DC vs GG Live Score, WPL 2023: ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ಗುಜರಾತ್ ಜೈಂಟ್ಸ್ (Gujarat Gaints) ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 147 ರನ್ ಕಲೆಹಾಕಿತು. ಈ ಸುಲಭ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 136 ರನ್ಗಳಿಗೆ ಸರ್ವಪತನ ಕಾಣುವುದರೊಂದಿಗೆ ಗುಜರಾತ್ ಜೈಂಟ್ಸ್ ತಂಡವು 11 ರನ್ಗಳ ರೋಚಕ ಜಯವನ್ನು ತನ್ನದಾಗಿಸಿಕೊಂಡಿತು.
ಗುಜರಾತ್ ಜೈಂಟ್ಸ್- 147/4 (20)
ಡೆಲ್ಲಿ ಕ್ಯಾಪಿಟಲ್ಸ್- 136 (18.4)
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸ್ಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ರಾಧಾ ಯಾದವ್, ಶಿಖಾ ಪಾಂಡೆ, ಪೂನಂ ಯಾದವ್.
ಗುಜರಾತ್ ಜೈಂಟ್ಸ್ (ಪ್ಲೇಯಿಂಗ್ XI): ಸೋಫಿಯಾ ಡಂಕ್ಲಿ, ಲಾರಾ ವೊಲ್ವಾರ್ಡ್ಟ್, ಹರ್ಲೀನ್ ಡಿಯೋಲ್, ಆಶ್ಲೀ ಗಾರ್ಡ್ನರ್, ದಯಾಲನ್ ಹೇಮಲತಾ, ಸ್ನೇಹ ರಾಣಾ(ನಾಯಕಿ), ಸುಷ್ಮಾ ವರ್ಮಾ(ವಿಕೆಟ್ ಕೀಪರ್), ಕಿಮ್ ಗಾರ್ತ್, ತನುಜಾ ಕನ್ವರ್, ಮಾನ್ಸಿ ಜೋಶಿ, ಅಶ್ವನಿ ಕುಮಾರಿ.
ಈಗಾಗಲೇ 8 ಪಾಯಿಂಟ್ ಕಲೆಹಾಕಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಮುಂದಿನ ಹಂತಕ್ಕೇರುವುದನ್ನು ಖಚಿತಪಡಿಸಿಕೊಳ್ಳಬಹುದು. ಮತ್ತೊಂದೆಡೆ ಗುಜರಾತ್ ಜೈಂಟ್ಸ್ ತಂಡಕ್ಕೆ ಈ ಪಂದ್ಯವು ನಿರ್ಣಾಯಕವಾಗಿದೆ. ಏಕೆಂದರೆ ಈಗಾಗಲೇ ಆಡಿರುವ 5 ಪಂದ್ಯಗಳಲ್ಲಿ 4 ರಲ್ಲಿ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿದೆ.
ಗುಜರಾತ್ ಜೈಂಟ್ಸ್ ತಂಡ: ಸಬ್ಬಿನೇನಿ ಮೇಘನಾ, ಸೋಫಿಯಾ ಡಂಕ್ಲಿ, ಹರ್ಲೀನ್ ಡಿಯೋಲ್, ಅನ್ನಾಬೆಲ್ ಸದರ್ಲ್ಯಾಂಡ್, ಆಶ್ಲೀಗ್ ಗಾರ್ಡ್ನರ್, ದಯಾಲನ್ ಹೇಮಲತಾ, ಸ್ನೇಹ ರಾಣಾ(ನಾಯಕಿ), ಸುಷ್ಮಾ ವರ್ಮಾ(ವಿಕೆಟ್ ಕೀಪರ್), ಕಿಮ್ ಗಾರ್ತ್, ತನುಜಾ ಕನ್ವರ್, ಮಾನ್ಸಿ ಜೋಶಿ, ಜಾರ್ಜಿಯಾ ವೇರ್ಹ್ಯಾಮ್, ಮೋನಿಕಾ ಪಟೇಲ್, ಅಶ್ವನಿ ಕುಮಾರಿ, ಹರ್ಲಿ ಗಾಲಾ, ಶಬ್ನಮ್ ಎಂಡಿ ಶಕಿಲ್, ಪರುನಿಕಾ ಸಿಸೋಡಿಯಾ, ಲಾರಾ ವೋಲ್ವಾರ್ಡ್ಟ್
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರೋಡ್ರಿಗಸ್, ಮರಿಝನ್ನೆ ಕಪ್, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ರಾಧಾ ಯಾದವ್, ಶಿಖಾ ಪಾಂಡೆ, ಟಾರಾ ನೋರಿಸ್, ಜಸಿಯಾ ಅಖ್ತರ್, ಮಿನ್ನು ಮಣಿ, ಅಪರ್ಣಾ ಮೊಂಡಲ್, ಟೈಟಾಸ್ ಸಾಧು, ಸ್ನೇಹಾ ದೀಪ್ತಿ, ಲಾರಾ ಹ್ಯಾರಿಸ್, ಪೂನಂ ಯಾದವ್.
