AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deodhar Trophy 2023: ರಿಂಕು ಸಿಂಗ್ ಅರ್ಧಶತಕ ವ್ಯರ್ಥ: ಗೆದ್ದು ಬೀಗಿದ ಪೂರ್ವ ವಲಯ

East Zone vs Central Zone: ದೇಶೀಯ ಅಂಗಳದಲ್ಲಿ ನಡೆಯುತ್ತಿರುವ ದೇವಧರ್ ಟ್ರೋಫಿ ಟೂರ್ನಿಯಲ್ಲಿ ಕೇಂದ್ರ ವಲಯ ವಿರುದ್ಧದ ಪಂದ್ಯದಲ್ಲಿ ಪೂರ್ವ ವಲಯ ತಂಡವು ಭರ್ಜರಿ ಜಯ ಸಾಧಿಸಿದೆ.

Deodhar Trophy 2023: ರಿಂಕು ಸಿಂಗ್ ಅರ್ಧಶತಕ ವ್ಯರ್ಥ: ಗೆದ್ದು ಬೀಗಿದ ಪೂರ್ವ ವಲಯ
Rinku Singh
TV9 Web
| Updated By: ಝಾಹಿರ್ ಯೂಸುಫ್|

Updated on: Jul 24, 2023 | 6:15 PM

Share

Deodhar Trophy 2023: ಪುದುಚೇರಿಯಲ್ಲಿ ನಡೆಯುತ್ತಿರುವ ದೇವಧರ್ ಟ್ರೋಫಿಯ 2ನೇ ಪಂದ್ಯದಲ್ಲಿ ಕೇಂದ್ರ ವಲಯದ ವಿರುದ್ಧ ಪೂರ್ವ ವಲಯ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪೂರ್ವ ವಲಯ ತಂಡದ ನಾಯಕ ಸೌರಭ್ ತಿವಾರಿ ಕೇಂದ್ರ ವಲಯವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲ ಬ್ಯಾಟ್ ಮಾಡಿದ ಕೇಂದ್ರ ವಲಯ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಆಟಗಾರ ಮಾಧವ್ ಕೌಶಿಕ್ 13 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ಯಶ್ ದುಬೆ 17 ರನ್​ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿದರು.

ಇನ್ನು ತಂಡದ ನಾಯಕ ವೆಂಕಟೇಶ್ ಅಯ್ಯರ್ (8) ರನ್ನು ಬೇಗನೆ ಔಟ್ ಮಾಡುವಲ್ಲಿ ಶಹಬಾಝ್ ಅಹ್ಮದ್ ಯಶಸ್ವಿಯಾದರು. ಕೇವಲ 68 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕೇಂದ್ರ ವಲಯಕ್ಕೆ ಈ ಹಂತದಲ್ಲಿ ರಿಂಕು ಸಿಂಗ್ ಆಸರೆಯಾದರು.

ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ರಿಂಕು ಸಿಂಗ್ ನಿಧಾನಗತಿಯ ಬ್ಯಾಟಿಂಗ್​ಗೆ ಒತ್ತು ನೀಡಿದರು. ಅಲ್ಲದೆ ಒಂದೊಂದೇ ರನ್​ ಕಲೆಹಾಕುತ್ತಾ ತಂಡದ ಮೊತ್ತವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಇದರ ನಡುವೆ ಅರ್ಧಶತಕ ಪೂರೈಸಿದ ರಿಂಕು ಸಿಂಗ್ 63 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 54 ರನ್​ಗಳಿಸಿ ಮುರಾಸಿಂಗ್​ಗೆ ವಿಕೆಟ್​ ಒಪ್ಪಿಸಿದರು.

