
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 39ನೇ ಪಂದ್ಯದಲ್ಲಿ ಆರ್‌ಸಿಬಿ ಡೆಲ್ಲಿ ತಂಡವನ್ನು ಹೀನಾಯವಾಗಿ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ 16.3 ಓವರ್‌ಗಳಲ್ಲಿ 75 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಆರ್‌ಸಿಬಿ ಇನ್ನು 81 ಎಸೆತಗಳು ಬಾಕಿ ಇರುವಂತೆಯೇ 1 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು. ಇದರೊಂದಿಗೆ ಆರ್‌ಸಿಬಿ 19 ನೇ ಸೀಸನ್‌ನಲ್ಲಿ ಆರನೇ ಗೆಲುವು ಸಾಧಿಸಿದರೆ, ಈ ಸೀಸನ್‌ನಲ್ಲಿ ಡೆಲ್ಲಿ ತನ್ನ ತವರಿನಲ್ಲಿ ಮೂರನೇ ಸೋಲು ಎದುರಿಸಿತು.
76 ರನ್‌ಗಳ ಗುರಿಯನ್ನು ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6.3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ವಿರಾಟ್ ಕೊಹ್ಲಿ 23 ರನ್ ಗಳಿಸಿ ಅಜೇಯರಾಗಿ ಉಳಿದರೆ, ದೇವದತ್ ಪಡಿಕ್ಕಲ್ ಅಜೇಯ 34 ರನ್ ಗಳಿಸಿ ತಂಡಕ್ಕೆ ಸುಲಭ ಗೆಲುವು ತಂದುಕೊಟ್ಟರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4.3 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 50 ರನ್ ಗಳಿಸಿದೆ. ಈಗ ಗೆಲ್ಲಲು ಕೇವಲ 26 ರನ್‌ಗಳ ಅವಶ್ಯಕತೆಯಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 26 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಜಾಕೋಬ್ ಬೆಥೆಲ್ 10 ಎಸೆತಗಳಲ್ಲಿ 20 ರನ್ ಗಳಿಸಿ ಔಟಾದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಎರಡು ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 13 ರನ್ ಗಳಿಸಿದೆ. ಜಾಕೋಬ್ ಬೆಥೆಲ್ 8 ಮತ್ತು ವಿರಾಟ್ ಕೊಹ್ಲಿ 5 ರನ್ ಗಳಿಸಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ 75 ರನ್‌ಗಳಿಗೆ ಆಲೌಟ್ ಆಯಿತು. ಈ ಇನ್ನಿಂಗ್ಸ್‌ನಲ್ಲಿ ಜೋಶ್ ಹ್ಯಾಜಲ್‌ವುಡ್ ನಾಲ್ಕು ವಿಕೆಟ್‌ಗಳನ್ನು ಪಡೆದು ಅತಿ ಹೆಚ್ಚು ವಿಕೆಟ್ ಪಡೆದರು. ಭುವನೇಶ್ವರ್ ಕುಮಾರ್ ಮೂರು ವಿಕೆಟ್ ಪಡೆದರು. ಕೃನಾಲ್ ಪಾಂಡ್ಯ, ಸುಯಾಶ್ ಶರ್ಮಾ ಮತ್ತು ರಸಿಕ್ ದಾರ್ ತಲಾ ಒಂದು ವಿಕೆಟ್ ಪಡೆದರು. ಡೆಲ್ಲಿ ಪರ ಅಭಿಷೇಕ್ ಪೊರೆಲ್ 30 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು, ಮತ್ತು ಬೇರೆ ಯಾವುದೇ ಬ್ಯಾಟ್ಸ್‌ಮನ್ 20 ರನ್‌ಗಳ ಗಡಿ ದಾಟಲಿಲ್ಲ.
ಡೆಲ್ಲಿ ಕ್ಯಾಪಿಟಲ್ಸ್ 71 ರನ್‌ಗಳಿಗೆ ಒಂಬತ್ತನೇ ವಿಕೆಟ್ ಕಳೆದುಕೊಂಡಿತು. ಕುಲ್ದೀಪ್ ಯಾದವ್ 11 ಎಸೆತಗಳಲ್ಲಿ 3 ರನ್ ಗಳಿಸಿ ಔಟಾದರು.