11 ರನ್ಗಳಿಂದ ಗೆದ್ದು ಬೀಗಿದ ಗುಜರಾತ್ ಜೈಂಟ್ಸ್
ಕಿಮ್ ಗಾರ್ತ್ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿದ ಅರುಂಧತಿ ರೆಡ್ಡಿ (25)
12 ಎಸೆತಗಳಲ್ಲಿ 13 ರನ್ಗಳ ಅವಶ್ಯಕತೆ
ಕಿಮ್ ಗಾರ್ತ್ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಅರುಂಧತಿ
3 ಓವರ್ಗಳಲ್ಲಿ 20 ರನ್ಗಳ ಅವಶ್ಯಕತೆ
ಡೆಲ್ಲಿ ಕ್ಯಾಪಿಟಲ್ಸ್ಗೆ 4 ಓವರ್ಗಳಲ್ಲಿ 33 ರನ್ಗಳ ಅವಶ್ಯಕತೆ
ಕ್ರೀಸ್ನಲ್ಲಿ ಅರುಂಧತಿ – ಶಿಖಾ ಪಾಂಡೆ ಬ್ಯಾಟಿಂಗ್
ಹರ್ಲೀನ್ ಡಿಯೋಲ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಬೌಂಡರಿ ಬಾರಿಸಿದ ಅರುಂಧತಿ
ತನುಜಾ ಕನ್ವರ್ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಸುಷ್ಮಾ ವರ್ಮಾ (1)
ಅಶ್ವಿನ್ ಕುಲ್ಕರ್ಣಿಯ ಅತ್ಯುತ್ತಮ ಫೀಲ್ಡಿಂಗ್…ವಿಕೆಟ್ಗೆ ಡೈರೆಕ್ಟ್ ಥ್ರೋ…ಮರಿಝನ್ನೆ ಕಪ್ (36) ರನೌಟ್
ಗಾರ್ಡ್ನರ್ ಎಸೆತದಲ್ಲಿ ತಾನಿಯಾ ಭಾಟಿಯಾ (1) ಕ್ಲೀನ್ ಬೌಲ್ಡ್
ಹರ್ಲೀನ್ ಎಸೆತದಲ್ಲಿ ಲಾಂಗ್ ಆನ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಮರಿಝನ್ನೆ ಕಪ್
ಹರ್ಲೀನ್ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಮರಿಝನ್ನೆ ಕಪ್
ಹರ್ಲೀನ್ ಡಿಯೋಲ್ ಎಸೆತದಲ್ಲಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಜೆಸ್ ಜೊನಾಸನ್ (4)
ಕ್ರೀಸ್ನಲ್ಲಿ ಮರಿಝನ್ನೆ ಕಪ್ ಹಾಗೂ ಜೆಸ್ ಜೊನಾಸನ್ ಬ್ಯಾಟಿಂಗ್
ಡೆಲ್ಲಿ ಕ್ಯಾಪಿಟಲ್ಸ್ಗೆ ಗೆಲ್ಲಲು 10 ಓವರ್ಗಳಲ್ಲಿ 70 ರನ್ಗಳ ಅವಶ್ಯಕತೆ
ಕಿಮ್ ಗಾರ್ತ್ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಜೆಮಿಮಾ ರೋಡಿಗ್ರಸ್ (1)
ಫೀಲ್ಡರ್ ಕೈಗೆ ಚೆಂಡು ನೀಡಿ ರನ್ ಓಡಿದ ಜೆಮಿಮಾ… ವಿಕೆಟ್ ಕೀಪರ್ಗೆ ನೇರ ಥ್ರೋ ಮಾಡಿದ ಫೀಲ್ಡರ್… ಅಲೀಸ್ ಕ್ಯಾಪ್ಸಿ (22) ರನೌಟ್
ಸ್ನೇಹ್ ರಾಣಾ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರ ನಡೆದ ಮೆಗ್ ಲ್ಯಾನಿಂಗ್ (18)
ಗಾರ್ಡ್ನರ್ ಎಸೆತದಲ್ಲಿ ಬ್ಯಾಕ್ ಟು ಬ್ಯಾಕ್ 2 ಭರ್ಜರಿ ಸಿಕ್ಸ್ ಸಿಡಿಸಿದ ಅಲೀಸ್ ಕ್ಯಾಪ್ಸಿ
ಕ್ರೀಸ್ನಲ್ಲಿ ಅಲೀಸ್ ಕ್ಯಾಪ್ಸಿ – ಮೆಗ್ ಲ್ಯಾನಿಂಗ್ ಬ್ಯಾಟಿಂಗ್
ತನುಜಾ ಕನ್ವರ್ ಎಸೆತದಲ್ಲಿ ಬೌಲ್ಡ್ ಆಗಿ ಹೊರ ನಡೆದ ಶಫಾಲಿ ವರ್ಮಾ (8)
ಡೆಲ್ಲಿ ಕ್ಯಾಪಿಟಲ್ಸ್ಗೆ 148 ರನ್ಗಳ ಗುರಿ ನೀಡಿದ ಗುಜರಾತ್ ಜೈಂಟ್ಸ್
ಜೆಸ್ ಜೊನಾಸನ್ ಓವರ್ನಲ್ಲಿ 2 ಬೌಂಡರಿ ಬಾರಿಸಿದ ಗಾರ್ಡ್ನರ್
32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಗಾರ್ಡ್ನರ್