ಇತ್ತ ರಿಂಕು ವಿಕೆಟ್ ಸಿಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಪೂರ್ವ ವಲಯ ಬೌಲರ್​ಗಳು ಕೇಂದ್ರ ವಲಯ ತಂಡವನ್ನು 50 ಓವರ್​ಗಳಲ್ಲಿ 207 ರನ್​ಗಳಿಗೆ ಆಲೌಟ್ ಮಾಡಿದರು. ಪೂರ್ವ ವಲಯ ಪರ ಮುರಾಸಿಂಗ್, ಆಕಾಶ್ ದೀಪ್ ಹಾಗೂ ಶಹಬಾಝ್ ಅಹ್ಮದ್ ತಲಾ 3 ವಿಕೆಟ್ ಕಬಳಿಸಿ ಮಿಂಚಿದರು.

ಇನ್ನು 208 ರನ್​ಗಳ ಸುಲಭ ಗುರಿ ಪಡೆದ ಪೂರ್ವ ವಲಯ ತಂಡಕ್ಕೆ ಅಭಿಮನ್ಯು ಈಶ್ವರನ್ ಹಾಗೂ ಉತ್ಕರ್ಷ್ ಸಿಂಗ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 91 ರನ್​ ಪೇರಿಸಿ ಅಭಿಮನ್ಯು ಈಶ್ವರನ್ (38) ಔಟಾದರು.

ಮತ್ತೊಂದೆಡೆ ಆಕರ್ಷಕ ಅರ್ಧಶತಕ ಬಾರಿಸಿದ ಉತ್ಕರ್ಷ್ ಸಿಂಗ್ 104 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 89 ರನ್ ಕಲೆಹಾಕಿದರು. ಈ ಹಂತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಆದಿತ್ಯಗೆ ವಿಕೆಟ್ ಒಪ್ಪಿಸಿ ಶತಕ ವಂಚಿತರಾದರು.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದದ ಸುಭ್ರಾಂಶು ಸೇನಾಪತಿ ಅಜೇಯ 33 ರನ್ ಬಾರಿಸುವ ಮೂಲಕ 46.1 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಪೂರ್ವ ವಲಯ ತಂಡವು 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಪೂರ್ವ ವಲಯ ಪ್ಲೇಯಿಂಗ್ 11: ವಿರಾಟ್ ಸಿಂಗ್ , ಸೌರಭ್ ತಿವಾರಿ (ನಾಯಕ) , ಅಭಿಮನ್ಯು ಈಶ್ವರನ್ , ಸುಭ್ರಾಂಶು ಸೇನಾಪತಿ , ಕುಮಾರ್ ಕುಶಾಗ್ರಾ (ವಿಕೆಟ್ ಕೀಪರ್) , ಶಹಬಾಝ್ ಅಹ್ಮದ್ , ಮಣಿಶಂಕರ್ ಮುರಾಸಿಂಗ್ , ಆಕಾಶ್ ದೀಪ್ , ಅವಿನೋವ್ ಚೌಧರಿ , ಮುಖ್ತಾರ್ ಹುಸೇನ್ , ಉತ್ಕರ್ಷ್ ಸಿಂಗ್.

ಇದನ್ನೂ ಓದಿ: R Ashwin: ಅಶ್ವಿನ್ ಈಗ ಭಾರತದ 2ನೇ ಯಶಸ್ವಿ ಬೌಲರ್..!

ಕೇಂದ್ರ ವಲಯ ಪ್ಲೇಯಿಂಗ್ 11: ವೆಂಕಟೇಶ್ ಅಯ್ಯರ್ (ನಾಯಕ) , ಆರ್ಯನ್ ಜುಯಲ್ (ವಿಕೆಟ್ ಕೀಪರ್) , ಮಾಧವ್ ಕೌಶಿಕ್ , ರಿಂಕು ಸಿಂಗ್ , ಯಶ್ ದುಬೆ , ಶಿವಂ ಮಾವಿ , ಶಿವಂ ಚೌಧರಿ , ಕರ್ಣ್ ಶರ್ಮಾ , ಆದಿತ್ಯ ಸರ್ವತೆ , ಅನಿಕೇತ್ ಚೌಧರಿ , ಯಶ್ ಠಾಕೂರ್.

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