AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ, ಕೊಹ್ಲಿ, ರೋಹಿತ್ ಪುತ್ರಿಯರ ಬಗ್ಗೆ ಅಶ್ಲೀಲವಾಗಿ ಕಾಮೆಂಟ್; FIR ದಾಖಲಿಸಿದ ದೆಹಲಿ ಪೊಲೀಸ್

ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ, ಹಾಲಿ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರ ಪುತ್ರಿಯರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವಾಚ್ಯ ಪದ ಬಳಸಿ ಕೊಳಕು ಕಾಮೆಂಟ್ ಮಾಡುವವರಿಗೆ ಕಡಿವಾಣ ಹಾಕಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಧೋನಿ, ಕೊಹ್ಲಿ, ರೋಹಿತ್ ಪುತ್ರಿಯರ ಬಗ್ಗೆ ಅಶ್ಲೀಲವಾಗಿ ಕಾಮೆಂಟ್; FIR ದಾಖಲಿಸಿದ ದೆಹಲಿ ಪೊಲೀಸ್
ಪುತ್ರಿಯರೊಂದಿಗೆ ಟೀಂ ಇಂಡಿಯಾ ಕ್ರಿಕೆಟಿಗರು
TV9 Web
| Updated By: ಪೃಥ್ವಿಶಂಕರ|

Updated on:Jan 16, 2023 | 3:11 PM

Share

ಟೀಂ ಇಂಡಿಯಾ (Team India) ಮಾಜಿ ನಾಯಕ ಎಂಎಸ್ ಧೋನಿ, ಹಾಲಿ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ (MS Dhoni, Rohit Sharma and Virat Kohli ) ಅವರ ಪುತ್ರಿಯರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವಾಚ್ಯ ಪದ ಬಳಸಿ ಕೊಳಕು ಕಾಮೆಂಟ್ ಮಾಡುವವರಿಗೆ ಕಡಿವಾಣ ಹಾಕಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಕಾಮೆಂಟ್ ಮಾಡಿದವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೂಡ ಆರಂಭಿಸಿದ್ದಾರೆ. ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರ ಟ್ವೀಟ್ ನಂತರ ದೆಹಲಿ ಪೊಲೀಸರು ಕ್ರಮ ಕೈಗೊಂಡು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಕೊಹ್ಲಿ ಹಾಗೂ ಧೋನಿ ಪುತ್ರಿಯರ ವಿರುದ್ಧ ಅಶ್ಲೀಲವಾಗಿ ಕಾಮೆಂಟ್​ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಸ್ವಾತಿ ಮಲಿವಾಲ್ ನೋಟಿಸ್ ಕೂಡ ನೀಡಿದ್ದರು.ಇದರೊಂದಿಗೆ ಟ್ವಿಟರ್‌ ಸಂಸ್ಥೆಗೆ ಖಾತೆಗಳ ಬಗ್ಗೆ ಮಾಹಿತಿ ನೀಡುವಂತೆ ನೋಟಿಸ್ ಕೂಡ ಜಾರಿ ಮಾಡಲಾಗಿದೆ.

ಕ್ರಿಕೆಟಿಗರ ಹೆಣ್ಣುಮಕ್ಕಳ ಮೇಲೆ ಅಶ್ಲೀಲ ಕಾಮೆಂಟ್‌ಗಳು

ಇತ್ತೀಚೆಗೆ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಮಗಳ ಎರಡನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿದ್ದರು. ಬಳಿಕ ಬರ್ತ್​ ಡೇ ಸಂಭ್ರಮದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆದರೆ ಕೊಹ್ಲಿ ದಂಪತಿಗಳು ಹಂಚಿಕೊಂಡಿದ್ದ ಫೋಟೋ ಬಗ್ಗೆ ಕೆಲವು ನೆಟ್ಟಿಗರು ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದರು. ಜೊತೆಗೆ ಧೋನಿ ಹಾಗೂ ರೋಹಿತ್ ಶರ್ಮಾ ಪುತ್ರಿಯರ ಫೋಟೋಗಳಿಗೂ ಇದೇ ರೀತಿಯಾಗಿ ಕಾಮೆಂಟ್ ಮಾಡಲಾಗಿತ್ತು. ಈ ರೀತಿಯ ಹೀನ ಕೃತ್ಯವನ್ನು ಗಮನಿಸಿದ ದೆಹಲಿಯ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್, ಸ್ಟಾರ್ ಕ್ರಿಕೆಟಿಗರ ಪುತ್ರಿಯರ ಫೋಟೋಗಳ ಮೇಲೆ ಕೆಲವು ನೆಟ್ಟಿಗರು ಅಶ್ಲೀಲವಾಗಿ ಕಾಮೆಂಟ್‌ ಮಾಡುತ್ತಿದ್ದಾರೆ. ಹೀಗಾಗಿ ಇವರ ವಿರುದ್ಧ ದೆಹಲಿ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್ ಮಾಡಿದ್ದರು.

ವಿಶೇಷ ಠಾಣಾ ಘಟಕ ಪ್ರಕರಣ ದಾಖಲಿಸಿಕೊಂಡಿದೆ

ಅಲ್ಲದೆ ಈ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ನೋಟಿಸ್ ಕಳುಹಿಸುತ್ತಿರುವುದಾಗಿ ಸ್ವಾತಿ ಮಲಿವಾಲ್ ಹೇಳಿಕೊಂಡಿದ್ದರು. ಸ್ವಾತಿ ಮಲಿವಾಲ್ ಅವರ ನೋಟಿಸ್ ಸ್ವೀಕರಿಸಿದ ನಂತರ, ವಿಶೇಷ ಸೆಲ್‌ನ ಐಎಫ್‌ಎಸ್‌ಒ ಘಟಕವು ಪ್ರಕರಣವನ್ನು ದಾಖಲಿಸಿದೆ. ಪ್ರಕರಣ ದಾಖಲಾದ ಬಳಿಕ ಸ್ವಾತಿ ಟ್ವೀಟ್ ಮಾಡಿದ್ದು, ಶೀಘ್ರದಲ್ಲೇ ಆರೋಪಿಗಳು ಕಂಬಿ ಹಿಂದೆ ಬೀಳಲಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Mon, 16 January 23