ಅರುಂಧತಿ ಎಸೆತದಲ್ಲಿ ಲೌರಾ (57) ಬೌಲ್ಡ್….ಗುಜರಾತ್ ಜೈಂಟ್ಸ್ 3ನೇ ವಿಕೆಟ್ ಪತನ
ಅರುಂಧತಿ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಗಾರ್ಡ್ನರ್
ಕ್ರೀಸ್ನಲ್ಲಿ ಗಾರ್ಡ್ನರ್ – ಲೌರಾ ಬ್ಯಾಟಿಂಗ್
ಜೆಸ್ ಜೊನಾಸನ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಭರ್ಜರಿ ಸಿಕ್ಸ್ ಸಿಡಿಸಿದ ಲೌರಾ
ರಾಧಾ ಯಾದವ್ ಎಸೆತದಲ್ಲಿ ಲಾಂಗ್ ಆನ್ನತ್ತ ಭರ್ಜರಿ ಬೌಂಡರಿ ಬಾರಿಸಿದ ಗಾರ್ಡ್ನರ್
ಶಿಖಾ ಪಾಂಡೆ ಎಸೆತದಲ್ಲಿ ಡೀಪ್ ಕವರ್ನತ್ತ ಬೌಂಡರಿ ಬಾರಿಸಿದ ಗಾರ್ಡ್ನರ್
ಕ್ರೀಸ್ನಲ್ಲಿ ಲೌ್ರಾ – ಗಾರ್ಡ್ನರ್ ಬ್ಯಾಟಿಂಗ್
ಜೆಸ್ ಜೊನಾಸನ್ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ಔಟಾದ ಹರ್ಲೀನ್ ಡಿಯೋಲ್ (31)
9 ಓವರ್ಗಳಲ್ಲಿ ಅರ್ಧಶತಕ ಪೂರೈಸಿದ ಗುಜರಾತ್ ಜೈಂಟ್ಸ್
ಕ್ರೀಸ್ನಲ್ಲಿ ಲೌರಾ – ಹರ್ಲೀನ್ ಬ್ಯಾಟಿಂಗ್
ರಾಧಾ ಯಾದವ್ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಹರ್ಲೀನ್ ಡಿಯೋಲ್
ಮೊದಲ 6 ಓವರ್ಗಳಲ್ಲಿ ಕೇವಲ 32 ರನ್ ಕಲೆಹಾಕಿದ ಗುಜರಾತ್ ಜೈಂಟ್ಸ್
ಕ್ರೀಸ್ನಲ್ಲಿ ಲೌರಾ – ಹರ್ಲೀನ್ ಡಿಯೋಲ್ ಬ್ಯಾಟಿಂಗ್
ಹರ್ಲೀನ್ ಡಿಯೋಲ್ – ಲೌರಾ ಬ್ಯಾಟಿಂಗ್
ಮರಿಝನ್ನೆ ಕಪ್ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ಹೊರ ನಡೆದ ಸೋಫಿಯಾ ಡಂಕ್ಲಿ (4)
ಗುಜರಾತ್ ಜೈಂಟ್ಸ್ (ಪ್ಲೇಯಿಂಗ್ XI): ಸೋಫಿಯಾ ಡಂಕ್ಲಿ, ಲಾರಾ ವೊಲ್ವಾರ್ಡ್ಟ್, ಹರ್ಲೀನ್ ಡಿಯೋಲ್, ಆಶ್ಲೀ ಗಾರ್ಡ್ನರ್, ದಯಾಲನ್ ಹೇಮಲತಾ, ಸ್ನೇಹ ರಾಣಾ(ನಾಯಕಿ), ಸುಷ್ಮಾ ವರ್ಮಾ(ವಿಕೆಟ್ ಕೀಪರ್), ಕಿಮ್ ಗಾರ್ತ್, ತನುಜಾ ಕನ್ವರ್, ಮಾನ್ಸಿ ಜೋಶಿ, ಅಶ್ವನಿ ಕುಮಾರಿ.
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸ್ಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ರಾಧಾ ಯಾದವ್, ಶಿಖಾ ಪಾಂಡೆ, ಪೂನಂ ಯಾದವ್.
ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
Hello from the Brabourne Stadium – CCI ?
A cracking encounter coming up!
The @DelhiCapitals take on @GujaratGiants in Match 1⃣4⃣ of the #TATAWPL ??#DCvGG pic.twitter.com/4WOLaUx93v
— Women’s Premier League (WPL) (@wplt20) March 16, 2023
ಟಾಸ್ ಪ್ರಕ್ರಿಯೆ: 7 ಗಂಟೆಗೆ
ಪಂದ್ಯ ಆರಂಭ: 7.30 ಕ್ಕೆ
ಸ್ಥಳ: ಬ್ರಬೋರ್ನ್ ಸ್ಟೇಡಿಯಂ, ಮುಂಬೈ
Published On - 6:32 pm, Thu, 16 March 23