Ranji Trophy: ಟಾಸ್ ಗೆದ್ದ ದೆಹಲಿ: 12 ವರ್ಷಗಳ ಬಳಿಕ ಕಣಕ್ಕಿಳಿದ ವಿರಾಟ್ ಕೊಹ್ಲಿ
Virat Kohli Ranji Trophy: ರಣಜಿ ಟೂರ್ನಿಯ ದ್ವಿತೀಯಾರ್ಧದ 2ನೇ ಪಂದ್ಯದಲ್ಲಿ ದೆಹಲಿ ಹಾಗೂ ರೈಲ್ವೇಸ್ ತಂಡಗಳು ಮುಖಾಮುಖಿಯಾಗಿವೆ. ಇಂದಿನಿಂದ (ಜ.30) ಶುರುವಾಗಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕಣಕ್ಕಿಳಿದಿರುವುದು ವಿಶೇಷ. ಆದರೆ ಈ ಪಂದ್ಯದಿಂದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹೊರಗುಳಿದಿದ್ದಾರೆ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಗ್ರೂ-ಡಿ ಪಂದ್ಯದಲ್ಲಿ ದೆಹಲಿ ಹಾಗೂ ರೈಲ್ವೇಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದೆಹಲಿ ತಂಡದ ನಾಯಕ ಆಯುಷ್ ಬದೋನಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಪಂದ್ಯಕ್ಕಾಗಿ ಪ್ರಕಟಿಸಿದ ಪ್ಲೇಯಿಂಗ್ ಇಲೆವೆನ್ನಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ.
ಇದರೊಂದಿಗೆ 12 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಮತ್ತೆ ರಣಜಿ ಪಂದ್ಯದಲ್ಲಿ ಕಣಕ್ಕಿಳಿದಂತಾಗಿದೆ. ಇದಕ್ಕೂ ಮುನ್ನ ಕೊಹ್ಲಿ ದೆಹಲಿ ಪರ ಪಂದ್ಯವಾಡಿದ್ದು 2012 ರಲ್ಲಿ. ಉತ್ತರ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಂಡಿದ್ದ ವಿರಾಟ್ ಕೊಹ್ಲಿ ಮೊದಲ ಇನಿಂಗ್ಸ್ನಲ್ಲಿ 14 ಮತ್ತು ದ್ವಿತೀಯ ಇನಿಂಗ್ಸ್ನಲ್ಲಿ 43 ರನ್ ಬಾರಿಸಿದ್ದರು. ಇದಾದ ಬಳಿಕ ಅವರು ಒಮ್ಮೆಯೂ ರಣಜಿ ಪಂದ್ಯವಾಡಿರಲಿಲ್ಲ.
ಇದೀಗ ಬರೋಬ್ಬರಿ 12 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಮತ್ತೆ ದೇಶೀಯ ಅಂಗಳದ ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತ ದೇಶೀಯ ಅಂಗಳಕ್ಕೆ ಕೊಹ್ಲಿಯ ಆಗಮನದೊಂದಿಗೆ ಅರುಣ್ ಜೇಟ್ಲಿ ಸ್ಟೇಡಿಯಂಗೆಅಭಿಮಾನಿಗಳ ಸಾಗರವೇ ಹರಿದು ಬಂದಿದೆ.
ದೆಹಲಿ ಸ್ಟೇಡಿಯಂ ಹೊರಗೆ ಅಭಿಮಾನಿಗಳು:
🚨 The craze for @imVkohli is truly amazing!
Fans have gathered in numbers at the Arun Jaitley Stadium for the Delhi vs Railways match!@rohitjuglan #ranjitrophy2025 pic.twitter.com/UHpe3leclJ
— RevSportz Global (@RevSportzGlobal) January 30, 2025
ರಿಷಭ್ ಪಂತ್ ಅಲಭ್ಯ:
ರೈಲ್ವೇಸ್ ವಿರುದ್ಧದ ಪಂದ್ಯದಿಂದ ದೆಹಲಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹೊರಗುಳಿದಿದ್ದಾರೆ. ಸೌರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಪಂತ್ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ಚಾಂಪಿಯನ್ಸ್ ಟ್ರೋಫಿಗಾಗಿ ಸಿದ್ಧತೆ. ಮುಂಬರುವ ಚಾಂಪಿಯನ್ಸ್ ಟ್ರೋಫಿಗಾಗಿ ಟೀಮ್ ಇಂಡಿಯಾ ಆಟಗಾರರು ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಹೀಗಾಗಿ ಪಂತ್ ದೆಹಲಿ ತಂಡದಿಂದ ಹೊರಗುಳಿದಿದ್ದಾರೆ.
ಉಭಯ ತಂಡಗಳ ಪ್ಲೇಯಿಂಗ್ 11:
ದೆಹಲಿ (ಪ್ಲೇಯಿಂಗ್ XI): ಅರ್ಪಿತ್ ರಾಣಾ, ಸನತ್ ಸಾಂಗ್ವಾನ್, ವಿರಾಟ್ ಕೊಹ್ಲಿ, ಯಶ್ ಧುಲ್, ಆಯುಷ್ ಬದೋನಿ (ನಾಯಕ), ಪ್ರಣವ್ ರಾಜುವಂಶಿ (ವಿಕೆಟ್ ಕೀಪರ್), ಸುಮಿತ್ ಮಾಥುರ್, ಶಿವಂ ಶರ್ಮಾ, ನವದೀಪ್ ಸೈನಿ, ಮನಿ ಗ್ರೇವಾಲ್, ಸಿದ್ಧಾಂತ್ ಶರ್ಮಾ.
ಇದನ್ನೂ ಓದಿ: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ವಿಶೇಷ ದಾಖಲೆ ಬರೆದ ಫಾಫ್ ಡುಪ್ಲೆಸಿಸ್
ರೈಲ್ವೇಸ್ (ಪ್ಲೇಯಿಂಗ್ XI): ಅಂಚಿತ್ ಯಾದವ್, ವಿವೇಕ್ ಸಿಂಗ್, ಸೂರಜ್ ಅಹುಜಾ (ನಾಯಕ), ಉಪೇಂದ್ರ ಯಾದವ್ (ವಿಕೆಟ್ ಕೀಪರ್), ಮೊಹಮ್ಮದ್ ಸೈಫ್, ಭಾರ್ಗವ್ ಮೆರಾಯ್, ಕರ್ಣ್ ಶರ್ಮಾ, ರಾಹುಲ್ ಶರ್ಮಾ, ಹಿಮಾಂಶು ಸಾಂಗ್ವಾನ್, ಅಯಾನ್ ಚೌಧರಿ, ಕುನಾಲ್ ಯಾದವ್.