿಎಸ್ಕೆ ತಂಡ ಮೊದಲು ಬೌಲಿಂಗ್ ಮಾಡಲಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಸಿಎಸ್ಕೆ ತಂಡ ಮೊದಲು ಬೌಲಿಂಗ್ ಮಾಡಲಿದೆ.
Points are level. Stakes are sky-high. One win could change everything in the race to the Top 4.#ChennaiSuperKings 🆚 #DelhiCapitals… Who wins this? 👀#TATAIPL Revenge Week 👉 #DCvCSK | TUE, 5th May, 6:30 PM pic.twitter.com/XCA8UbHci5
— Star Sports (@StarSportsIndia) May 5, 2026
ಅಂಕ ಪಟ್ಟಿಯಲ್ಲಿ ಸಿಎಸ್ಕೆ 6ನೇ ಸ್ಥಾನದಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 7ನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಪಾಯಿಂಟ್ಸ್ ಟೇಬಲ್ನಲ್ಲಿ ಮೇಲೇರಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈವರೆಗೆ 32 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಸಿಎಸ್ಕೆ ತಂಡ ಬರೋಬ್ಬರಿ 20 ಪಂದ್ಯಗಳಲ್ಲಿ ಜಯಗಳಿಸಿದ್ದಾರೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದಿರುವುದು ಕೇವಲ 12 ಪಂದ್ಯಗಳಲ್ಲಿ ಮಾತ್ರ.
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ನಾಥನ್ ಎಲ್ಲಿಸ್, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್ (ನಾಯಕ) ನಿತೀಶ್ ರಾಣಾ, ಅಭಿಷೇಕ್ ಪೊರೆಲ್, ಅಜಯ್ ಮಂಡಲ್, ಅಶುತೋಷ್ ಶರ್ಮಾ, ದುಷ್ಮಂತ ಚಮೀರಾ, ಕರುಣ್ ನಾಯರ್, ಕೆಎಲ್ ರಾಹುಲ್, ಕುಲದೀಪ್ ಯಾದವ್, ಮಾಧವ್ ತಿವಾರಿ, ಮಿಚೆಲ್ ಸ್ಟಾರ್ಕ್, ಸಮೀರ್ ರಿಝ್ವಿ, ಟಿ ನಟರಾಜನ್, ತ್ರಿಪುರಾಣ ವಿಜಯ್, ಟ್ರಿಸ್ಟನ್ ಸ್ಟಬ್ಸ್, ವಿಪ್ರಾಜ್ ನಿಗಮ್, ಡೇವಿಡ್ ಮಿಲ್ಲರ್, ಬೆನ್ ಡಕೆಟ್, ಆಖಿಬ್ ನಬಿ, ಪಾತುಮ್ ನಿಸ್ಸಾಂಕಾ, ಲುಂಗಿ ಎನ್‌ಗಿಡಿ, ಸಾಹಿಲ್ ಪರಾಖ್, ಪೃಥ್ವಿ ಶಾ, ಕೈಲ್ ಜೇಮಿಸನ್.
Published On - 5:59 pm, Tue, 5 May 26