ಡೆಲ್ಲಿ ಕ್ಯಾಪಿಟಲ್ಸ್ 43 ರನ್‌ಗಳಿಗೆ ಏಳನೇ ವಿಕೆಟ್ ಕಳೆದುಕೊಂಡಿತು. 19 ರನ್‌ಗಳ ಹೋರಾಟದ ಇನ್ನಿಂಗ್ಸ್ ಆಡಿದ ಡೇವಿಡ್ ಮಿಲ್ಲರ್ ಔಟಾದರು.
ಡೆಲ್ಲಿ ಕ್ಯಾಪಿಟಲ್ಸ್ ಕೇವಲ 7 ರನ್‌ಗಳಿಗೆ ಐದನೇ ವಿಕೆಟ್ ಕಳೆದುಕೊಂಡಿತು. ನಾಯಕ ಅಕ್ಷರ್ ಪಟೇಲ್ ಕೂಡ ರನ್ ಗಳಿಸದೆ ಔಟಾದರು. ಭುವನೇಶ್ವರ್ ಕುಮಾರ್ ತಮ್ಮ ಮೂರನೇ ವಿಕೆಟ್ ಪಡೆದರು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಇನ್ನಿಂಗ್ಸ್ ಕುಸಿದಿದೆ. ಕೇವಲ ಎರಡು ರನ್‌ಗಳಿಗೆ ಮೂರನೇ ವಿಕೆಟ್ ಕಳೆದುಕೊಂಡಿತು. ರಾಹುಲ್ ನಂತರ ಜೋಶ್ ಹ್ಯಾಜಲ್‌ವುಡ್ ಸಮೀರ್ ರಿಜ್ವಿ ಅವರನ್ನು ಔಟ್ ಮಾಡಿದರು. ಮೊದಲ ಎಸೆತದಲ್ಲೇ ಅವರನ್ನು ಔಟ್ ಮಾಡಿದರು.
ಡೆಲ್ಲಿ ಕ್ಯಾಪಿಟಲ್ಸ್ ಕೇವಲ 2 ರನ್‌ಗಳಿಗೆ ಎರಡನೇ ವಿಕೆಟ್ ಕಳೆದುಕೊಂಡಿತು, ಕೆಎಲ್ ರಾಹುಲ್ 1 ರನ್‌ಗೆ ಔಟಾದರು.
ಐಪಿಎಲ್‌ನಲ್ಲಿ ಚೊಚ್ಚಲ ಪಂದ್ಯವನ್ನಾಡಿದ ಸಾಹಿಲ್ ಪಾರಿಖ್ ಕಳಪೆ ಆರಂಭ ಮಾಡಿದ್ದಾರೆ. ಕೇವಲ ಎರಡು ಎಸೆತಗಳಲ್ಲಿ ರನ್ ಗಳಿಸದೆ ಔಟಾದರು. ಭುವನೇಶ್ವರ್ ಕುಮಾರ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.
ಸಾಹಿಲ್ ಪರಾಖ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ನಿತೀಶ್ ರಾಣಾ, ಸಮೀರ್ ರಿಜ್ವಿ, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಅಕ್ಸರ್ ಪಟೇಲ್(ನಾಯಕ), ದುಷ್ಮಂತ ಚಮೀರಾ, ಕುಲ್ದೀಪ್ ಯಾದವ್, ಟಿ ನಟರಾಜನ್, ಕೈಲ್ ಜೇಮಿಸನ್.
ಇಂಪ್ಯಾಕ್ಟ್ ಪ್ಲೇಯರ್: ಆಕಿಬ್ ನಬಿ, ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ವಿಜಯ್ ಮತ್ತು ಅಭಿಷೇಕ್ ಪೊರೆಲ್.
ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ, ರಸಿಖ್ ಸಲಾಂ.
ಇಂಪ್ಯಾಕ್ಟ್ ಪ್ಲೇಯರ್: ಜಾಕೋಬ್ ಬೆಥೆಲ್, ಜೋರ್ಡಾನ್ ಕಾಕ್ಸ್, ಮಂಗೇಶ್ ಯಾದವ್, ವಿಕಿ ಓಸ್ಟ್ವಾಲ್ ಮತ್ತು ವೆಂಕಟೇಶ್ ಅಯ್ಯರ್.
ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟಿದರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಡೆಲ್ಲಿ ಮೊದಲು ಬ್ಯಾಟಿಂಗ್ ಮಾಡಲಿದೆ.
ಐಪಿಎಲ್ 2026 ರ 39 ನೇ ಪಂದ್ಯವು ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯವು ಸಂಜೆ 7:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 7:00 ಗಂಟೆಗೆ ನಡೆಯಲಿದೆ.
Published On - 6:27 pm, Mon, 27 April 26